ರಾಮನಗರ | ವೇತನ ಅಸೂಯೆ: ಸಹೋದ್ಯೋಗಿ ಗುದದ್ವಾರಕ್ಕೆ ಕಂಪ್ರೆಸ್ಸರ್ ಗಾಳಿ ಬಿಟ್ಟು ವಿಕೃತಿ

Date:

ವಿಕೃತ ವ್ಯಕ್ತಿಯೊಬ್ಬ ತನಗಿಂತ ಹೆಚ್ಚು ವೇತನ ಪಡೆಯುತ್ತಿದ್ಧಾರೆ ಎಂಬ ಕಾರಣ ತನ್ನ ಸಹೋದ್ಯೋಗಿ ಜೊತೆ ಗಲಾಟೆ ಮಾಡಿದ್ದು, ಆತ ಗುದದ್ವರಕ್ಕೆ ಕಂಪ್ರೆಸ್ಸರ್‌ ಗಾಳಿ ಬಿಟ್ಟು ವಿಕೃತಿ ಮೆರೆದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ರಾಮನಗರ ನಿವಾಸಿ ಗೋವಿಂದೇಗೌಡ (28) ಎಂದು ಗುರುತಿಸಲಾಗಿದೆ. ಆತ ತನ್ನ ಸಹೋದ್ಯೋಗಿ, ಹಾಸನ ಜಿಲ್ಲೆಯ ಬೇಲೂರು ಬಳಿಯ ಎರೆಹಳ್ಳಿ ನಿವಾಸಿ ಪರಮೇಶ್ (35) ಅವರ ಮೇಲೆ ವಿಕೃತ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಪರಮೇಶ್ ಮತ್ತು ಗೋವಿಂದೇಗೌಡ ಇಬ್ಬರೂ ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಪರಮೇಶ್ ಅವರು 35,000 ವೇತನ ಪಡೆಯುತ್ತಿದ್ದರು. ಆರೋಪಿ ಗೋವಿಂದೇಗೌಡ 18,000 ಸಂಬಳ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಮೇಶ್ ತನಗಿಂತ ಹೆಚ್ಚು ವೇತನ ಪಡೆಯುತ್ತಿದ್ಧಾನೆಂದು ಗೋವಿಂದೇಗೌಡ ಅಸಮಾಧಾನಗೊಂಡಿದ್ದ. ಇತ್ತೀಚೆಗೆ, ಈ ವೇತನ ವ್ಯತ್ಯಾಸದ ವಿಚಾರವಾಗಿ ಪರಮೇಶ್‌ ಜೊತೆ ಜಗಳ ಮಾಡಿದ್ದ. ಅದೇ ಸಮಯದಲ್ಲಿ, ‘ನಿನಗೇಕೆ ಇಷ್ಟೊಂದು ಸಂಬಳ’ ಎಂದು ಗಂಭೀರವಾಗಿ ಹಲ್ಲೆ ಮಾಡಿದ್ದಾನೆ. ಮಾತ್ರವಲ್ಲದೆ, ಪರಮೇಶ್ ಅವರ ಗುದದ್ವಾರಕ್ಕೆ ಏರ್‌ಗನ್ ಮೂಲಕ ಕಂಪ್ರೆಸರ್ ಗಾಳಿ ಬಿಟ್ಟಿದ್ದಾನೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಹಿಟ್ಲರ್ ನಡೆಸಿದ್ದ ನರಮೇಧದಿಂದ ತಪ್ಪಿಸಿಕೊಂಡು ಬದುಕಿದ್ದ ಬಾಲಕಿ ಇನ್ನಿಲ್ಲ

ಸಂತ್ರಸ್ತ ಪರಮೇಶ್‌ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕರುಳಿಗೆ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುವುದಾಗಿ ತಿಳಿದುಬಂದಿದೆ.

ಪರಮೇಶ್ ಅವರ ಪತ್ನಿ ಕೆ.ಬಿ ಸವಿತಾ ಅವರು ಗೋವಿಂದೇಗೌಡ ವಿರುದ್ಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಕೊಂಡಿರುವ ಪೊಲೀಸರು ಆರೋಪಿ ವಿರುದ್ಧ ಬಿಎನ್ಎಸ್ ಸೆಕ್ಷನ್ 289, ಬಿಎನ್ಎಸ್ 125 (ಎ), ಬಿಎನ್ಎಸ್ 352 ಅಡಿಯಲ್ಲಿ ಎಫ್‌ಐಆರ್ ದಾಖಲಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...