ಕಾಂಗ್ರೆಸ್ ಸೇರ್ಪಡೆಗೊಂಡ ಸಿ ಪಿ ಯೋಗೇಶ್ವರ್; ಚನ್ನಪಟ್ಟಣದಿಂದ ಸ್ಪರ್ಧೆ

Date:

ದಿಢೀರ್‌ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಕೈಹಿಡಿದರು. ಇದರೊಂದಿಗೆ ಚನ್ನಪಟ್ಟಣ ಉಪ ಚುನಾವಣೆಗೆ ಸಿ ಪಿ ಯೋಗೇಶ್ವರ್ ಕಾಂಗ್ರೆಸ್‌ನ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಿಂದ ಚನ್ನಪಟ್ಟಣ ಉಪ ಚುನಾವಣೆ ಮತ್ತಷ್ಟು ರಂಗೇರಲಿದೆ. ಎರಡು ದಿನಗಳ ಹಿಂದೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ ಪಿ ಯೋಗೇಶ್ವರ್‌ ಇಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸಿಎಂ ನಿವಾಸದಿಂದ ಇಬ್ಬರು ಒಂದೇ ಕಾರಿನಲ್ಲಿ ತೆರಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಗುರುವಾರ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಘೋಷಣೆ ಮಾಡಿರುವ ಸಿಪಿ ಯೋಗೇಶ್ವರ್‌ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತಾರಾ, ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಾರಾ, ಬಿಎಸ್‌ಪಿ ಅಥವಾ ಎಸ್‌ಪಿಯತ್ತ ಮುಖ ಮಾಡುತ್ತಾರಾ ಎಂಬುದು ತೀವ್ರ ಕುತೂಹಲ ಕೆರಳಿಸಿತ್ತು. ಈಗ ಕಾಂಗ್ರೆಸ್‌ ಸೇರ್ಪಡೆಯೊಂದಿಗೆ ಎಲ್ಲದಕ್ಕೂ ತೆರೆಬಿದ್ದಿದೆ.

ಸಿ ಪಿ ಯೋಗೇಶ್ವರ್‌ ಬಿಜೆಪಿ ಚಿಹ್ನೆ ಅಡಿಯಲ್ಲೇ ಸ್ಪರ್ಧೆ ಮಾಡಲು ಅವಕಾಶ ಕೊಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ, ಕ್ಷೇತ್ರವನ್ನು ಬಿಟ್ಟುಕೊಡಲು ಜೆಡಿಎಸ್‌ನ ಹೆಚ್‌ ಡಿ ಕುಮಾರಸ್ವಾಮಿ ಸಿದ್ದರಿರಲಿಲ್ಲ. ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟುಕೊಡಬಾರದು ಎಂಬುವುದು ಜೆಡಿಎಸ್‌ ಕಾರ್ಯಕರ್ತರ ಪಟ್ಟಾಗಿತ್ತು. ಈಗ ಜೆಡಿಎಸ್‌ – ಬಿಜೆಪಿ ಮೈತ್ರಿ ಪಕ್ಷದಿಂದ ಯಾರು ಚನ್ನಪಟ್ಟಣಕ್ಕೆ ಅಭ್ಯರ್ಥಿಯಾಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...