ಉಡುಪಿ | ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಮೈಸೂರು ವಿಭಾಗ ಮಟ್ಟದ ಯುವ ಕವಿಗೋಷ್ಠಿ

Date:

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಸನ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಹಾಸನದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಯುವ ಕವಿಗೋಷ್ಠಿಯಲ್ಲಿ ಉಡುಪಿಯ ಯುವ ಬರಹಗಾರ ರಾಮಾಂಜಿ ನಮ್ಮಭೂಮಿ ‘ಜಾತ್ರೆಯ ಹಿಂದೆ ಮುಂದೆ’ ಕವನ ವಾಚಿಸಿದರು.

ರಾಮಾಂಜಿ ತಮ್ಮ ಕವಿತೆಯಲ್ಲಿ ಜಾತ್ರೆಯನ್ನು ಒಂದು ರೂಪಕವಾಗಿ ಬಳಸಿ ಕೊಂಡು ಮಾನವ ಜೀವನದ ತಾತ್ಕಾಲಿಕ ಸಂಭ್ರಮ, ಅದರ ಹಿನ್ನೆಲೆಯ ಆಂತರಿಕ ಶೂನ್ಯತೆ, ಸಮಾಜದ ವಿಷಮತೆಗಳನ್ನು ಚಿತ್ರಿಸಿದರು.

ಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯತ್ರಿ ಫಾತಿಮಾ ರಲಿಯಾ ವಹಿಸಿದ್ದರು. ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್, ರಿಜಿಸ್ಟ್ರಾರ್ ಕರಿಯಪ್ಪ ಎನ್., ಸದಸ್ಯರಾದ ಡಾ.ಜಯಪ್ರಕಾಶ್ ಶೆಟ್ಟಿ, ಸುಜಾತ ಎಚ್.ಆರ್., ಡಾ. ಚಂದ್ರ ಕಿರಣ್ ಕುಳವಾಡಿ, ಕಸಾಪ ಹಾಸನ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು. ಕವಿಗೋಷ್ಠಿಯಲ್ಲಿ ಮೈಸೂರು ವಿಭಾಗದ ಆರು ಜಿಲ್ಲೆಗಳಿಂದ ಒಟ್ಟು 16 ಉದಯೋನ್ಮುಖ ಕವಿಗಳು ಭಾಗವಹಿಸಿ ಕವಿತೆಗಳನ್ನು ವಾಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...