ರಾಮನಗರ | ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ; ಎಡಿಸಿ ಚಂದ್ರಯ್ಯ ಸೂಚನೆ

Date:

ರಾಮನಗರ ಜಿಲ್ಲಾ ಮಟ್ಟದಲ್ಲಿ ಇದೇ ಆಗಸ್ಟ್ 15ರಂದು ಆಚರಿಸಲಾಗುವ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರುಗಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ(ಎಡಿಸಿ) ಆರ್ ಚಂದ್ರಯ್ಯ ಸೂಚನೆ ನೀಡಿದರು.

ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ಅಂದು ಬೆಳಿಗ್ಗೆ 9ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರಿಗೆ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು, ಎನ್‌ಸಿಸಿ ಕೆಡೆಟ್ಸ್‌ಗಳು, ಪೊಲೀಸ್, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಸಿಕೊಡಲು ಕ್ರಮ ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಯಕ್ರಮದ ಸಿದ್ದತೆ ಕುರಿತು ಕ್ರೀಡಾಂಗಣದ ಸ್ವಚ್ಛತೆ, ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಕುರಿತಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ನಾಡುನುಡಿ ಮಹತ್ವ ಬಿಂಬಿಸುವ ನಾಡಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಬೇಕು. ಜತೆಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು” ಎಂದು ತಿಳಿಸಿದರು.

“ಜಿಲ್ಲೆಯ ಎಲ್ಲ ಕಚೇರಿಗಳು, ಶಾಲಾ ಕಾಲೇಜುಗಳ ಮುಂದೆ ಅಂದು ಬೆಳಿಗ್ಗೆ 8ಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದು, ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು. ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ಮಾಡಬೇಕು. ಧ್ವಜದ ನಿಯಮ ಉಲ್ಲಂಘಿಸುವವರ ಎದುರು ಕಠಿಣ ಕ್ರಮ ಜರುಗಿಸಲಾಗುವುದು. ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಸರ್ಕಾರಿ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಾವೇರಿ ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ತಲುಪದ ನೀರು; ರೈತರಿಂದ ಧರಣಿ

“ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಂದು ಬೆಳಿಗ್ಗೆ 8:45ಕ್ಕೆ ಕಡ್ಡಾಯವಾಗಿ ಹಾಜರಾಗಬೇಕು” ಎಂದರು.

ಸಭೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...