ರಾಮನಗರ | ತುಂಡಾದ ಬಸ್‌ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ

Date:

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ತಿಟ್ಟಮಾರನಹಳ್ಳಿ ಬಳಿ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಕೋಟಮಾರನಹಳ್ಳಿ ಗ್ರಾಮದ ಸಿದ್ದಯ್ಯ (60) ಮತ್ತು ಅವರ ಮಗ ಅರುಣ್ (27) ಮೃತಪಟ್ಟಿದ್ದಾರೆ.

ತಂದೆ-ಮಗ ಇಬ್ಬರು ಬೈಕ್‌ನಲ್ಲಿ ಚನ್ನಪಟ್ಟಣಕ್ಕೆ ತೆರಳುತ್ತಿದ್ದರು. ಈ ವೇಳೆ, ಬೈಕ್‌ಗೆ ಎದುರಿನಿಂದ ಬಂದ ಬಸ್‌ ಢಿಕ್ಕಿ ಹೊಡೆದಿದೆ. ಅರುಣ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಿದ್ದಯ್ಯ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ, ದಾರಿ ಮಧ್ಯೆಯೇ ಅವರೂ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ ಹಳೆಯದಾಗಿದ್ದರಿಂದ ಚಲಿಸುವಾಗಲೇ ಅದರ ಸ್ಟೇರಿಂಗ್ ಕಟ್‌ ಆಗಿದೆ. ಹೀಗಾಗಿ, ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಢಿಕ್ಕಿಯಾಗಿದೆ. ಕರೆಯ ಏರಿ ಮೇಲೆ ಘಟನೆ ನಡೆದಿದ್ದು, ಕರೆಯ ಬಳಿ ರಸ್ತೆಗೆ ತಡೆಗೋಡೆ ಇದ್ದ ಕಾರಣ, ಬಸ್‌ ಬ್ಯಾರಿಕೇಡ್‌ಗೆ ಗುದ್ದಿ, ನಿಂತಿದೆ. ಒಂದು ವೇಳೆ, ಬ್ಯಾರಿಕೇಡ್ ಇಲ್ಲದಿದ್ದಾರೆ, ಬಸ್‌ ಕೆರೆಗೆ ಉರುಳುವ ಅಪಾಯವಿತ್ತು ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...