ರಾಮನಗರ | ಸಿಲಿಂಡರ್‌ ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ತಂದೆ, ತಾಯಿ, ಮಗ ಸಾವು

Date:

ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ವಾರದ ಹಿಂದೆ ಸಂಭವಿಸಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಕನಕಪುರ ನಗರದ ರಾಮನಗರ ರಸ್ತೆಯ ಅಮರ ನಾರಾಯಣ ಬ್ಲಾಕ್ ನಿವಾಸಿಗಳಾದ ಸಿದ್ದರಾಜು(55), ಪತ್ನಿ ಚಂದ್ರಮ್ಮ(50) ಹಾಗೂ ಪುತ್ರ ಪ್ರಶಾಂತ್(22) ಮೃತಪಟ್ಟವರು.

ಕುಟುಂಬವು ತಳ್ಳುಗಾಡಿ ಕ್ಯಾಂಟೀನ್ ಇಟ್ಟುಕೊಂಡು ಬದುಕು ಸಾಗಿಸುತ್ತಿತ್ತು. ಜನವರಿ 26ರಂದು ಮನೆಯಲ್ಲಿ ವಿವಿಧ ತಿಂಡಿಗಳನ್ನು ಎಣ್ಣೆಯಲ್ಲಿ ಬೇಯಿಸುತ್ತಿದ್ದ ವೇಳೆ, ಅಡುಗೆ ಅನಿಲ ಸೋರಿಕೆಯಾಗಿದ್ದು, ಒಮ್ಮೆಲೆ ಬೆಂಕಿ ಹೊತ್ತಿಕೊಂಡು ಇಡೀ ಕೋಣೆಯನ್ನು ಆವರಿಸಿದ್ದರಿಂದಾಗಿ ಮೂವರಿಗೆ ತೀವ್ರವಾದ ಸುಟ್ಟ ಗಾಯಗಳಾಗಿದ್ದವು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯವಾಗಿ ಚಿಕಿತ್ಸೆ ಕೊಡಿಸಿ, ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಮೂವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೊದಲಿಗೆ ಪುತ್ರ ಪ್ರಶಾಂತ್, ಎರಡು ದಿನದ ನಂತರ ತಂದೆ ಸಿದ್ದರಾಜು ಹಾಗೂ ಅದಾದ ಎರಡು ದಿನದ ನಂತರ ತಾಯಿ ಚಂದ್ರಮ್ಮನವರೂ ಕೊನೆಯುಸಿರೆಳದಿದ್ದಾರೆ. ‌

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ರೈತನ ಕಬ್ಬಿನ ತೋಟ ಬೆಂಕಿಗಾಹುತಿ

ದುರ್ಘಟನೆಯೊಂದಿಗೆ ಮೂವರಿದ್ದ ಕುಟುಂಬವೊಂದು ದುರಂತ ಅಂತ್ಯ ಕಂಡಿದೆ. ಸಿದ್ದರಾಜು ಮತ್ತು ಚಂದ್ರಮ್ಮ ದಂಪತಿಯ ಏಕೈಕ ಪುತ್ರ ಪ್ರಶಾಂತ್ ಅವರು ಅವಿವಾಹಿತರಾಗಿದ್ದರು. ತಂದೆ–ತಾಯಿಯನ್ನು ಬಿಟ್ಟು ಬೇರೆಡೆ ಹೋಗುವುದಕ್ಕೆ ಮನಸ್ಸಿಲ್ಲದ ಅವರು, ಕ್ಯಾಂಟಿನ್ ನಡೆಸಲು ನೆರವಾಗುತ್ತಿದ್ದರು. ಆದರೆ, ಸಿಲಿಂಡರ್‌ನಿಂದ ಸೋರಿಕೆಯಾದ ಅನಿಲದಿಂದ ಹೊತ್ತಿಕೊಂಡ ಬೆಂಕಿ ಮೂವರನ್ನೂ ಬಲಿ ಪಡೆದಿದೆ.

ಘಟನೆ ಕುರಿತು ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನಕಪುರ | ನಿಗದಿತ ಸಮಯಕ್ಕೆ ಬಾಗಿಲು ತೆರೆಯದ ರೇಷ್ಮೆ ಇಲಾಖೆ ಕಚೇರಿ; ಸಾರ್ವಜನಿಕರ ಆಕ್ರೋಶ

ಸರಕಾರಿ ಕಚೇರಿಗಳು ಜನಸಾಮಾನ್ಯರ ಸೇವೆಗಾಗಿ ನಿಗದಿತ ಸಮಯಕ್ಕೆ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ,...

ಎಗ್ಗಿಲ್ಲದೆ ನಡೆಯುತ್ತಿರುವ ಸೈಬರ್‌ ಕ್ರೈಮ್‌: ‘ಲೈಫ್ ಸರ್ಟಿಫಿಕೇಟ್’ ಹೆಸರಲ್ಲಿ ₹8 ಲಕ್ಷ ವಂಚನೆ

ಆಧುನಿಕ ಡಿಜಿಟಲ್ ಯುಗದಲ್ಲಿ ಸೈಬರ್‌ ಕ್ರೈಮ್‌ಗಳು ಸಮಾಜದ ಒಂದು ದೊಡ್ಡ ಸವಾಲಾಗಿ...

‘ಚಪ್ಪಲಿಯಲ್ಲಿ ಹೊಡಿತಾರೆ’: ಮಾಗಡಿ ತಹಶೀಲ್ದಾರ್‌ಗೆ ಶಾಸಕ ಬಾಲಕೃಷ್ಣ ಆವಾಜ್!

'ನಿನಗೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ' ಎಂದು ಮಾಗಡಿ ತಜಶೀಲ್ದಾರ್‌ಗೆ ಶಾಸಕ ಎಚ್‌ಸಿ...

ರಾಮನಗರ | ಅಂಗಡಿ ಮಾಲೀಕನ ಬಳಿ 1.6 ಲಕ್ಷ ರೂ. ಸುಲಿಗೆ ಆರೋಪ: ಪಿಎಸ್‌ಐ ಅಮಾನತು

ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ...