ರಾಮನಗರ | ಅಂಗಡಿ ಮಾಲೀಕನ ಬಳಿ 1.6 ಲಕ್ಷ ರೂ. ಸುಲಿಗೆ ಆರೋಪ: ಪಿಎಸ್‌ಐ ಅಮಾನತು

Date:

ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ ಹಾಕಿ ಜೆರಾಕ್ಸ್ ಅಂಗಡಿ ಮಾಲೀಕನಿಂದ ಸುಮಾರು 1.6 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ.

ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆಯ ಕನಕಪುರ ತಾಲೂಕಿನ ಕಗ್ಗಲೀಪುರ ಠಾಣೆಯ ಪಿಎಸ್‌ಐ ಹರೀಶ್ ಅಮಾನತುಗೊಂಡ ಅಧಿಕಾರಿ. ಅವರನ್ನು ಅಮಾನತು ಮಾಡಿ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.

ಕನಕಪುರದಲ್ಲಿ ಜೆರಾಕ್ಸ್ ಅಂಗಡಿ ನಡೆಸುತ್ತಿದ್ದ ರಾಜೇಶ್ ಎಂಬರನ್ನು ಸುಳ್ಳು ಆರೋಪದ ಮೇಲೆ ಬೆದರಿಸಿ ಪಿಎಸ್‌ಐ ಹರೀಶ್ ಹಣ ಸುಲಿಗೆ ಮಾಡಿದ್ದಾರೆ. ರಾಜೇಶ್‌ಗೆ ಆಗ್ಗಾಗೆ ಕರೆ ಮಾಡುತ್ತಿದ್ದ ಪಿಎಸ್‌ಐ ಹರೀಶ್, “ನೀವು ನಕಲಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದೀರಿ ಎಂಬ ಗಂಭೀರ ಆರೋಪ ಇದೆ. ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ವಜಾ ಮಾಡಲು ಹಣ ಕೊಡಬೇಕು” ಎಂದು ಬೇಡಿಕೆ ಇಟ್ಟಿದ್ದಾಗಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಪ್ರಕರಣಗಳಿಗೆ ಹೆದರಿದ ರಾಜೇಶ್ ಅವರು ಪಿಎಸ್‌ಐಗೆ 1.6 ಲಕ್ಷ ರೂ.ಗಳನ್ನು ಮೂರು ಕಂತುಗಳಲ್ಲಿ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

ಮಾಡದ ತಪ್ಪಿಗೆ ಬೃಹತ್ ಮೊತ್ತದ ಹಣ ಕೊಟ್ಟು ಕಂಗಾಲಾಗಿದ್ದ ರಾಜೇಶ್, ಧೈರ್ಯ ಮಾಡಿ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಅವರ ದೂರನ್ನು ಪರಿಶೀಲಿಸಿದ ಗೃಹ ಇಲಾಖೆ, ದೂರನ್ನು ರಾಮನಗರ ಎಸ್‌ಪಿಗೆ ವರ್ಗಾಯಿಸಿದೆ. ಪ್ರಾಥಮಿಕ‌ ತನಿಖೆ ನಡೆಸಿದ ಎಸ್‌ಪಿ ಶ್ರೀನಿವಾಸ ಗೌಡ, ಆರೋಪಿ ಪಿಎಸ್‌ಪಿ ಹರೀಸ್‌ ಅವರನ್ನು ಅಮಾನತು ಮಾಡಿದ್ದಾರೆ.

“ಪಿಎಸ್‌ಐ ವಿರುದ್ಧದ ಆರೋಪ ಕುರಿತು ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ನಂತರ‌ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ, ಪಿಎಸ್‌ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ” ಎಂದು ಎಸ್‌ಪಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...