ರಾಮನಗರ | ಜಾತಿ ನಿಂದನೆ ಆರೋಪ; 11 ಮಂದಿ ವಕೀಲರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ವಕೀಲ ಚಾನ್‌ ಪಾಷಾ ಅವರನ್ನು ವಕೀಲ ಸಂಘದಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕಾಗಿ 11 ಮಂದಿ ವಕೀಲರು ದಲಿತ ಮುಖಂಡರಿಗೆ ಜಾತಿ ನಿಂದನೆ ಮಾಡಿದ್ದಾರೆ. ಆ 11 ಮಂದಿ ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಲಿತ ನಾಯಕರು ಒತ್ತಾಯಿಸಿದ್ದಾರೆ.

ರಾಮನಗರದಲ್ಲಿ ದಲಿತ ಮುಖಂಡರು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದು, “ಗ್ಯಾನವ್ಯಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪು ಕುರಿತು ರಾಮನಗರದ ವಕೀಲ ಚಾನ್ ಪಾಷಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅದು ಹಿಂದು ಧರ್ಮೀಯರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಮೇಲೆ ಸಂಘದ ಜಿಲ್ಲಾಧ್ಯಕ್ಷ ಬಿ.ಎಂ ಶ್ರೀವತ್ಸ ಅವರು ಚಾನ್‌ ಪಾಷಾ ಅವರನ್ನು ಸಂಘದಿಂದ ವಜಾಗೊಳಿಸಿದ್ದಾರೆ. ಅಲ್ಲದೆ, ಐಜೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ದಲಿತ ಮುಖಂಡರನ್ನು ವಕೀಲರು ನಿಂದಿಸಿದ್ದಾರೆ” ಎಂದು ಆರೋಪಿಸಿದರು.

“ಚಾನ್‌ ಪಾಷಾ ಅವರನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿ ದಲಿತ ಮುಖಂಡರು ವಕೀಲರ ಕಚೇರಿಗೆ ತೆರಳಿ, ಚಾನ್‌ ಪಾಷಾ ವಿರುದ್ಧದ ಆರೋಪ ಸುಳ್ಳಿನಿಂದ ಕೂಡಿದೆ. ಅವರನ್ನು ವಜಾಗೊಳಿಸಿರುವುದನ್ನು ಮತ್ತೊಮ್ಮೆ ಪುನರ್‌ ಪರಿಶೀಲಿಸಿ ಎಂದು ಕೇಳಿದ್ದಾರೆ. ಈ ವೇಳೆ, 11 ಮಂದಿ ವಕೀಲರು ದಲಿತ ಮುಖಂಡರಿಗೆ ಜಾತಿ ನಿಂದನೆ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿವಾಹದ ಆನ್​ಲೈನ್ ನೋಂದಣಿ ಪ್ರಕ್ರಿಯೆಗೆ ಫೆ.15 ರಿಂದ ಪ್ರಾಯೋಗಿಕ ಚಾಲನೆ

“ಜಾತಿ ನಿಂದನೆ ಕುರಿತು ದಲಿತ ಮುಖಂಡರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಹೋದಾಗ ಪೊಲೀಸರು ಕೇಸ್ ದಾಖಲಿಸಿಕೊಳ್ಳುವುದಿಲ್ಲವೆಂದು ಹೇಳಿದ್ದಾರೆ. ಅಲ್ಲದೇ ಯಾವುದೇ ತಪ್ಪು ಮಾಡದ ದಲಿತ ಮುಖಂಡರಿಗೆ ಪೊಲೀಸ್‌ ಠಾಣೆಯಿಂದ ನೋಟಿಸ್‌ ಬಂದಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಪ್ರಕರಣ ದಾಖಲಿಸಿಕೊಳ್ಳದ ಪೊಲೀಸರು ಹಾಗೂ ಜಾತಿ ನಿಂದನೆ ಮಾಡಿದ 11 ಮಂದಿ ವಕೀಲರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಪ್ರಕರಣ ದಾಖಲಿಸಿ ನಮಗೆ ನ್ಯಾಯ ಕೊಡಿಸಬೇಕು” ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...