ಕನಕಪುರ | ರೇಷ್ಮೆ ಇಲಾಖೆಯಲ್ಲಿ 3 ಕೋಟಿ ಹಗರಣ; ಸಹಾಯಕ ನಿರ್ದೇಶಕನ ವಿರುದ್ಧ ದೂರು

Date:

​ಕನಕಪುರ ತಾಲೂಕಿನ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರು ಕೋಟ್ಯಂತರ ರೂಪಾಯಿ ಸರಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಾಹಿತಿ ಹಕ್ಕು ಹೋರಾಟಗಾರರು ಭ್ರಷ್ಟಾಚಾರದ ವಿರುದ್ಧ ದೂರು ದಾಖಲಿಸಿದ್ದಾರೆ.

ಕನಕಪುರ ತಾಲೂಕಿನ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತುರಾಜ್ ಅವರು 2017 ರಿಂದ 2021ರ ಅವಧಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ’ (PMKSY) ಅಡಿಯಲ್ಲಿ ಸುಮಾರು 3 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

​ಆರೋಪಿತ ಅಧಿಕಾರಿ ಮುತ್ತುರಾಜ್ ‘ನಾಗಾರ್ಜುನ ಫರ್ಟಿಲೈಸರ್ ಕೆಮಿಕಲ್ಸ್’ ಸಂಸ್ಥೆಯೊಂದಿಗೆ ಕೈಜೋಡಿಸಿ, ‘ಮುಂಗಾರು ಎಂಟರ್ಪ್ರೈಸಸ್’ ಎಂಬ ಹೆಸರಿನ ನಕಲಿ ಕಂಪನಿಯನ್ನು ಸೃಷ್ಟಿಸಿಕೊಂಡಿದ್ದರು ಎನ್ನಲಾಗಿದೆ. ಈ ನಕಲಿ ಕಂಪನಿಯ ಹೆಸರಿನಲ್ಲಿ ಯೋಜನೆಯ ಹಣವನ್ನು ಪಡೆದು, ನಂತರ ಆ ಮೊತ್ತವನ್ನು ಅಧಿಕಾರಿಯ ಪತ್ನಿಯ ವೈಯಕ್ತಿಕ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಳ್ಳುವ ಮೂಲಕ ಸರ್ಕಾರಕ್ಕೆ ವಂಚಿಸಿದ್ದಾರೆ ಎಂಬ ಅಂಶ ತನಿಖೆಯಿಂದ ಬೆಳಕಿಗೆ ಬರಬೇಕಿದೆ.

ಇದನ್ನೂ ಓದಿ: ಕನಕಪುರ | ಸಾತನೂರು ಸಂತೆ ಜಾಗ ಅತಿಕ್ರಮಣ; ರಸ್ತೆಯಲ್ಲೇ ವ್ಯಾಪಾರ ಮಾಡುವ ದುಸ್ಥಿತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಈ ಬೃಹತ್ ಭ್ರಷ್ಟಾಚಾರದ ಜಾಲವನ್ನು ಬಯಲಿಗೆಳೆದಿರುವ ಮಾಹಿತಿ ಹಕ್ಕು ಬಳಕೆದಾರರಾದ ಸ್ವಾಮಿ ಎಚ್.ಎಸ್. ಸಂಬಂಧಪಟ್ಟ ಇಲಾಖೆ ಹಾಗೂ ಭ್ರಷ್ಟಾಚಾರ ನಿಗ್ರಹದಳಕ್ಕೆ ಈಗಾಗಲೇ ದೂರು ನೀಡಿದ್ದಾರೆ. ಕಠಿಣ ಶ್ರಮ ಪಡುವ ರೇಷ್ಮೆ ಬೆಳೆಗಾರರಿಗೆ ತಲುಪಬೇಕಾದ ಸಬ್ಸಿಡಿ ಮತ್ತು ಸೌಲಭ್ಯಗಳನ್ನು ಅಧಿಕಾರಿಗಳು ತಮ್ಮ ವೈಯಕ್ತಿಕ ಲಾಭಕ್ಕೆ ಬಳಸಿಕೊಂಡಿರುವುದು ರೈತ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

​ಈ ಹಗರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಯಿಂದ ಹಣ ವಸೂಲಿ ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನಕಪುರ | ನಿಗದಿತ ಸಮಯಕ್ಕೆ ಬಾಗಿಲು ತೆರೆಯದ ರೇಷ್ಮೆ ಇಲಾಖೆ ಕಚೇರಿ; ಸಾರ್ವಜನಿಕರ ಆಕ್ರೋಶ

ಸರಕಾರಿ ಕಚೇರಿಗಳು ಜನಸಾಮಾನ್ಯರ ಸೇವೆಗಾಗಿ ನಿಗದಿತ ಸಮಯಕ್ಕೆ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ,...

ಎಗ್ಗಿಲ್ಲದೆ ನಡೆಯುತ್ತಿರುವ ಸೈಬರ್‌ ಕ್ರೈಮ್‌: ‘ಲೈಫ್ ಸರ್ಟಿಫಿಕೇಟ್’ ಹೆಸರಲ್ಲಿ ₹8 ಲಕ್ಷ ವಂಚನೆ

ಆಧುನಿಕ ಡಿಜಿಟಲ್ ಯುಗದಲ್ಲಿ ಸೈಬರ್‌ ಕ್ರೈಮ್‌ಗಳು ಸಮಾಜದ ಒಂದು ದೊಡ್ಡ ಸವಾಲಾಗಿ...

‘ಚಪ್ಪಲಿಯಲ್ಲಿ ಹೊಡಿತಾರೆ’: ಮಾಗಡಿ ತಹಶೀಲ್ದಾರ್‌ಗೆ ಶಾಸಕ ಬಾಲಕೃಷ್ಣ ಆವಾಜ್!

'ನಿನಗೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ' ಎಂದು ಮಾಗಡಿ ತಜಶೀಲ್ದಾರ್‌ಗೆ ಶಾಸಕ ಎಚ್‌ಸಿ...

ರಾಮನಗರ | ಅಂಗಡಿ ಮಾಲೀಕನ ಬಳಿ 1.6 ಲಕ್ಷ ರೂ. ಸುಲಿಗೆ ಆರೋಪ: ಪಿಎಸ್‌ಐ ಅಮಾನತು

ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ...