ರಾಮನಗರ | ಮೇಕೆದಾಟು ಅಣೆಕಟ್ಟೆಗೆ ನಿರಂತರ ಹೋರಾಟದ ಸಂಕಲ್ಪ: ರಮೇಶ್‌ಗೌಡ

Date:

ತೆಂಗಿನ ಸಸಿ ನೆಟ್ಟರೆ ಕುಟುಂಬದ ಹತ್ತಾರು ತಲೆಮಾರಿಗೆ ಕಲ್ಪವೃಕ್ಷವಾಗುವಂತೆ ಮೇಕೆದಾಟು ಅಣೆಕಟ್ಟೆ ನಿರ್ಮಾಣವಾದರೆ ಹತ್ತಾರು ತಲೆಮಾರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ನಿರಂತರ ಹೋರಾಟದ ಸಂಕಲ್ಪ ಮಾಡುತ್ತೇವೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ತಿಳಿಸಿದರು.

ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಹಾಗೂ ಸತ್ತೇಗಾಲ ಯೋಜನೆಯನ್ನು ಶೀಘ್ರವಾಗಿ ಮುಕ್ತಾಯ ಮಾಡುವಂತೆ ಆಗ್ರಹಿಸಿ ರಾಮನಗರದ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ನಡೆದ ಹೋರಾಟ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ, ರೈತರಿಗೆ 365 ತೆಂಗಿನ ಸಸಿಗಳನ್ನು ವಿತರಿಸಿ ಮಾತನಾಡಿದರು.

“ಮೇಕೆದಾಟು ಅಣೆಕಟ್ಟೆ ನಿರ್ಮಾಣದಿಂದ 6 ಜಿಲ್ಲೆಗಳಿಗೆ ನೀರಿನ ತೊಡಕು ಪರಿಹಾರವಾಗಲಿದೆ ಮತ್ತು ಜಲವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ. ಈ ಯೋಜನೆಗೆ ಸರ್ಕಾರದಲ್ಲಿ ಉತ್ಕಟ ಇಚ್ಚಾಶಕ್ತಿ ಕಾಣುತ್ತಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಈ ವರ್ಷ 70 ಟಿಎಂಸಿ ನೀರು ಸಮುದ್ರದ ಪಾಲಾಗಿದೆ. ಜತೆಗೆ ಜನತೆಯ ಬೆಂಬಲದ ಕೊರತೆಯಿಂದ ಹೋರಾಟಕ್ಕೆ ತೊಡಗಲು ಸವಾಲುಗಳಿವೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮುಖಂಡ ಹೊನ್ನಾಯ್ಕನಹಳ್ಳಿ ಕೃಷ್ಣಪ್ಪ ಮಾತನಾಡಿ, “ನಿರಂತರ ಹೋರಾಟ ಮಾಡುವುದು ಸುಲಭದ ಮಾತಲ್ಲ. ರಮೇಶ್‌ಗೌಡ ಕಳೆದ ಒಂದು ವರ್ಷದಿಂದ ಮೇಕೆದಾಟು ಅಣೆಕಟ್ಟೆಗಾಗಿ ಹೋರಾಟ ಮಾಡಿರುವುದು ಶ್ಲಾಘನೀಯ. ನಮ್ಮ ಹಕ್ಕಿಗಾಗಿ ಹೋರಾಟ ಮಾಡದಿದ್ದರೆ, ಅಧಿಕಾರಿಗಳು ದಬ್ಬಾಳಿಕೆ ಮುಂದುವರೆಸುತ್ತಾರೆ” ಎಂದರು.

ಡಿಎಸ್‌ಎಸ್‌ ಸಂಚಾಲಕ ವೆಂಕಟೇಶ್‌(ಸೇಟು) ಮಾತನಾಡಿ, “ಮೇಕೆದಾಟು ಅಣೆಕಟ್ಟೆ ನಿರ್ಮಾಣದ ಹೋರಾಟ ಒಂದು ವರ್ಷ ಪೂರೈಸಿದ್ದು, ಇದು ಜನಪರ ವೇದಿಕೆಯ ಮಹತ್ವದ ಹೋರಾಟವಾಗಿದೆ. ಎಲ್ಲ ಶಾಸಕರು ಮತ್ತು ಸಂಸದರು ಒಟ್ಟಾಗಿ ಈ ಯೋಜನೆಗೆ ಬೆಂಬಲ ನೀಡಬೇಕಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಸೀತಾಫಲʼ ಹಣ್ಣಿಗೆ ಭಾರಿ ಬೇಡಿಕೆ; ಬೇಕಿದೆ ಸೂಕ್ತ ಮಾರುಕಟ್ಟೆ

ತಾ.ಪಂ. ಮಾಜಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ಮಾತನಾಡಿ, “ಮೇಕೆದಾಟು ಅಣೆಕಟ್ಟೆಯಿಂದ ಕುಡಿಯುವ ನೀರಿನ ಜತೆಗೆ ಜಲವಿದ್ಯುತ್ ಉತ್ಪಾದನೆಗೂ ಸಹಕಾರಿಯಾಗಲಿದೆ. ರಮೇಶ್‌ಗೌಡ ಅವರು ಹೋರಾಟ ನಡೆಸುತ್ತಿರುವುದು ಮಹತ್ವದ್ದಾಗಿದೆ” ಎಂದು ಹೇಳಿದರು.

ವೇದಿಕೆ ರಾಜ್ಯ ಉಪಾಧ್ಯಕ್ಷ ರಂಜಿತ್‌ಗೌಡ, ನಗರಸಭಾ ಮಾಜಿ ಸದಸ್ಯ ಜೆಸಿಬಿ ಲೋಕೇಶ್, ತೋಟಗಾರಿಕಾ ಇಲಾಖೆ ನಿವೃತ್ತ ಅಧಿಕಾರಿ ಪುಟ್ಟಸ್ವಾಮಿ, ಶಿಕ್ಷಕ ಪುಟ್ಟಪ್ಪಾಜಿ, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ, ರೈತ ಮುಖಂಡ ಗೌಡಗೆರೆ ತಿಮ್ಮೇಗೌಡ, ರ‍್ಯಾಂಬೋ ಸೂರಿ, ಪಾನಿಪುರಿ ಚನ್ನಪ್ಪ, ರಾಜು ಹೋಟೆಲ್, ಮೆಣಸಿನಗಹಳ್ಳಿ ಮಹೇಶ್, ಭೀಮಯ್ಯ, ಬೋರ್‌ವೆಲ್ ಪುಟ್ಟು, ಉಮೇಶ್, ರಾಜಸ್ಥಾನಿ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...