ಚಿಕ್ಕಬಳ್ಳಾಪುರ | 58% ಕೃಷಿಸಾಲ ಕಡಿತ, ಕಿರುಸಾಲಗಾರರಿಂದ ಕಿರುಕುಳ; ಜ.29ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

Date:

ಕೇಂದ್ರ ಸರಕಾರ ರಾಜ್ಯದ ಬ್ಯಾಂಕುಗಳಿಗೆ ಕೊಡುತ್ತಿದ್ದ ಶೇ.58ರಷ್ಟು ಕೃಷಿಸಾಲವನ್ನು ಕಡಿತಗೊಳಿಸಿರುವ ಹಿನ್ನೆಲೆ ರಾಜ್ಯದ ರೈತರು ಸಾಲ ವಂಚಿತರಾಗುತ್ತಿದ್ದಾರೆ. ಇದರಿಂದ ಕಿರುಸಾಲಗಳ ಮೊರೆ ಹೋಗುತ್ತಿರುವ ರೈತಾಪಿ ವರ್ಗ ಸಾಲದ ಬಡ್ಡಿ ಕಟ್ಟಲಾಗದೇ ಆತ್ಮಹತ್ಯೆ ಹಾದಿ ತುಳಿಯುವಂತ ದುಸ್ಥಿತಿ ಎದುರಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಮೀ ನಾರಾಯಣ ರೆಡ್ಡಿ ಆತಂಕಗೊಂಡರು.

ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ.58ರಷ್ಟು ಕೃಷಿ ಸಾಲವನ್ನು ಕೇಂದ್ರ ಕಡಿತಗೊಳಿಸಿದ್ದು, ಉಳಿದ ಶೇ.42ರಷ್ಟು ಸಾಲವನ್ನು ಹಣವಂತರ ಪಾಲಾಗುತ್ತಿದೆ. ನಬಾರ್ಡ್ ಇಂದ ಕಳೆದ ವರ್ಷ ರಾಜ್ಯಕ್ಕೆ 5,600 ಕೋಟಿ ರೂ. ಹಣ ಬಂದಿತ್ತು. ಈ ವರ್ಷ ಕೇವಲ 2,340 ಕೋಟಿ ರೂ. ಬಂದಿದೆ. ಇದರಿಂದ 5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಹಕಾರಿ ಸಂಸ್ಥೆಗಳು ನೀಡುತ್ತಿದ್ದ ಅಲ್ಪಾವಧಿ ಸಾಲಕ್ಕೆ ಕುತ್ತು ಬಂದಿದೆ. ರಿಯಾಯಿತಿ ದರದಲ್ಲಿ 15 ಲಕ್ಷದವರೆಗೆ ದೊರೆಯುತ್ತಿದ್ದ ಮಧ್ಯಮ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೂ ಹೊಡೆತ ಬೀಳುತ್ತಿದೆ ಎಂದು ಹೇಳಿದರು.

ಕಳೆದ 8 ವರ್ಷಗಳ ಹಿಂದೆಯೇ ವೀರೇಂದ್ರ ಹೆಗ್ಗಡೆಯವರ ಧರ್ಮಸ್ಥಳ ಸಂಘ ಸಂಸ್ಥೆಗಳ ಸಾಲವನ್ನು ಪ್ರಗತಿಪರ ಸಂಘಟನೆಗಳು ವಿರೋಧಿಸಿದ್ದವು. ಆದರೆ, ಪ್ರಸ್ತುತ ಎಲ್ಲೆಡೆ ವ್ಯಾಪಿಸಿದ್ದು, ಶೇ.18-20ರಷ್ಟು ಬಡ್ಡಿ ಪಡೆಯುತ್ತಿದ್ದಾರೆ. ಹೆಣ್ಣುಮಕ್ಕಳು ವಾರಕ್ಕೊಮ್ಮೆ ಹಣ ಪಾವತಿಸಬೇಕು. ಇದೊಂದು ದೊಡ್ಡ ದಂಧೆಯಾಗಿದೆ. ದೇವರ ಹೆಸರಲ್ಲಿ ದುಡ್ಡಿನ ದಂಧೆಗೆ ಮುಂದಾಗಿದ್ದಾರೆ. ಇದೆಲ್ಲದರ ಪ್ರತಿಫಲ ಇಂದು ಹೆಣ್ಣುಮಕ್ಕಳಿಗೆ ಗೊತ್ತಾಗುತ್ತಿದೆ ಎಂದು ಗುಡುಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೂನ್ಯ ಬಡ್ಡಿದರದಲ್ಲಿ ಸುಮಾರು 30 ಲಕ್ಷ ರೈತರು ಪಡೆಯುತ್ತಿದ್ದ ಸಾಲ ನಿಂತು ಹೋಗುತ್ತಿದೆ. ರೈತರು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಬೇಕು, ಇಲ್ಲವೆ ಖಾಸಗಿ ಸಾಲದ ಸುಳಿಗೆ ಸಿಕ್ಕಿ ಹಾಕಿಕೊಳ್ಳಬೇಕು. ಈ ಸುಳಿಗೆ ರೈತ ಸಮುದಾಯ ಬಲಿಯಾದಲ್ಲಿ ಸ್ಥಿರಾಸ್ತಿಗಳು ಹರಾಜಾಗುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಮತ್ತು ಮೈಕ್ರೊ ಹಣಕಾಸು ಸಂಸ್ಥೆಗಳ ಕಿರುಕುಳ ತಡೆಗೆ ಆಗ್ರಹಿಸಿ ಬೆಂಗಳೂರಿನ ರಿಸರ್ವ್ ಬ್ಯಾಂಕ್ ಎದುರು ಜ.29ರಂದು ಬೆಳಿಗ್ಗೆ 11ಕ್ಕೆ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 

ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೋಟೆ ಚನ್ನೇಗೌಡ ಮಾತನಾಡಿ, ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ ಹಾವಳಿ ಮತ್ತು ಕಿರುಕುಳದಿಂದ ಗ್ರಾಮೀಣ ಪ್ರದೇಶಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮೈಕ್ರೊ ಫೈನಾನ್ಸ್‌ಗಳ ಕಿರುಕುಳ ತಾಳದೆ ಊರು ತೊರೆಯುತ್ತಿದ್ದಾರೆ ಎಂದು ದೂರಿದರು. 

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಸರಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳದಿದ್ದರೆ ಉಗ್ರ ಹೋರಾಟ; ಕೆ.ಆರ್.ಎಸ್ ಜಿಲ್ಲಾಧ್ಯಕ್ಷ ಶಿವ ರೆಡ್ಡಿ ಎಚ್ಚರಿಕೆ

ಈ ಎಲ್ಲ ಸಮಸ್ಯೆಗಳ ವಿರುದ್ಧ ರೈತ ಸಂಘವು ಹೋರಾಟ ರೂಪಿಸಿದೆ ಎಂದು ಹೇಳಿದರು.

ಮಾರುತಿ, ಪಿ.ಕೆ.ಅರುಣ್, ನಾರಾಯಣಸ್ವಾಮಿ, ಈಶ್ವರರೆಡ್ಡಿ, ಶ್ರೀನಿವಾಸ್, ಎಸ್‌.ಎಂ.ರವಿಪ್ರಕಾಶ್, ವೆಂಕಟೇಶಪ್ಪ ಮತ್ತಿತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...