ನಾಮಪತ್ರ ವಾಪಸ್ ಪಡೆದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಚಿನ್ನಪ್ಪ ವೈ ಚಿಕ್ಕಹಾಗಡೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಅನ್ನದಾನಪ್ಪ ಅವರು ಕನಕಪುರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಪಕ್ಷ ಅವರನ್ನು ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ, ಅವರು ಪಕ್ಷಕ್ಕೆ ದ್ರೋಹ ಮಾಡಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಾಂಗ್ರೆಸ್ ಆಮಿಷಕ್ಕೆ ಒಳಗಾಗಿ ನಾಮಪತ್ರ ವಾಪಸ್ ಪಡೆದಿದ್ದಾರೆ. ನಂಬಿಕೆಗೆ ದ್ರೋಹವೆಸಗಿದ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾಸನ | ವಾಟ್ಸ್‌ಆ್ಯಪ್ ಗುಂಪಿನಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶ; ಎಫ್‌ಡಿಎ ಅಮಾನತು
“ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿ ಇಲ್ಲ. ಪಕ್ಷವು ಇಲ್ಲಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಯಾವ ಪಕ್ಷಕ್ಕೂ ಬೆಂಬಲ ನೀಡುತ್ತಿಲ್ಲ” ಎಂದು ತಿಳಿಸಿದ್ದಾರೆ.





