ಕನಕಪುರ | ಮನರೇಗಾ ಅಕ್ರಮ; ಒಂಬಡ್ಸ್‌ಮನ್ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

Date:

​ಕನಕಪುರ ತಾಲೂಕಿನ ಸಾತನೂರು ಹೋಬಳಿಯ ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಹರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಿಲ್ಲಾ ಒಂಬಡ್ಸ್‌ಮನ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.

​ಹರಿಹರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ ಎಂದು ಸ್ಥಳೀಯ ಸಾಮಾಜಿಕ ಹೋರಾಟಗಾರರಾದ ಸ್ವಾಮಿ ಹರಿಹರ ಜಿಲ್ಲಾ ಒಂಬಡ್ಸ್‌ಮನ್ ಅವರಿಗೆ ದಾಖಲೆ ಸಮೇತ ದೂರು ನೀಡಿದ್ದರು. ಈ ದೂರಿನ ಗಂಭೀರತೆಯನ್ನು ಪರಿಗಣಿಸಿದ ಅಧಿಕಾರಿಗಳು ಕಾಮಗಾರಿಗಳ ನೈಜತೆಯನ್ನು ತಿಳಿಯಲು ಸ್ಥಳಕ್ಕೆ ಭೇಟಿ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಕಾಮಗಾರಿ ನಡೆದಿದೆ ಎನ್ನಲಾದ ಸ್ಥಳಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಮಂಜೂರಾದ ಅನುದಾನ ಮತ್ತು ವಾಸ್ತವವಾಗಿ ನಡೆದಿರುವ ಕೆಲಸಗಳ ನಡುವಿನ ವ್ಯತ್ಯಾಸವನ್ನು ಗಮನಿಸಿದರು. ಈ ವೇಳೆ ಗ್ರಾಮಸ್ಥರಿಂದಲೂ ಮಾಹಿತಿಯನ್ನು ಪಡೆದುಕೊಳ್ಳಲಾಯಿತು.

​ಈ ಸಂದರ್ಭದಲ್ಲಿ ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ), ನರೇಗಾ ಇಂಜಿನಿಯರ್, ಜಿಲ್ಲಾ ಒಂಬಡ್ಸ್‌ಮನ್ ಅಧಿಕಾರಿಗಳು ಹಾಗೂ ದೂರುದಾರರಾದ ಸ್ವಾಮಿ ಹರಿಹರ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕನಕಪುರ | ಸಾತನೂರು ಸಂತೆ ಜಾಗ ಅತಿಕ್ರಮಣ; ರಸ್ತೆಯಲ್ಲೇ ವ್ಯಾಪಾರ ಮಾಡುವ ದುಸ್ಥಿತಿ

ಪರಿಶೀಲನೆ ವೇಳೆ ಕಂಡುಬಂದ ಲೋಪದೋಷಗಳ ಬಗ್ಗೆ ವರದಿ ಸಿದ್ಧಪಡಿಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.

“ಬಡವರಿಗಾಗಿ ಇರುವ ಯೋಜನೆಯಲ್ಲಿ ಅಕ್ರಮ ಎಸಗಿರುವುದು ಖಂಡನೀಯ, ಶೀಘ್ರವೇ ಸತ್ಯಾಸತ್ಯತೆ ಹೊರಬರಲಿದೆ” ಎಂದು ಸ್ಥಳೀಯರು ಆಶಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನಕಪುರ | ನಿಗದಿತ ಸಮಯಕ್ಕೆ ಬಾಗಿಲು ತೆರೆಯದ ರೇಷ್ಮೆ ಇಲಾಖೆ ಕಚೇರಿ; ಸಾರ್ವಜನಿಕರ ಆಕ್ರೋಶ

ಸರಕಾರಿ ಕಚೇರಿಗಳು ಜನಸಾಮಾನ್ಯರ ಸೇವೆಗಾಗಿ ನಿಗದಿತ ಸಮಯಕ್ಕೆ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ,...

ಎಗ್ಗಿಲ್ಲದೆ ನಡೆಯುತ್ತಿರುವ ಸೈಬರ್‌ ಕ್ರೈಮ್‌: ‘ಲೈಫ್ ಸರ್ಟಿಫಿಕೇಟ್’ ಹೆಸರಲ್ಲಿ ₹8 ಲಕ್ಷ ವಂಚನೆ

ಆಧುನಿಕ ಡಿಜಿಟಲ್ ಯುಗದಲ್ಲಿ ಸೈಬರ್‌ ಕ್ರೈಮ್‌ಗಳು ಸಮಾಜದ ಒಂದು ದೊಡ್ಡ ಸವಾಲಾಗಿ...

‘ಚಪ್ಪಲಿಯಲ್ಲಿ ಹೊಡಿತಾರೆ’: ಮಾಗಡಿ ತಹಶೀಲ್ದಾರ್‌ಗೆ ಶಾಸಕ ಬಾಲಕೃಷ್ಣ ಆವಾಜ್!

'ನಿನಗೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ' ಎಂದು ಮಾಗಡಿ ತಜಶೀಲ್ದಾರ್‌ಗೆ ಶಾಸಕ ಎಚ್‌ಸಿ...

ರಾಮನಗರ | ಅಂಗಡಿ ಮಾಲೀಕನ ಬಳಿ 1.6 ಲಕ್ಷ ರೂ. ಸುಲಿಗೆ ಆರೋಪ: ಪಿಎಸ್‌ಐ ಅಮಾನತು

ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ...