ರಾಮನಗರ | ಮರಣೋತ್ತರ ಪರೀಕ್ಷೆ; ರೈಲು ಡಿಕ್ಕಿಯಿಂದಲೇ ಬಾಲಕಿ ಸಾವು ಎಂದ ಎಸ್‌ಪಿ

Date:

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರದಲ್ಲಿ ಅಪ್ರಾಪ್ತ ಬಾಲಕಿಯದ್ದು ಕೊಲೆಯಲ್ಲ, ಬದಲಿಗೆ ರೈಲು ಅಪಘಾತವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ಅವರು ಹೇಳಿದ್ದಾರೆ. 15 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯಾಗಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಇದು ಕೊಲೆಯಲ್ಲ ಅಪಘಾತ ಎಂದು ತಿಳಿದುಬಂದಿದೆ ಎಂದು ವರದಿಯಾಗಿದೆ.

ಸೋಮವಾರ ಮರಣೋತ್ತರ ಪರೀಕ್ಷೆಯ ವರದಿ ಸಿಕ್ಕಿದೆ. ಜೊತೆಗೆ ರೈಲು ಅಪಘಾತದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯು ವಾಟ್ಸಾಪ್ ಮೂಲಕ ಹರಿದಾಡಿದೆ. ಪೊಲೀಸರು ಈ ವಿಡಿಯೋ ಅಸಲಿ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಡದಿ | ಮೂಕ ಬಾಲಕಿ ಅಪಹರಿಸಿ ಕೊಲೆ, ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಸಂಸ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ, “ಬಾಲಕಿಯ ಮರಣೋತ್ತರ ಪರೀಕ್ಷೆ ವರದಿ ಮತ್ತು ಎಫ್‌ಎಸ್‌ಎಲ್ ವರದಿ ಸಿಕ್ಕಿದೆ. ಎಲ್ಲಾ ಆಯಾಮಗಳಿಂದ ಈ ಪ್ರಕರಣದ ತನಿಖೆ ನಡೆಸಲಾಗಿದೆ. ಈ ಪ್ರಕರಣದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು” ಎಂದು ಹೇಳಿದರು.

“ಎಫ್‌ಎಸ್‌ಎಲ್‌ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ತಲೆಗೆ ಏಟಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ ತನಿಖೆಯಲ್ಲಿ ರೈಲ್ವೆ ಇನ್ಸ್‌ಟಿಟ್ಯೂಟ್ ಕ್ಯಾಮೆರಾ ವಿಡಿಯೋ ಲಭಿಸಿದೆ. ಎರಡು ಸಿಸಿ ಕ್ಯಾಮೆರಾದಲ್ಲಿ ಬಾಲಕಿಯ ಚಲನವಲನದ ಪರಿಶೀಲಿಸಿದ್ದೇವೆ. ರೈಲ್ವೆ ಅಪಘಾತದಿಂದ ಬಾಲಕಿ ಮೃತಪಟ್ಟಿರುವುದು ಖಚಿತವಾಗಿದೆ” ಎಂದು ಹೇಳಿದರು.

ರಾಮನಗರ ಜಿಲ್ಲೆ ಬಿಡದಿಯಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ಬಾಲಕಿಯು ಶವವಾಗಿ ಪತ್ತೆಯಾಗಿದ್ದಳು. “ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ” ಎಂದು ಹೇಳಿ ಪೋಷಕರು ಹೇಳಿದ್ದರು.

ಇದಾದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅದಾದ ಬಳಿಕ ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸ್ಥಳಕ್ಕೆ ಧಾವಿಸಿದ ನಂತರ ಸ್ಥಳೀಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ನಡೆದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನಕಪುರ | ಸಾತನೂರು ಸಂತೆ ಜಾಗ ಅತಿಕ್ರಮಣ; ರಸ್ತೆಯಲ್ಲೇ ವ್ಯಾಪಾರ ಮಾಡುವ ದುಸ್ಥಿತಿ

​ಕನಕಪುರ ತಾಲೂಕಿನ ಸಾತನೂರು ಹೋಬಳಿಯಲ್ಲಿ ಸಂತೆ ಮೈದಾನದ ಜಾಗವನ್ನು ಅತಿಕ್ರಮಣ ಮಾಡಲಾಗಿದ್ದು,...

ಕನಕಪುರ | ನಿಗದಿತ ಸಮಯಕ್ಕೆ ಬಾಗಿಲು ತೆರೆಯದ ರೇಷ್ಮೆ ಇಲಾಖೆ ಕಚೇರಿ; ಸಾರ್ವಜನಿಕರ ಆಕ್ರೋಶ

ಸರಕಾರಿ ಕಚೇರಿಗಳು ಜನಸಾಮಾನ್ಯರ ಸೇವೆಗಾಗಿ ನಿಗದಿತ ಸಮಯಕ್ಕೆ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ,...

ಎಗ್ಗಿಲ್ಲದೆ ನಡೆಯುತ್ತಿರುವ ಸೈಬರ್‌ ಕ್ರೈಮ್‌: ‘ಲೈಫ್ ಸರ್ಟಿಫಿಕೇಟ್’ ಹೆಸರಲ್ಲಿ ₹8 ಲಕ್ಷ ವಂಚನೆ

ಆಧುನಿಕ ಡಿಜಿಟಲ್ ಯುಗದಲ್ಲಿ ಸೈಬರ್‌ ಕ್ರೈಮ್‌ಗಳು ಸಮಾಜದ ಒಂದು ದೊಡ್ಡ ಸವಾಲಾಗಿ...

‘ಚಪ್ಪಲಿಯಲ್ಲಿ ಹೊಡಿತಾರೆ’: ಮಾಗಡಿ ತಹಶೀಲ್ದಾರ್‌ಗೆ ಶಾಸಕ ಬಾಲಕೃಷ್ಣ ಆವಾಜ್!

'ನಿನಗೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ' ಎಂದು ಮಾಗಡಿ ತಜಶೀಲ್ದಾರ್‌ಗೆ ಶಾಸಕ ಎಚ್‌ಸಿ...