ಬೀದರ್ | ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ರೈತ ಸಂಘ ಆಗ್ರಹ

Date:

ಬೀದರ್ ಜಿಲ್ಲೆಯ ಸಾವಿರಾರು ರೈತರಿಗೆ ಜೀವನಾಡಿಯಾಗಿದ್ದ ಬಿಎಸ್‌ಎಸ್‌ಕೆ ಕಾರ್ಖಾನೆ ಜಿಲ್ಲೆಯ ರಾಜಕೀಯ ನಾಯಕರ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸುಮಾರು ಮೂರು ವರ್ಷಗಳಿಂದ ಮುಚ್ಚಲ್ಪಟ್ಟಿದ್ದು, ಸರ್ಕಾರವೇ ಹಣ ಕೊಟ್ಟು, ಕಾರ್ಖಾನೆ ಪುನಶ್ಚೇತನಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ಜಿಲ್ಲಾ ಅಧ್ಯಕ್ಷ ಸಿದ್ರಾಮಪ್ಪಾ ಆಣದೂರೆ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಸಲ್ಲಿಸಿದರು.

‘ಜಿಲ್ಲೆಯ ಯಾವ ರಾಜಕೀಯ ವ್ಯಕ್ತಿಯು ಕಾರ್ಖಾನೆ ಪುನಶ್ಚೇತನದ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಇತ್ತೀಚೆಗೆ ಡಿಸಿಸಿ ಬ್ಯಾಂಕಿನವರು ಕಾರ್ಖಾನೆಯ ಸಾಲಕ್ಕಾಗಿ, ಕಾರ್ಖಾನೆ ಹಾಗೂ ಅದರ ಎಲ್ಲಾ ಆಸ್ತಿ ಜಪ್ತಿ ಮಾಡಿದ್ದು, ಬೀದರ ಜಿಲ್ಲೆಯ ರೈತರಿಗೆ ಮಾಡಿರುವ ಅವಮಾನ ಹಾಗೂ ದುಃಖದ ಸಂಗತಿಯಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ರಾಜ್ಯದಲ್ಲಿ ಹಲವಾರು ಸಕ್ಕರೆ ಕಾರ್ಖಾನೆಗಳು ಸಾಲದ ಸುಳಿಯಲ್ಲಿ ಸಿಲುಕಿ ಮುಚ್ಚಿದಾಗ ರಾಜ್ಯ ಸರ್ಕಾರವೇ ಹಣವನ್ನು ಕೊಟ್ಟು, ಕಾರ್ಖಾನೆಗಳು ಪುನಶ್ಚೇತನ ಮಾಡಿರುವ ಉದಾಹರಣೆಗಳು ಬಹಳಷ್ಟಿವೆ. ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಗೆ ಸರ್ಕಾರವೇ ಪುನಶ್ಚೇತನಗೊಳಿಸಿ ತಾವುಗಳು ರೈತಪರ ಇದ್ದೀರಿ ಎಂದು ತೋರಿಸಿಕೊಡಬೇಕು.‌ಇಲ್ಲದಿದ್ದಲ್ಲಿ ಮುಂಬರುವ ದಿನಗಳಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರ.ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಸೇರಿದಂತೆ ಪ್ರಮುಖರಾದ ಪ್ರವೀಣ ಕುಲಕರ್ಣಿ, ಚಂದ್ರಶೇಖರ ಜಮಖಂಡಿ, ಶಂಕರೆಪ್ಪ ಪಾರಾ, ಪ್ರಕಾಶ ಬಾವಗೆ, ನಾಗಯ್ಯ ಸ್ವಾಮಿ, ಸುಭಾಷ ರಗಟೆ, ರಾಮರಾವ ಕೇರೂರೆ, ವಿಶ್ವನಾಥ ಧರಣೆ, ರೇವಣಸಿದಪ್ಪಾ ಯರಬಾಗ, ಝರಣಪ್ಪ ದೇಶಮುಖ, ಮಲ್ಲಿಕಾರ್ಜುನ ಚಕ್ಕಿ, ಬಸಪ್ಪಾ ಆಲೂರೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...