ರಾಮನಗರ | ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದ ವಲಯ ಅರಣ್ಯಾಧಿಕಾರಿ ವಿರುದ್ಧ ಬೃಹತ್ ಪ್ರತಿಭಟನೆ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶವಿದ್ದರೂ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದೆ ಅರಣ್ಯ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕನಕಪುರ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಕರುನಾಡ ರಕ್ಷಣಾ ವೇದಿಕೆ ರಾಮನಗರ ಜಿಲ್ಲಾ ಘಟಕ ಹಾಗೂ ಪ್ರಗತಿಪರ ಒಕ್ಕೂಟಗಳ ಸಹಯೋಗದಲ್ಲಿ ಸಾತನೂರಿನ ಸಂತೆಮಾಳದಿಂದ ಕಾಲ್ನಡಿಗೆಯಲ್ಲಿ ಜಾಥ ಹೊರಟು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, “ಕನಕಪುರ ತಾಲೂಕಿನಾದ್ಯಂತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು ಹೆಚ್ಚಾಗಿ ನೆಲೆಸಿರುವ ಗ್ರಾಮಗಳಲ್ಲಿ ಸುಮಾರು 4 ತಲೆಮಾರುಗಳಿಂದ ಅಂದರೆ 75 ವರ್ಷಗಳ ಹಿಂದಿನಿಂದಲೂ ಸಾಗುವಳಿ ಮಾಡಿಕೊಂಡು ಬದುಕು ನಡೆಸುತ್ತಿರುವ ರೈತರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ತುಂಬ ತೊಂದರೆ ಉಂಟಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಾಗುವಳಿ ಹಕ್ಕುಪತ್ರ 1

“ಸಾತನೂರು ಮತ್ತು ಉಯಂಬಳ್ಳಿ ಹೋಬಳಿಯ ರೈತರ ಸಮಸ್ಯೆಗಳಾದ ಅರಣ್ಯಾಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸುತ್ತಿದ್ದು, ಹಕ್ಕುಪತ್ರಗಳನ್ನು ನೀಡದೆ ಸತಾಯಿಸುತ್ತಿದ್ದಾರೆ. ಕಾಡಂಚಿನ ಪ್ರದೇಶದ ರೈತರಿಗೆ ವ್ಯವಸಾಯ ಮಾಡಲು ಬಿಡುತ್ತಿಲ್ಲ. ಕಾಡುಪ್ರಾಣಿಗಳ ಹಾವಳಿಯನ್ನೂ ತಡೆಗಟ್ಟುತ್ತಿಲ್ಲ” ಎಂದು ಆರೋಪಿಸಿದರು.

ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ರುದ್ರೇಶ್ ಕಹಾಳೆ ಮಾತನಾಡಿ, “ಗ್ರಾಮಗಳಲ್ಲಿ ರಸ್ತೆ ಕಾಮಗಾರಿ ಮಾಡಲು ಆಗುತ್ತಿಲ್ಲ. ಜಲಜೀವನ್ ಮಿಷನ್ ಯೋಜನೆಗೆ ಕಾಂಕ್ರಿಟ್ ರಸ್ತೆ ಕೊರೆದು ಕುಡಿಯುವ ನೀರಿನ ಯೋಜನೆ ಕಲ್ಪಿಸಲು ಅಡ್ಡಿಪಡಿಸುತ್ತಿದ್ದಾರೆ‌. ಕಳೆದ ಒಂದು ವರ್ಷದಲ್ಲಿ ಆನೆಗಳ ದಾಳಿಯಿಂದ ಸುಮಾರು ಐದಾರು ಮಂದಿ ರೈತರು ಮೃತಪಟ್ಟಿದ್ದು, ರೈತರ ಸುರಕ್ಷತೆಯ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಗಮನ ಹರಿಸದೇ ಸಂಪೂರ್ಣ ವಿಫಲಗೊಂಡಿದ್ದಾರೆ. ಇದು ತಪ್ಪಬೇಕು” ಎಂದು ಒತ್ತಾಯಿಸಿದರು.

“ಅರಣ್ಯ ಇಲಾಖೆಯ ಅಧಿಕಾರಿಗಳು ಇನ್ಮುಂದೆ ರೈತರಿಗೆ ಯಾವುದೇ ತೊಂದರೆ ಕೊಡಬಾರದು. ಕೆಲವು ಗ್ರಾಮಗಳಲ್ಲಿ ಜಂಟಿ ಸರ್ವೆ ಮಾಡಿ ನಕ್ಷೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಒಪ್ಪಿಗೆ ನೀಡಿ ಈ ಹಿಂದೆ ಇದ್ದ ವಲಯ ಅರಣ್ಯಾಧಿಕಾರಿ ಮತ್ತು ಅರಣ್ಯಾಧಿಕಾರಿಗಳು ಸಹಿ ಹಾಕಿರುತ್ತಾರೆ. ಆದರೆ ಪ್ರಸಕ್ತ ಇರುವ ಅರಣ್ಯಾಧಿಕಾರಿಗಳು ಫಲಾನುಭವಿಗಳ ಚೆಕ್‌ಲಿಸ್ಟ್‌ಗೆ ಸಹಿ ಹಾಕದೇ ತೊಂದರೆ ನೀಡುತ್ತಿರುತ್ತಾರೆ. ಸಾಗುವಳಿ ಚೀಟಿ ಇಲ್ಲವೇ ಹಕ್ಕುಪತ್ರವನ್ನು ನೀಡಲು ಅಸಹಜವಾಗಿ ಅಡ್ಡಗಾಲು ಹಾಕುತ್ತಿರುವುದು ತಪ್ಪಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಲ್ಲಹಳ್ಳಿ ಶ್ರೀನಿವಾಸ್ ಹಕ್ಕೊತ್ತಾಯ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಆ.15ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

ದಾಳೇಶ್ ಕನಕಪುರ ಅರಣ್ಯ ವಲಯಾಧಿಕಾರಿ ರೈತರಿಂದ ಮನವಿ ಸ್ವೀಕರಿಸಿ “ಕಂದಾಯ ಇಲಾಖೆಯ ಜತೆಗೆ ಜಂಟಿ ಸರ್ವೆ ನಡೆಸಿ ಮೊದಲು ಅರಣ್ಯ ಗಡಿಯನ್ನು ಗುರುತಿಸಿಕೊಳ್ಳುತ್ತೇವೆ. ಅಲ್ಲಿಯವರೆಗೆ ರೈತರ ವ್ಯವಸಾಯ ಕೆಲಸಗಳಿಗೆ ಹಾಗೂ ಊರಿನ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆ ನೀಡುವುದಿಲ್ಲ” ಎಂದು ಭರವಸೆ ನೀಡಿದರು.

ದಲಿತ ಮುಖಂಡರಾದ ಜೆ ಎಂ ಶಿವಲಿಂಗಯ್ಯನವರು, ಪ್ರಗತಿಪರ ಸಂಘಟನೆಯ ಮುಖಂಡ ಚಿನ್ಕುಪ್ಪೆ, ರಕ್ಷಣಾ ವೇದಿಕೆಯ ಕಾರ್ಯಕರ್ತರು, ಸಾತನೂರು ಮತ್ತು ಉಯಂಬಳ್ಳಿ ಹೋಬಳಿಯ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...