ರಾಮನಗರ | ವೈದ್ಯಕೀಯ ಪ್ರಮಾಣಪತ್ರಕ್ಕೆ ₹100 ಲಂಚ ಕೇಳಿದ ಜಿಲ್ಲಾಸ್ಪತ್ರೆ ವೈದ್ಯ ಬಿ ಜಿ ಕುಮಾರಸ್ವಾಮಿ; ಆರೋಪ

Date:

ಡಿಎಲ್ ನವೀಕರಣ ಮಾಡಿಸಲು ವೈದ್ಯಕೀಯ ಪ್ರಮಾಣಪತ್ರ ಕೋರಿ ಜಯದೇವ್‌ ಎಂಬುವವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆಗೊಳಗಾಗಿದ್ದು, ಪ್ರಮಾಣಪತ್ರಕ್ಕೆ ಸಹಿಮಾಡಿ ವಿತರಿಸುವ ವೇಳೆ ವೈದ್ಯಾಧಿಕಾರಿ ಡಾ. ಬಿ ಜಿ ಕುಮಾರಸ್ವಾಮಿ ₹100 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಆರೋಪ ಕೇಳಿಬಂದಿದೆ.

ಮಾಗಡಿ ಜಯದೇವ ಎಂಬುವವರು ಆರೋಪ ಮಾಡಿದ್ದು, ಪ್ರಮಾಣ ಪತ್ರಕ್ಕೆ ₹100 ಲಂಚ ಕೇಳಿದ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

IMG 20241216 WA0017 1

“27 ವರ್ಷಗಳ ಸರ್ವೀಸ್‌ನಲ್ಲಿ ಯಾರ ಕೈಲೂ ಸರ್ಕಾರಕ್ಕೆ ಹಣ ಕಟ್ಟಿಸಿಲ್ಲ. ಗೆಜೆಟೆಡ್ ಆಫೀಸರ್‌ಗೆ ₹100 ಬೆಲೆ ಇಲ್ಲವೇ?, ಮೇಲಿನಿಂದ ಕೆಳಗಿನವರೆಗೆ ಎಲ್ಲರೂ ಲಂಚ ತೆಗೆದುಕೊಳ್ಳುತ್ತಾರೆ. ನಾನು ಮಾತ್ರ ಹರಿಶ್ಚಂದ್ರನಂತೆ ಕುಳಿತುಕೊಂಡಿರುವುದು ಸರಿಯೇ?” ಎಂಬಿತ್ಯಾದಿ ನಡೆಯುವ ಸಂಭಾಷಣೆ ಆಡಿಯೋದಲ್ಲಿ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿರಿಯ ತಜ್ಞರು ಹಾಗೂ ವೈದ್ಯರೂ ಆಗಿರುವಂತಹ ಡಾ. ಬಿ ಜಿ ಕುಮಾರಸ್ವಾಮಿ ಸಾರ್ವಜನಿಕರ ಬಳಿ ನಿತ್ಯವೂ ₹100 ರಿಂದ ₹500 ರೂಪಾಯಿಗಳವರೆಗೆ ಬಹಿರಂಗವಾಗಿ, ನಿಸ್ಸಂಕೋಚವಾಗಿ ಡಿಮ್ಯಾಂಡ್ ಮಾಡಿ ಲಂಚ ಕೇಳುತ್ತಾರೆ. ಇವರು ಸಾರ್ವಜನಿಕ ಸೇವೆಯಲ್ಲಿ ಅಧಿಕಾರಿ. ಸರ್ಕಾರ ₹2 ಲಕ್ಷಕ್ಕೂ ಅಧಿಕವಾಗಿ ಸಂಬಳ ನೀಡುತ್ತದೆ. ಇದರ ಜ್ಞಾನವೇ ಇಲ್ಲದೆ ಕೂಲಿ ಮಾಡುವ ಜನರ ಬಳಿ ಈ ರೀತಿ ಲಂಚದ ಮೂಲಕ ಹಣವನ್ನು ವಸೂಲಿ ಮಾಡುತ್ತಿರುವುದು ಭ್ರಷ್ಟಾಚಾರವಾಗಿದೆ” ಎಂದು ಮಾಗಡಿ ಜಯದೇವ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಮಾಣಪತ್ರ ಮಾಡಿಸಲು ಆಸ್ಪತ್ರೆಗೆ ಬಂದ ವ್ಯಕ್ತಿಯೋರ್ವರಿಂದ ಲಂಚ ಕೇಳಿದ್ದು, ಮಹಿಳಾ ರೋಗಿಗಳ ಬಳಿಯೂ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ರಾಮನಗರ ಜಿಲ್ಲಾ ಹಿರಿಯ ವೈದ್ಯಾಧಿಕಾರಿ ಡಾ ಬಿ ಜಿ ಕುಮಾರಸ್ವಾಮಿ ಮೇಲೆ ಸಾಮಾಜಿಕ ಹೋರಾಟಗಾರ ಸ್ವಾಮಿ ಎಚ್ ಎಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಇದನ್ನು ನೋಡಿದ್ದೀರಾ? ಸಮ್ಮೇಳನದಲ್ಲಿ ಬಾಡೂಟ: 5 ರೂಪಾಯಿ ಡಾಕ್ಟರ್ ಹೇಳೋದೇನು?

ಡಾ ಬಿ ಜಿ ಕುಮಾರಸ್ವಾಮಿ ರೋಗಿಗಳಿಂದ ಲಂಚ ಕೇಳುತ್ತಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಆಧರಿಸಿ ರಾಮನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಸ್ವಾಮಿ ದೂರು ಸಲ್ಲಿಸಿದ್ದಾರೆ.

“ಮಹಿಳಾ ರೋಗಿಗಳ ಜತೆಗೆ ಅನುಚಿತ ವರ್ತನೆ ತೋರುತ್ತಾನೆ. ಮುಜುಗರಕ್ಕೆ ಈಡಾಗುವಂತೆ ಅಸಭ್ಯವಾಗಿ ಮಾತನಾಡಿ ಚಿಕಿತ್ಸೆ ನೀಡುವುದು ಈತನ ಚಾಳಿಯಾಗಿದೆ. ಈ ದುರ್ನಡತೆ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಡಾ. ಬಿ ಜಿ ಕುಮಾರಸ್ವಾಮಿ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ರಾಮನಗರ ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ಶೀಘ್ರವೇ ಇಲಾಖೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯನಿಗೆ ಶಿಕ್ಷೆ ನೀಡಬೇಕು. ಮುಂದಿನ ದಿನಗಳಲ್ಲಿ ಇಂತಹ ಅಧಿಕಾರಿಗಳಿಂದ ಯಾವುದೇ ರೀತಿಯ ತಪ್ಪುಗಳು ನಡೆಯದಂತೆ ,ಇತರರಿಗೆ ಮಾದರಿಯಾಗುವಂತೆ ತಪ್ಪಿತಸ್ಥನಿಗೆ ದಂಡನೆ ನೀಡಬೇಕು” ಎಂದು ಸ್ವಾಮಿ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...