ಕಾವೇರಿ ವಿವಾದ | ಪ್ರತಿಭಟನೆ ವೇಳೆ ತಮಿಳು ಸಿಎಂ ಅಣಕು ತಿಥಿ; ಎಫ್‌ಐಆರ್ ದಾಖಲು

Date:

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ನಡೆದ ಬಂದ್‌ ವೇಳೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಭಾವಚಿತ್ರವಿಟ್ಟು ಅಣಕು ತಿಥಿ ಮಾಡಲಾಗಿದೆ. ಅಣಕು ತಿಥಿ ಮಾಡಿ ಪ್ರತಿಭಟನೆ ನಡೆಸಿದ್ದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶಗೌಡ ಹಾಗೂ ಕಾರ್ಯಕರ್ತರ ವಿರುದ್ದ ರಾಮನಗರದ ಐಜೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳವಾರ ಬೆಂಗಳೂರು ಮತ್ತು ರಾಮನಗರ ಬಂದ್‌ಗೆ ಕರೆಕೊಡಲಾಗಿತ್ತು. ಬಂದ್‌ ವೇಳೆ, ರಾಮನಗರದ ಬಸ್‌ ನಿಲ್ದಾಣದ ಎದುರು ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಆ ಸಮಯದಲ್ಲಿ, ಸ್ಟಾಲಿನ್ ಅವರ ಭಾವಚಿತ್ರವಿಟ್ಟು, ಅದಕ್ಕೆ ಹೂವಿನ ಹಾರ ಹಾಕಿ, ವಿವಿಧ ತಿನಿಸುಗಳನ್ನಿಟ್ಟು, ಹಾಲು-ತುಪ್ಪ ಹಾಕಿ ಅಣಕು ತಿಥಿ ಮಾಡಿ ಆಕ್ರೋಶ ವ್ಯಕ್ತಪಡಿದ್ದರು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಾಮೇಶಗೌಡ ಅವರು ಎರಡು ಭಾಷಿಕರ ನಡುವೆ ದ್ವೇಷ ಮತ್ತು ವೈಷಮ್ಯ ಸೃಷ್ಟಿಸುವ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರಮೇಶಗೌಡ ಮತ್ತು ಹಲವು ಕಾರ್ಯಕರ್ತರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 143, 143,147, 153, 290, 341, 504, 505(2) ಹಾಗೂ 149ರಡಿ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...