ರಾಮನಗರ | ದಬ್ಬಾಳಿಕೆಗೆ ಒಳಗಾದ ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ನೆರವು: ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್

Date:

ದಬ್ಬಾಳಿಕೆಗೆ ಒಳಗಾದ ಮಹಿಳೆಯರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಕೌನ್ಸೆಲಿಂಗ್ ಹಾಗೂ ಕಾನೂನು ನೆರವು ನೀಡಬೇಕು ಎಂದು ರಾಮನಗರ ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.

ಆಗಸ್ಟ್ 28ರ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಕೋಶ ಸಮಿತಿ ಸಭೆಯ ಮುಂದಾಳತ್ವ ವಹಿಸಿ ಮಾತನಾಡಿದರು.

“ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಆಳಿಕೆಯ ಹಮ್ಮುಗೆಗಳ ಜತೆಗೆ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಬೇಕಾದ ತರಬೇತಿ ಕೊಡಿಸಬೇಕು. ಊರುಗಳಲ್ಲಿ ಬಾಲ್ಯವಿವಾಹಗಳು ಗುಟ್ಟಾಗಿ ನಡೆಯುತ್ತವೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ಬರುವುದು ಬಹಳ ಸಲ ತಡವಾಗುತ್ತದೆ. ಆ ರೀತಿಯ ಸನ್ನಿವೇಶಗಳು ಎದುರಾಗುವ ಮೊದಲೇ ಎಚ್ಚರಿಕೆ ವಹಿಸಬೇಕು. ಶಾಲೆ-ಕಾಲೇಜುಗಳಿಗೆ ಹೆಚ್ಚು ದಿನ ಗೈರಾಗುವ ಹುಡುಗಿಯರ ಬಗ್ಗೆ ಪ್ರಾಂಶುಪಾಲರು ಗಮನಿಸುತ್ತಿರಬೇಕು. ಒಂದು ವೇಳೆ ಗೈರಾಗುವ ಹುಡುಗಿಯರ ತಂದೆತಾಯಂದಿರು ಮದುವೆ ಮಾಡುತ್ತಿರುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಬೇಕು. ಯಾವುದೇ ಒತ್ತಡಗಳಿಗೆ ಅಧಿಕಾರಿಗಳು ಮಣಿಯದೆ ದೂರು ದಾಖಲಿಸಿಕೊಂಡು ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮನಗರ ಜಿಲ್ಲೆಯಲ್ಲಿರುವ 181 ಮಹಿಳಾ ಸಹಾಯವಾಣಿಗಳ ಮೂಲಕ ಏಪ್ರಿಲ್-2024ರಿಂದ ಜುಲೈ-2024ರವರೆಗೆ 08 ಕರೆಗಳು ಸ್ವೀಕೃತವಾಗಿದ್ದು, ಈ ಪ್ರಕರಣಗಳಿಗೆ ಪೊಲೀಸ್, ಕಾನೂನು ನೆರವು, ಆಪ್ತ ಸಮಲೋಚನೆ ಸೇವೆಯನ್ನು ಕೊಡಲಾಗಿದೆ” ಎಂದು ತಿಳಿಸಿದರು.

“ಸಮಾಜದಲ್ಲಿ ದಬ್ಬಾಳಿಕೆಗೆ ಒಳಗಾದ ಮಹಿಳೆಯರಿಗೆ ಆಳಿಕೆಯಿಂದ ಸಿಗುವ ಎಲ್ಲ ಹಮ್ಮುಗೆಗಳ ಬಗ್ಗೆ ತಿಳುವಳಿಕೆ ಕೊಡಬೇಕು. ಈಗಾಗಲೇ ಕೆಲಸ ಮಾಡುತ್ತಿರುವ ಸಂಘ ಸಂಸ್ಥೆಗಳ ಮುಖಾಂತರ ನೊಂದ ಮಹಿಳೆಯರಿಗೆ ಯೋಜನೆಗಳು ತಲುಪುವಂತೆ ನೋಡಿಕೊಳ್ಳಬೇಕು” ಎಂದರು.

“ಸಮಾಜದಲ್ಲಿ ನೊಂದ ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಆಳಿಕೆಯ ಏರ್ಪಾಟುಗಳನ್ನು ರೂಪಿಸಿದೆ. ಇವುಗಳಲ್ಲದೆ ಬೇರೆ ಬೇರೆ ಉದ್ದಿಮೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಮಾಡಬೇಕು. ಇಲಾಖೆಗಳು ಇದಕ್ಕೆ ಬೇಕಾದ ತರಬೇತಿಯನ್ನು ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಡೆಸಬೇಕು. ಅನೇಕರು ಸಂಘ ಸಂಸ್ಥೆಗಳು ನಡೆಸುವ ಗಂಧದಕಡ್ಡಿ, ಮೇಣದಬತ್ತಿ, ಹಪ್ಪಳ, ಸಂಡಿಗೆ ತಯಾರಿಕಾ ಘಟಕಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪ್ರಾದೇಶಿಕವಾಗಿ ಹೆಚ್ಚು ಮಾನ್ಯತೆ ಸಿಗಬಹುದಾದ ಉದ್ದಿಮೆಗಳಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕರ್ತವ್ಯ ಲೋಪ, ಸರ್ಕಾರದ ಹಣ ದುರುಪಯೋಗ : ವೈದ್ಯಾಧಿಕಾರಿ ಅಮಾನತು

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಡಿವೈಎಸ್‌ಪಿ ದಿನಕರ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಭಿವೃದ್ಧಿ ನಿರೀಕ್ಷಕಿ ಗಾಯಿತ್ರಿ ದೇವಿ ಬಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜಿನಿ, ಜಿಲ್ಲೆಯ 5 ತಾಲೂಕುಗಳ ಶಿಶು ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...