ರಾಮನಗರ | ಬಿಳಗುಂಬ ಸರಕಾರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Date:

ನಾವು ಗುರುಗಳಿಗೆ ಗೌರವ ನೀಡಿದಷ್ಟು ನಮ್ಮ ಗೌರವವು ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ನಾವು ಈ ಹಂತಕ್ಕೆ ಬೆಳೆಯಲು ಅವರುಗಳೇ ಕಾರಣ ಎಂದು ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ.ಟಿ.ದಿನೇಶ್ ಬಿಳಗುಂಬ ತಿಳಿಸಿದರು.

ಅವರು ಬಿಳಗುಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಮತ್ತು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ತಂದೆ ತಾಯಿಗೆ ನೀಡುವ ಗೌರವವನ್ನು ಗುರುಗಳಿಗೂ ನೀಡಿದರೆ ನಾವು ಉತ್ತಮವಾಗಿ ಗುರಿ ಮುಟ್ಟಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪರಿಸರ ಪ್ರೇಮಿ ಬಿ.ಟಿ.ರಾಜೇಂದ್ರ ಮಾತನಾಡಿ, ನಾವು ವ್ಯಾಸಂಗ ಮಾಡುವಾಗ ಸರಕಾರಿ ಸೌಲಭ್ಯಗಳು ತುಂಬಾ ಕಡಿಮೆ. ಇಂದಿನ ಮಕ್ಕಳಿಗೆ ಸರಕಾರಿ ಸೌಲಭ್ಯಗಳು ಹೆಚ್ಚು. ಸಂಘ ಸಂಸ್ಥೆಗಳು ದಾನಿಗಳು ಮಕ್ಕಳಿಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಪಾಠಶಾಲೆಯ ಅನಿಲ್ ಮಾತನಾಡಿ, ನಾನು ಶಾಲಾ ವಿದ್ಯಾರ್ಥಿಗಳೊಂದಿಗೆ ಮತ್ತು ಶಿಕ್ಷಕರೊಂದಿಗೆ ನಿರಂತರವಾಗಿ ಹಿರಿಯ ವಿದ್ಯಾರ್ಥಿಯಾಗಿದ್ದೇನೆ ಎಂದರು.

IMG 20240907 WA0121

ವೇದಿಕೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ನಾಗಬೈರಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನವನ್ನು ನಮ್ಮ ಶಿಕ್ಷಕರಿಗೆ ಕೊಡುಗೆಯಾಗಿ ನೀಡಿರುವುದು ನಮ್ಮ ಪುಣ್ಯ. ಅವರ ಆದರ್ಶ ಗುಣಗಳನ್ನು ನಾವು ನೀವು ಅಳವಡಿಸಿಕೂಂಡರೆ ಅದು ಅವರಿಗೆ ನಾವುಗಳು ನೀಡುವ ಗೌರವ ಎಂದರು.

ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅವರು ಸಂಗ್ರಹಿಸಿದ ಹಣದಿಂದ ಶಿಕ್ಷಕರಿಗೆ ಆಟವನ್ನಾಡಿಸಿ ಬಹುಮಾನ ನೀಡಿದರು. ಪ್ರೌಢಶಾಲೆಯ ಎಲ್ಲಾ ಶಿಕ್ಷಕರನ್ನು ಮತ್ತು ಸಿಬ್ಬಂದಿಯನ್ನು ಬಿ.ಟಿ.ರಾಜೇಂದ್ರ ವತಿಯಿಂದ ಗೌರವಿಸಲಾಯಿತು. ಇದೆ ಸಂದರ್ಭದಲ್ಲಿ ಕ್ಲಸ್ಟರ್ ಅಂತದಲ್ಲಿ ಗೆದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಹೇಮಂತ್, ಶ್ರೀಧರ್ ಮತ್ತು ಸ್ನೇಹಿತರಿಂದ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಪೊರೇಶನ್ ಬ್ಯಾಂಕ್ ಮ್ಯಾನೇಜರ್ ದಿನೇಶ್, ಸಿಬ್ಬಂದಿ ರಸಾಕ್ ಶಿಕ್ಷಕರಿಗೆ ವಂದಿಸಿದರು‌.

IMG 20240907 WA0123

ಸಿ.ಆರ್.ಪಿ ರಮೇಶ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಲತಾ, ಶಿಕ್ಷಕರಾದ ಉಮೇಶ್ ಶಿಕ್ಷಕರ ಕುರಿತು ಹಾಡನ್ನಾಡಿದರು. ವೇದಿಕೆಯಲ್ಲಿ ಶಿಕ್ಷಕರಾದ ಮಹಾದೇವಯ್ಯ, ಶ್ರೀಧರ್, ಚಂದ್ರಪ್ಪಾ, ರಾಮಕೃಷ್ಣ, ಅಹಿಶಾ, ಸುಜಾತ, ರೇಖಾ, ದಿವ್ಯ ರಾಮಯ್ಯ ಮುಂತಾದರಿದ್ದರು ಮತ್ತು ಎಲ್ಲಾ ವಿಧ್ಯಾರ್ಥಿಗಳಿಗೆ ಶಿಕ್ಷಕರಿಗೆ ಸಿಹಿ ವಿತರಿಸಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...