ರಾಮನಗರ | ವಿಜಯೇಂದ್ರ ಆಯ್ಕೆ ಇಂದಿನ ಸ್ಥಿತಿಗೆ ಸರಿಯಾಗಿದೆ: ಎಸ್‌ ಟಿ ಸೋಮಶೇಖರ್

Date:

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಇಂದಿನ ಸ್ಥಿತಿಗೆ ನೂರಕ್ಕೆ ನೂರರಷ್ಟು ಸರಿಯಾಗಿದೆ ಎಂದು ಶಾಸಕ ಎಸ್ ಟಿ‌ ಸೋಮಶೇಖರ್ ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಕುಂಬಳಗೋಡಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ವಿಜಯೇಂದ್ರ ಅವರು ಹಿಂದೆ ಪಕ್ಷದ ಉಪಾಧ್ಯಕ್ಷರಾಗಿದ್ದರು. ಅವರಿಗೆ ಅನುಭವ ಇದೆ. ಎಲ್ಲ ಜಿಲ್ಲೆಗಳ ನಾಯಕರ ಪರಿಚಯವೂ ಅವರಿಗಿದೆ. ಹೀಗಾಗಿ, ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಅವರ ಆಯ್ಕೆ ಒಳ್ಳೆಯ ಬೆಳವಣಿಗೆ” ಎಂದರು.

“ವಿಜಯೇಂದ್ರ ಅವರ ಆಯ್ಕೆ ಕುಟುಂಬ ರಾಜಕೀಯ ಅಲ್ಲ. ಅವರ ತಂದೆ ಬಿ ಎಸ್ ಯಡಿಯೂರಪ್ಪ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದ ಮೇಲೆ ಅವರ ಮಗನಿಗೆ ಅಧಿಕಾರ ನೀಡಿದ್ದಾರೆ. ವಿಜಯೇಂದ್ರ ಅವರು ಹಿಂದೆ ಪಕ್ಷದ ಉಪಾಧ್ಯಕ್ಷರಾಗಿದ್ದರು. ಈಗ ಶಾಸಕರಾಗಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನನ್ನು ಯಾರು ಬೇಕಿದ್ದರೂ ಕಡೆಗಣಿಸಲಿ ಬಿಡಲಿ. ಆದರೆ, ಕ್ಷೇತ್ರದ ಜನ ನನ್ನನು ಕಡೆಗಣಿಸಿಲ್ಲ. ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ. ನನ್ನ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ” ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವ ಬಗ್ಗೆ ಕ್ಷೇತ್ರದ 40 ಮಹಿಳೆಯರ ಮೂಲಕ ಪರಿಶೀಲನೆ ನಡೆಸುತ್ತಿದ್ದೇನೆ. ಇದನ್ನು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ.‌ ಸರ್ಕಾರಿ ಯೋಜನೆಗಳು ಜನರಿಗೆ ತಲುಪಬೇಕು ಎಂಬುದಷ್ಟೇ ನನ್ನ ಉದ್ದೇಶ” ಎಂದರು.

“ಹಿಂದೆ ನಾನು ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದಾಗ, ಕೇವಲ ಮೂರು ಕ್ಷೇತ್ರದಲ್ಲಷ್ಟೇ ಬಿಜೆಪಿ ಇತ್ತು. ಹೀಗಿದ್ದರೂ, ಉಳಿದ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೆ. ಅದೇ ರೀತಿ ಈಗಲೂ ನಡೆಯುತ್ತಿದೆ. ಬಿಜೆಪಿಯಲ್ಲಿ ನಾನು ಗೆದ್ದಿದ್ದೇನೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಮಾಡಬಾರದಾ” ಎಂದು ಪ್ರಶ್ನಿಸಿದರು.

“ಎಸ್ ಎಂ ಕೃಷ್ಣ ಅವರು ಬಿಜೆಪಿ ಸೇರಿದ್ದರು. ಆದರೆ, ಅವರಿಗೆ ನೀಡಿದ್ದ ಅಶ್ವಾಸನೆಗಳನ್ನು ಬಿಜೆಪಿ ಈಡೇರಿಸಿಲ್ಲ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಹಾಗೂ ಹಿಂದೆ ಸಚಿವರಾಗಿದ್ದ ಶಂಕರ್, ಬಿ ಸಿ ನಾಗೇಶ್ ಸೇರಿದಂತೆ ಅನೇಕರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ. ಹಾಗಾಗಿ, ನನ್ನೊಂದಿಗೆ ಬಿಜೆಪಿ ಸೇರಿದವರ ಪರಿಸ್ಥಿತಿ ಕುರಿತು ಬಿಜೆಪಿಯವರು ಮೊದಲು ಜಾಮೂನು ನೀಡಿ ಬಳಿಕ ವಿಷ ನೀಡುತ್ತಾರೆಂಬ ಹೇಳಿಕೆ ನೀಡಿದ್ದೆ. ಈ ಹೇಳಿಕೆ ವೈಯಕ್ತಿಕವಾಗಿರಲಿಲ್ಲ. ನನಗೆ ಮಂತ್ರಿ ಸ್ಥಾನ ನೀಡಿದ್ದರು. ಏಳೆಂಟು ಜನರಿಗೆ ಸ್ಥಾನ ಸಿಕ್ಕಿರಲಿಲ್ಲ‌” ಎಂದರು.

ಈ ಸುದ್ದಿ ಓದಿದ್ದೀರಾ? ಗೌರಿಶಂಕರ್-ಮಂಜುನಾಥ್ ಸೇರ್ಪಡೆ | ಜೆಡಿಎಸ್ ಈಗ ಕೇವಲ ಕುಟುಂಬದ ಪಕ್ಷವಾಗಿದೆ: ಸಿಎಂ ಸಿದ್ದರಾಮಯ್ಯ

ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ತಮ್ಮ ಪುಸ್ತಕದಲ್ಲಿ ಸಮ್ಮಿಶ್ರ ಸರ್ಕಾರ ಉರುಳುವಾಗ ಕೆಲ ಶಾಸಕರು ಹಣ ಪಡೆದ ಬಗ್ಗೆ ಉಲ್ಲೆಖ ಮಾಡುವುದಾಗಿ ಹೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಸೋಮಶೇಖರ್, “ಬುಕ್ ಏಕೆ? ಧರ್ಮಸ್ಥಳ, ಚಾಮುಂಡಿ ಬೆಟ್ಟದಲ್ಲಿ ಕುಳಿತುಕೊಂಡು, ಅಲ್ಲೇ ಬುಕ್ ಬರೆದು ಓದಲಿ. ಅವರು ಚಾಮುಂಡಿ ಬೆಟ್ಟಕ್ಕೆ ಹೆಚ್ಚಾಗಿ ಹೋಗುತ್ತಾರಲ್ಲ. ಅಲ್ಲೆ ಕುಳಿತು ಬುಕ್ ಓದಲಿ. ಅವರಿಗೂ ಬಿಜೆಪಿಯಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲ ಅಲ್ಲವೇ” ಎಂದು ವ್ಯಂಗ್ಯವಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...