ರಾಮನಗರ | ಹಾರೋಹಳ್ಳಿ ಪಟ್ಟಣ ಪಂಚಾಯತಿ ಆದಾಯ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

Date:

ಆದಾಯ ಸಂಗ್ರಹ ಮಾಡಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಬೇಕಾದ ಅಧಿಕಾರಿಗಳು 20 ವರ್ಷದಿಂದ ಅಂಗಡಿಗಳ ಹರಾಜು ಮಾಡದೆ, ಅಸಡ್ಡೆ ತೋರಿದ್ದಾರೆಂದು ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳು ಆರೋಪಿಸಿದ್ದಾರೆ.

“ರಾಮನಗರ ಜಿಲ್ಲೆ ಹಾರೋಹಳ್ಳಿ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದೆ. ಸುಮಾರು 20 ವರ್ಷಗಳ ಹಿಂದೆ ನಿಗದಿ ಮಾಡಿದ ಬಾಡಿಗೆ ಪಡೆಯುತ್ತಿದೆ. ಈವರೆಗೂ ಹೊಸ ಹರಾಜು ಪ್ರಕ್ರಿಯೆ ಮಾಡಿಲ್ಲ. ಅಧಿಕಾರಿಗಳು ಕೇವಲ ಸಾಬೂಬು ಹೇಳಿಕೊಂಡು ಕಾಲ ಕಳೆಯುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

2003ರಲ್ಲಿ ಹಾರೋಹಳ್ಳಿ ಗ್ರಾಮ ಪಂಚಾಯಿತಿ ಆದ ಸಮಯದಲ್ಲಿ  ಹರಾಜು ಪ್ರಕ್ರಿಯೆ ನಡೆಸಿ ನಿಗದಿಪಡಿಸಿದ್ದ ₹700ರಿಂದ ₹800 ಬಾಡಿಗೆ ಹಣವನ್ನೇ ಇಂದಿಗೂ ತೆರಿಗೆಯಾಗಿ ವಸೂಲಿ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾರೋಹಳ್ಳಿ ಪಟ್ಟಣದಲ್ಲಿ 262 ವಾಣಿಜ್ಯ ಮಳಿಗೆಗಳಿದ್ದು, ಅದರಲ್ಲಿ 126 ಮಳಿಗೆಗಳು ಸುಸ್ಥಿಯಲ್ಲಿವೆ. ಅವುಗಳಿಗೆ ತಿಂಗಳಿಗೆ ₹12,000ದಿಂದ ₹15,000 ಹಣ ಬಾಡಿಗೆ ಪಡೆದುಕೊಳ್ಳಬೇಕಿತ್ತು. ಆದರೆ, ಹಿಂದೆ ನಿಗದಿಪಡಿಸಿದ ಬಾಡಿಗೆ ದರ ಪಡೆದುಕೊಂಡು ಪಟ್ಟಣ ಪಂಚಾಯತ್ ಬೊಕ್ಕಸಕ್ಕೆ ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಎಸ್‌ಸಿ, ಎಸ್‌ಟಿ, ಕುಂದುಕೊರತೆ ಸಭೆಯಲ್ಲಿ ಸದಸ್ಯರು ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಕುರಿತು ಸಭೆಯಲ್ಲಿ ಚರ್ಚೆ ಮಾಡಿ ಸೂಕ್ತ ಕ್ರಮ ವಹಿಸುವಂತೆ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರೂ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ” ಎಂದು ಜಾಗೃತಿ ಸಮಿತಿ ಸದಸ್ಯರ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಕಿಮ್ಸ್‌ ನಿರ್ದೇಶಕ ಸ್ಥಾನಕ್ಕೆ ಪೈಪೋಟಿ

ಸುಮಾರು 20 ವರ್ಷಗಳಿಂದ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ಮಾಡದೆ ಅಧಿಕಾರಿಗಳು ಪ್ರಭಾವಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅನೈತಿಕವಾಗಿ ವಸೂಲಿ ಮಾಡುತ್ತಿದ್ದಾರೆ” ಎಂದು ಸಾರ್ವಜನಿಕರು ದೂರಿದ್ದಾರೆ.

ಜಿಲ್ಲಾಧಿಕಾರಿ ಕೂಡಲೇ ಗಮನಹರಿಸಿ ತೆರಿಗೆ ಸೋರಿಕೆ ತಡೆಗಟ್ಟಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...