ಚಿಕ್ಕಬಳ್ಳಾಪುರ | ಗುಂಡೇಟು ಪ್ರಕರಣ; ಕಠಿಣ ಶಿಕ್ಷೆ, ಗಣಿಗಾರಿಕೆ ಪರವಾನಗಿ ರದ್ದತಿಗೆ ರೈತ ಸಂಘ ಆಗ್ರಹ

Date:

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪದಲ್ಲಿ ರೈತರ ಮೇಲೆ ಗುಂಡು ಹಾರಿಸಿ ದೌರ್ಜನ್ಯ ಮಾಡಿರುವ ಆರೋಪಿತನಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಕಣಗಾನಕೊಪ್ಪದಲ್ಲಿ ಗಣಿಗಾರಿಕೆಗೆ ನೀಡಿರುವ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕೋಡಿಹಳ್ಳಿ ಚಂದ್ರಶೇಖರ್‌ ಬಣದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ನೂರಾರು ರೈತರು, ರೈತನ ಕಾಲಿಗೆ ಗುಂಡು ಹೊಡೆದು, ಹಲ್ಲೆ ನಡೆಸಿರುವ ಆರೋಪಿ ಸಕಲೇಶ್‌ನಿಗೆ ಕಠಿಣಾತಿ ಕಠಿಣ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

IMG20250424123737
oppo_2

ಈ ವೇಳೆ ಮಾತನಾಡಿದ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ, ಈ ಪ್ರಕರಣವನ್ನು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ರಾಜಕೀಯ ಒತ್ತಡಗಳಿಗೆ ಮಣೆಯದೆ ಆರೋಪಿತರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು. ಈ ಮೂಲಕ ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆವಲಗುರ್ಕಿ ಬಳಿಯ ಇಶಾ ಫೌಂಡೇಶನ್‌ನಲ್ಲಿ ಸರಕಾರಿ ಜಾಗದಲ್ಲಿ ರಸ್ತೆ ನಿರ್ಮಿಸಿ, ಅಕ್ರಮವಾಗಿ ಟೋಲ್‌ ವಸೂಲಿ ಮಾಡಲಾಗುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು. ಅಕ್ರಮ ರಸ್ತೆಯನ್ನು ತೆರವುಗೊಳಿಸುವ ರೈತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಅವರಿಗೆ ಮನವಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಅವರು, ಕಣಗಾನಕೊಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಶಾ ಫೌಂಡೇಶನ್‌ ಬಳಿ ನಿರ್ಮಿಸಿರುವ ಅಕ್ರಮ ರಸ್ತೆ ಟೋಲನ್ನು ತೆರವುಗೊಳಿಸುವಂತೆ ಕೂಡಲೇ ತಹಶೀಲ್ದಾರ್‌ ಮತ್ತು ಎಸಿ ಅವರಿಗೆ ಸೂಚನೆ ಕೊಡಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ರೈತ ಸಂಘ ಜಿಲ್ಲಾಧ್ಯಕ್ಷ ರಾಮನಾಥರೆಡ್ಡಿ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ಕಾರ್ಯದರ್ಶಿ ಮುನಿನಂಜಪ್ಪ, ರಾಮಾಂಜಿನಪ್ಪ, ರಘುನಾಥ್‌ ರೆಡ್ಡಿ, ನರಸಿಂಹಪ್ಪ ಸೇರಿದಂತೆ ಇತರೆ ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...