ರಾಮನಗರ | ಮಧುಶ್ರೀ ದಿಬ್ಬದಲ್ಲಿ 23 ದಿನಗಳ ರಂಗಶಿಬಿರ

Date:

ರಾಮನಗರ ಜಿಲ್ಲೆಯ ಎಸ್‌ಆರ್‌ಎಸ್ ಬೆಟ್ಟದ ಕೂಗಳತೆಯ ದೂರದಲ್ಲಿರುವ ಮಧುಶ್ರೀ ದಿಬ್ಬದಲ್ಲಿ 23 ದಿನಗಳ ರಂಗಶಿಬಿರ ನಡೆಯಲಿದ್ದು, ವಸತಿಸಹಿತ ತರಬೇತಿ ನೀಡಲಾಗುವುದು ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ ಆರ್ ಗುರುಸ್ವಾಮಿ ತಿಳಿಸಿದರು.

ರಾಮನಗರದಲ್ಲಿ ರಂಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, “ಕೆ ಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್‌ನಿಂದ ರಂಗಶಿಬಿರ ತರಬೇತಿ ಶುರುಮಾಡಲಾಯಿತು” ಎಂದು ತಿಳಿಸಿದರು.

“ಸಿನಿಮಾದ ಬಹುಪಾಲು ಮಂದಿ ಕಲಾವಿದರು ರಂಗಭೂಮಿಯಿಂದ ಬಂದವರು. ರಾಜ್‌ಕುಮಾರ್, ಬಾಲಕೃಷ್ಣ, ನರಸಿಂಹರಾಜು ಮುಂತಾದವರು ಗುಬ್ಬಿ ಕಂಪನಿಯಿಂದ ಬಂದವರು, ರಂಗಭೂಮಿ ಕಲಾವಿದರು ಆಗುವವರು, ಸಮಾಜಕ್ಕೆ ಕಣ್ಣು, ಕಿವಿ ಎಲ್ಲವನ್ನೂ ತೆರೆದುಕೊಳ್ಳಬೇಕು, ರಾಜ್‌ಕುಮಾರ್ ಸಮಾಜಕ್ಕೆ ತೆರದುಕೊಂಡದ್ದರಿಂದ ಸಾಂಸ್ಕೃತಿಕ ನಾಯಕರಾದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲ ತರಹದ ಓದನ್ನೂ ಓದಿಕೊಳ್ಳಬೇಕು. ಎಲ್ಲರೂ ಪ್ರಸ್ತುತ ರಾಜಕೀಯಕ್ಕೆ ಸ್ಪಂದಿಸಬೇಕು. ಸರ್ಕಾರವನ್ನು ಎಚ್ಚರಿಸಲು ತಯಾರಿರಬೇಕು. ರಂಗಭೂಮಿ ಕಲಾವಿದರು ಸದಾ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ವಿಮರ್ಶಿಸಬೇಕು. ಸರ್ಕಾರದ ತಪ್ಪುಗಳನ್ನು ತೋರಿಸಲು, ಸಮಸ್ಯೆಗಳನ್ನು ಸರಿಪಡಿಸಲು ರಂಗಭೂಮಿಯನ್ನು ಒಂದು ಸಾಧನವಾಗಿ ಬಳಸಬಹುದು. ಹಿಂದೆಲ್ಲಾ ಬಹಳಷ್ಟು ಕಲಾವಿದರು ತಮ್ಮ ನಾಟಕಾಭಿನಯದ ಮೂಲಕ ಸಮಾಜದ ಮೇಲಾಗುತ್ತಿರುವ ಅನ್ಯಾಯವನ್ನು ಖಂಡಿಸುವುದರ ಮೂಲಕ ಸರ್ಕಾರವನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ರಂಗಭೂಮಿ ಕಲಾವಿದರಿಗೆ ಬಹಳ ಜನಗಳ ಒಡನಾಟ, ಪರಿಚಯ ಆಗುತ್ತೆ. ಇದರಿಂದ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬುಹುದು” ಎಂದು ಶಿಬಿರಾರ್ಥಿಗಳಿಗೆ ತಿಳಿಸಿಕೊಟ್ಟರು.

ಕೆಎಸ್‌ಎಂ ಟ್ರಸ್ಟ್‌ನ ಕಾರ್ಯದರ್ಶಿ ಡಾ. ಬೈರೇಗೌಡ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮುಖ್ಯವಾಗಿ ಇದೊಂದು ಅಭಿನಯ ತರಬೇತಿ ಶಿಬಿವಾಗಿರುತ್ತದೆ. ಪ್ರವೇಶ ಉಚಿತ, ಯಾವುದೇ ಸಂಭಾವನೆ ನೀಡುವುದಿಲ್ಲ. ಊಟ, ವಸತಿ ಒಸಗಿಸಲಾಗುವುದು. ರಂಗಭೂಮಿಯ ಎಲ್ಲ ಮಗ್ಗಲುಗಳನ್ನು ಪರಿಚಯ ಮಾಡಿಸಲಾಗುವುದು. ಕೊನೆಯಲ್ಲಿ ಅವರೇ ರಚಿಸಿದ “ದೇವನಾಂಪ್ರಿಯ ಅಶೋಕ” ನಾಟಕ ನಿರ್ಮಾಣ ಮಾಡಿ ಆಡಿಸಲಾಗುವುದು” ಎಂದು ಮಾಹಿತಿ ನೀಡಿದರು.

ರಂಗ ತರಬೇತಿಯ ಉದ್ಘಾಟನಾ ಶಿಬಿರದಲ್ಲಿ 15 ಮಂದಿ ಶಿಬಿರಾರ್ಥಿಗಳು ಕರ್ನಾಟಕ‍‍ದ ಹಲವು  ಜಿಲ್ಲೆಗಳಿಂದ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಬಂಜಾರ ಅಕಾಡೆಮಿ ಅಧ್ಯಕ್ಷ ಡಾ. ಎ ಆರ್ ಗೋವಿಂದಸ್ವಾಮಿ, ನಾಟಕ ಅಕಾಡೆಮಿ ಸದಸ್ಯ ಕಂಬದ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಚಂದ್ರಯ್ಯ ಅವರನ್ನು ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಬ್ಬು ಬೆಳೆಗಾರರ ಬಾಕಿಹಣ ಬಿಡುಗಡೆಗೆ ಆಗ್ರಹ; ಕೆಪಿಆರ್‌ಎಸ್‌ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಚಂದ್ರಯ್ಯ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ ಆರ್ ಗುರುಸ್ವಾಮಿ, ನಾಟಕ ಅಕಾಡೆಮಿ ಸದಸ್ಯ ಕಂಬಾಪುರ ಬಾಬು, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಬಾಬು, ಕೆಎಸ್‌ಎಂ ಟ್ರಸ್ಟ್‌ನ ಕಾರ್ಯದರ್ಶಿ ಡಾ. ಬೈರೇಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...