ರಾಮನಗರ | ಕೆಪಿಟಿಸಿಎಲ್ ಸಿಬ್ಬಂದಿಗಳಿಂದಲೇ ವಿದ್ಯುತ್‌ ಕಂಬ ಕಳ್ಳತನ: ಸ್ವಾಮಿ ಹೆಚ್ ಎಸ್ ಆರೋಪ

Date:

ಕೆಪಿಟಿಸಿಎಲ್‌ ಸಿಬ್ಬಂದಿಗಳೇ ವಿದ್ಯುತ್‌ ಕಂಬ ಹಾಗೂ ವೈರ್‌ಗಳನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮಾಹಿತಿ ಹಕ್ಕು ಬಳಕೆದಾರ ಸ್ವಾಮಿ ಎಚ್‌ ಎಸ್ ಎಂಬುವವರು ಬೆಂಗಳೂರಿನ ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

“ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹೊನ್ನಿಗನಹಳ್ಳಿ ಗ್ರಾಮದಿಂದ ಸಾತನೂರುವರೆಗೆ ಹಾಗೂ ಕೆಪಿಟಿಸಿಎಲ್ ಕಚೇರಿಯಿಂದ ಛತ್ರ ಗೇಟ್‌ವರೆಗೆ 66 ಕೆವಿ ವಿದ್ಯುತ್ ವೈರ್‌ಗಳು ಹಾಗೂ ಮರಗಳನ್ನು ಕಡಿದು ಆ ದಿಮ್ಮಿಗಳನ್ನೂ ಕೆಪಿಟಿಸಿಎಲ್ ಸಿಬಂದಿಗಳೇ ಕಳ್ಳತನ ಮಾಡಿದ್ದಾರೆ” ಎಂದರು.

“ಕನಕಪುರ ಕೆಪಿಟಿಸಿಎಲ್ ಕಚೇರಿಯ ಎಇಇ ರಜನೀಸ್ ಮತ್ತು ಅವರ ಸಿಬ್ಬಂದಿಗಳಾದ ಹರೀಶ್ ಹಾಗೂ ಗಿರೀಶ್ ಸೇರಿ 66 ಕೆವಿ ನಿಷ್ಕ್ರಿಯ ವಿದ್ಯುತ್ ಮರದ ಕಂಬ, ವೈರ್‌ಗಳನ್ನು ಅಕ್ರಮವಾಗಿ ಕಳ್ಳತನ ಮಾಡಿ ಮಾರಾಟ ಮಾಡಿದ್ದಾರೆಂದು ದೂರು ನೀಡಿ 6 ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳ್ಳತನ ನಡೆದ ಸ್ಥಳದ ಜಿಪಿಎಸ್ ಸಹಿತ ಫೋಟೋ ಹಾಗೂ ವಿಡಿಯೋಗಳ ಸಾಕ್ಷಿ ಕೊಟ್ಟಿದ್ದೇನೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ವಿಡಿಯೋ ಮಾಡಿಕೊಟ್ಟಿದ್ದೇನೆ. ಆದರೂ ಕ್ರಮಕೈಗೊಂಡಿಲ್ಲ. ನಾನು ನೀಡಿರುವ ಸಾಕ್ಷಿ ಆಧಾರಗಳ ಮೇಲೆ ಸ್ಥಳ ಪರಿಶೀಲಿಸಬೇಕು. ವಿಚಾರಣೆ ನಡೆಸಿ ಈ ಕೃತ್ಯದಲ್ಲಿ ಭಾಗಿಯಾದ ಸಿಬ್ಬಂದಿಗಳನ್ನು ಕೂಡಲೇ ಕರ್ತವ್ಯದಿಂದ ವಜಾಗೊಳಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪರಿಶಿಷ್ಟರಿಗೆ ಕಾಯ್ದಿರಿಸಿದ ಸ್ಮಶಾನ ಭೂಮಿ ರಕ್ಷಣೆ ಮಾಡಲು ಆಗ್ರಹಿಸಿ ಮನವಿ

ಕನಕಪುರ ಕೆಪಿಟಿಸಿಎಲ್‌ನ ಇಇ ಸುಜಾತ ಮಾತನಾಡಿ, “ಮಳೆ ಗಾಳಿಗೆ ಬಿದ್ದಂತಹ ವಿದ್ಯುತ್‌ ಕಂಬ ಹಾಗೂ ವೈರ್‌ಗಳನ್ನು ತಂದಿದ್ದೇವೆ. ಅವುಗಳನ್ನು ನಮ್ಮ ಉಗ್ರಾಣದಲ್ಲಿ ಸಂಗ್ರಹಿಸಿಟ್ಟಿದ್ದೇವೆ. ಇದರ ವರದಿಯನ್ನು ಮೇಲಧಿಕಾರಿಗಳಿಗೆ ನೀಡಿದ್ದೇವೆ. ಮಿಕ್ಕ ನಿಷ್ಕ್ರಿಯ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಅನುದಾನ ಕೋರಿ ಸರ್ಕಾರ‌ಕ್ಕೆ ಕೋರಿದ್ದೇವೆ. ಅನುದಾನ ಬಂದ ಕೂಡಲೇ ತೆರವುಗೊಳಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...