ಕನಕಪುರ | ಮುಂದಿನ ತಲೆಮಾರಿಗೆ ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್

Date:

ಮುಂದಿನ ತಲೆಮಾರಿಗೆ ಪರಿಸರ ಉಳಿಸುವ ಮೂಲಕ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಪರಿಸರವಾದಿ ರೇವತಿ ಕಾಮತ್ ಹೇಳಿದರು.

ಕನಕಪುರ ರಸ್ತೆಯಲ್ಲಿರುವ ʼಧೀ DHEEʼ ಆಸ್ಪತ್ರೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಧೀ ಶಕ್ತಿ ಉದ್ಘಾಟಿಸಿ ಮಾತನಾಡಿದ ಅವರು, “ಜನರು ತಮ್ಮ ಅಭಿವೃದ್ಧಿ ಬಗ್ಗೆ ನೋಡುತ್ತಿದ್ದಾರೆಯೇ ಹೊರತು, ಪರಿಸರ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದೇ ಇರುವುದು ಬೇಸರದ ಸಂಗತಿ. ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಮಾಲಿನ್ಯ ಮಾಡುವುದನ್ನು ತಡೆಯಬೇಕು” ಎಂದರು.

“ಬಿಲ್ಡರ್‌ಗಳು ಕೇವಲ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡುವಲ್ಲಿ ಆಲೋಚನೆ ಮಾಡುತ್ತಿದ್ದಾರೆಯೇ ಹೊರತು ಅವರಿಗೆ ಪರಿಸರ ಕಾಳಜಿ ಇಲ್ಲ. ನಾವು ಕಾಳಜಿ ಬಗ್ಗೆ ಮಾತನಾಡುತ್ತೇವೆಯೇ ಹೊರತು ಯಾರೂ ಅದರ ಬಗ್ಗೆ ಆಸಕ್ತಿ ವಹಿಸುವುದಿಲ್ಲ. ಮನೆಯಲ್ಲಿ ಬೆಳೆಸುವ ಸಸಿಗಳ ಬಗ್ಗೆ ನಮಗೆ ಸ್ವಲ್ಪವೂ ತಿಳಿವಳಿಕೆ ಇರುವುದಿಲ್ಲ. ಆದರೂ, ನಾವು ನಮ್ಮದಲ್ಲದ ಗಿಡಗಳನ್ನು ಬೆಳೆಸುತ್ತೇವೆ. ರೈತರೂ ಕೂಡ ಅನವಶ್ಯಕವಾಗಿ ಕೀಟನಾಶಕ ಬಳಕೆ ಮಾಡುತ್ತಾರೆ. ಇದು ಪರಿಸರ ವಿನಾಶವಾಗಿದೆ. ಇದರ ಬಗ್ಗೆ ಎಚ್ಚರವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಅನುಪಮಾ ಹೊಸಕೆರೆ ಮಾತನಾಡಿ, “ನಾವು ಇತಿಹಾಸ ನೋಡಿದರೆ, ಮಹಿಳೆಯರ ಶಕ್ತಿ ಬಹಳಷ್ಟಿದೆ. ನಾವು ಎದುರಾಗುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಮಹಿಳೆಯರು ಯಾವುದೇ ಕಷ್ಟ ಬಂದರೂ ಧೃತಿಗೆಡಬಾರದು. ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗಬಾರದು. ನಾವು ನಮ್ಮ ಇರುವಿಕೆಯನ್ನು ತೋರಿಸಬೇಕು” ಎಂದರು.

“ಮಹಿಳೆಯರಿಗೆ ಅರ್ಥಿಕ ಸ್ವಾತಂತ್ರ್ಯ ಬಹಳ ಮುಖ್ಯ. ಮಹಿಳೆಯರು ಮದುವೆ ನಂತರ ಗೃಹಿಣಿಯಾಗಿ ಉಳಿಯುವುದೇ ಹೆಚ್ಚು. ನೀವು ಈ ರೀತಿ ಆಗಬೇಡಿ. ನೀವು ಆರ್ಥಿಕವಾಗಿ ಸಬಲರಾಗಬೇಕು” ಎಂದು ಬ್ರಿಗೇಡ್ ಗ್ರೂಪ್ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ನಿರುಪಮಾ ಶಂಕರ್ ಕಿವಿಮಾತು ಹೇಳಿದರು.

“ಸುರಕ್ಷತೆ ಮತ್ತು ಭದ್ರತೆಯನ್ನು ಬೇರೆಯವರು ಮಾಡಿಕೊಡುವುದಿಲ್ಲ. ನಾವು ಮಾಡಿಕೊಳ್ಳುವುದಾಗಿದೆ. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬೇಕು. ಮಹಿಳೆಯರು ಆತ್ಮವಿಶ್ವಾಸ ಇಟ್ಟುಕೊಂಡು ಎಲ್ಲ ಕ್ಷೇತ್ರದಲ್ಲೂ ಮುನ್ನಡೆಯಬೇಕು” ಎಂದು ವಿಬು ಅಕಾಡೆಮಿ ಸಂಸ್ಥಾಪಕಿ ಡಾ. ವಿ ಬಿ ಆರತಿ ತಿಳಿಸಿದರು.

“ನಮ್ಮ ಆಸ್ಪತ್ರೆಯಲ್ಲಿ ದಾನಿಗಳಿಂದ ಸಹಾಯ ಪಡೆದು ಬಹುತೇಕ ರೋಗಿಗಳಿಗೆ ಚಿಕಿತ್ಸೆ ಕಲ್ಪಿಸಿಕೊಟ್ಟಿದ್ದೇವೆ. ಇದರಿಂದ ಬಹುತೇಕರು ಇಂದು ಕ್ರೀಡಾ ಪಟುಗಳಾಗಿ ಉಳಿದುಕೊಂಡಿದ್ದಾರೆ. ನಾವು ಗುಣಮಟ್ಟ ಚಿಕಿತ್ಸೆಯನ್ನು ನೀಡುತ್ತೇವೆ” ಧೀ ಶಕ್ತಿ ಆಸ್ಪತ್ರೆಯ ನರರೋಗ ತಜ್ಞ ಡಾ. ಚಂದ್ರಶೇಖರ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಸತತ ಅಧ್ಯಯನ, ಪರಿಶ್ರಮದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ: ಡಾ. ಸುಜಾತ ಅಕ್ಕಿ

ಇದೇ ವೇಳೆ ನಟಿ ಗಿರಿಜಾ ಲೋಕೇಶ್, ಹೇಮಾ ಶಾನಭೋಗ್, ಪತ್ರಕರ್ತೆ ಮಿನಿ ಥಾಮಸ್ ಹಾಗೂ ಇತರೆ ಮಹಿಳಾ ಸಾಧಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಡಾ. ಸುಪ್ರಜಾ ಚಂದ್ರಶೇಖರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನಕಪುರ | ನಿಗದಿತ ಸಮಯಕ್ಕೆ ಬಾಗಿಲು ತೆರೆಯದ ರೇಷ್ಮೆ ಇಲಾಖೆ ಕಚೇರಿ; ಸಾರ್ವಜನಿಕರ ಆಕ್ರೋಶ

ಸರಕಾರಿ ಕಚೇರಿಗಳು ಜನಸಾಮಾನ್ಯರ ಸೇವೆಗಾಗಿ ನಿಗದಿತ ಸಮಯಕ್ಕೆ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ,...

ಎಗ್ಗಿಲ್ಲದೆ ನಡೆಯುತ್ತಿರುವ ಸೈಬರ್‌ ಕ್ರೈಮ್‌: ‘ಲೈಫ್ ಸರ್ಟಿಫಿಕೇಟ್’ ಹೆಸರಲ್ಲಿ ₹8 ಲಕ್ಷ ವಂಚನೆ

ಆಧುನಿಕ ಡಿಜಿಟಲ್ ಯುಗದಲ್ಲಿ ಸೈಬರ್‌ ಕ್ರೈಮ್‌ಗಳು ಸಮಾಜದ ಒಂದು ದೊಡ್ಡ ಸವಾಲಾಗಿ...

‘ಚಪ್ಪಲಿಯಲ್ಲಿ ಹೊಡಿತಾರೆ’: ಮಾಗಡಿ ತಹಶೀಲ್ದಾರ್‌ಗೆ ಶಾಸಕ ಬಾಲಕೃಷ್ಣ ಆವಾಜ್!

'ನಿನಗೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ' ಎಂದು ಮಾಗಡಿ ತಜಶೀಲ್ದಾರ್‌ಗೆ ಶಾಸಕ ಎಚ್‌ಸಿ...

ರಾಮನಗರ | ಅಂಗಡಿ ಮಾಲೀಕನ ಬಳಿ 1.6 ಲಕ್ಷ ರೂ. ಸುಲಿಗೆ ಆರೋಪ: ಪಿಎಸ್‌ಐ ಅಮಾನತು

ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ...