ರಾಮನಗರ | ರೈತರ ಸಮಸ್ಯೆಗಳ ನಿರ್ಲಕ್ಷ್ಯ ಸಲ್ಲದು ; ಬಡಗಲಪುರ ನಾಗೇಂದ್ರ

Date:

ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ಸಲ್ಲದು. ರೈತರ ನ್ಯಾಯಯುತ ಬೇಡಿಕೆಗಳ ಬಗ್ಗೆ ಸಭೆ ನಡೆಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿಯವರನ್ನು ಮಂಗಳವಾರ ಭೇಟಿ ಮಾಡಿದ ರೈತಸಂಘ, ಕನ್ನಡಪರ ಸಂಘಟನೆ ಹಾಗೂ ದಲಿತಪರ ಸಂಘಟನೆಗಳ ನಿಯೋಗವು, ಜಿಲ್ಲಾಧಿಕಾರಿಯ 144 ಸೆಕ್ಷನ್ ಜಾರಿಯ ಅಸಾಂವಿಧಾನಿಕ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಮಾತನಾಡಿ, ಚಳುವಳಿಗೆ ಬಹು ಪಾವಿತ್ರ್ಯಮಯ ಇತಿಹಾಸ ಇದೆ. ಅದನ್ನು ಹತ್ತಿಕ್ಕುವ ಮನಸ್ಥಿತಿ ಸಂವಿಧಾನಕ್ಕೆ ಮಾರಕ. ಅದನ್ನು ತಕ್ಷಣ ವಾಪಾಸ್ ಪಡೆಯುವಂತೆ ತಾವು ನಿರ್ದೇಶನ ನೀಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ನಾಗೇಂದ್ರ ೧

ರಾಜ್ಯ ಗೌರವಾಧ್ಯಕ್ಷರಾದ ಚಾಮರಸ ಮಾಲಿ ಪಾಟೀಲ ಮಾತನಾಡಿ, ನೆನ್ನೆ ನಡೆದ ಹೋರಾಟದಲ್ಲಿ ರೈತ ಮಹಿಳೆಯರ ವಿರುದ್ಧ ಉದ್ದಟತನ ಪ್ರದರ್ಶಿಸಿದ, ಅವಹೇಳನಕಾರಿಯಾಗಿ ಮಾತನಾಡಿದ ಡಿವೈಎಸ್‌ಪಿ ದಿನಕರ್ ಶೆಟ್ಟಿಯನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ಎಂದು ಆಗ್ರಹಿಸಿದರು.

ರೈತ ನಿಯೋಗದ ಮನವಿ ಸ್ವೀಕರಿದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ, ರಶ್ಮಿ, ಕಂದಾಯ ಇಲಾಖೆಯ ಕಾರ್ಯದರ್ಶಿ ರೈತರ 32 ಬೇಡಿಕೆಗಳ ರೈತ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಸಾಧಕ ಭಾದಕಗಳ ಬಗ್ಗೆ ವರದಿ ಪಡೆದು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈಗಲೇ ಸೂಚಿಸುತ್ತೇನೆ. 144 ಸೆಕ್ಷನ್ ನಿಷೇದಾಗ್ನೆ ಬಗ್ಗೆ ಜಿಲ್ಲಾಧಿಕಾರಿಯ ಜೊತೆ ಚರ್ಚಿಸಿ ವಾಪಾಸ್ ಪಡೆಯುವಂತೆ ಸೂಕ್ತ ನಿರ್ದೇಶನ ನೀಡುತ್ತೇನೆ. 15 ದಿನಗಳ ಒಳಗಾಗಿ ಎಲ್ಲಾ ತೊಡಕುಗಳ ಬಗ್ಗೆ ಕಾನೂನು ತಜ್ಞರೊಡನೆ ಚರ್ಚಿಸಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮದ್ದೂರು ಪುರಸಭೆಯಲ್ಲಿ 17 ವರ್ಷಗಳ ಬಳಿಕ ಗದ್ದುಗೆ ಏರಿದ ಕಾಂಗ್ರೆಸ್‌

ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಮಲ್ಲಯ್ಯ, ಸಂಚಾಲಕ ಮುನಿರಾಜು, ರಾಮನಗರ ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಕರವೇ ಪ್ರವೀಣ್ ಶೆಟ್ಟಿ ಬಣ ಜಿಲ್ಲಾಧ್ಯಕ್ಷ ರಾಜು ಎಂ ಎನ್ ಆರ್, ಕರವೇ ಸ್ವಾಭಿಮಾನಿ ಬಣದ ರಾಜ್ಯ ಉಸ್ತುವಾರಿ ಶಿವುಗೌಡ, ಕೆಆರ್‌ಎಸ್ ಪಕ್ಷದ ಮುಖಂಡ ಪ್ರಶಾಂತ್ ಹೊಸದುರ್ಗ, ಸ್ವತಂತ್ರ ಕರ್ನಾಟಕ ಜಿಲ್ಲಾಧ್ಯಕ್ಷ ಕನ್ನಡ ಭಾಸ್ಕರ್, ಕರವೇ ಕಾರ್ಯಧ್ಯಕ್ಷ ಲೋಕೇಶ್ ಆರ್ ಬಿ ಎಲ್, ರೈತಸಂಘದ ಚಂದ್ರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...