ಬಿಜೆಪಿ ಅವಧಿಯಲ್ಲಿ ನೇಮಕಗೊಂಡ ಪದಾಧಿಕಾರಿಗಳು ರಾಜೀನಾಮೆ ನೀಡಲಿ: ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ಆಗ್ರಹ

Date:

  • ‘ವಜಾಗೊಳಿಸುವ ಆದೇಶದಿಂದ ತಪ್ಪಿಸಿಕೊಂಡ ಅಡ್ಡಂಡ ಕಾರ್ಯಪ್ಪ’
  • ‘ನಿಯಮಬಾಹಿರವಾಗಿ ಹಣಕಾಸು ಚಟುವಟಿಕೆ ಬಗ್ಗೆ ವಿಶೇಷ ತನಿಖೆ’

“ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಕಾರಣಗಳಿಗಾಗಿ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಪ್ರಾಧಿಕಾರ ಹಾಗೂ ಸಾಂಸ್ಕೃತಿಕ ಸಂಘಟಣೆಗಳಿಗೆ ನೇಮಕವಾದ ಬಿಜೆಪಿ ಪ್ರೇರಿತ ಕಾರ್ಯಕರ್ತರು ಮತ್ತು ಬಿಜೆಪಿ ಪರವಾದ ಸ್ವಯಂ ಘೋಷಿತ ವಿಚಾರವಾದಿಗಳು ಕೂಡಲೇ ಆಯಾ ಸಂಸ್ಥೆಗಳ ಅಧ್ಯಕ್ಷರ ಮತ್ತು ಸದಸ್ಯ ಸ್ಥಾನಗಳಿಗೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದು ಮಾಜಿ ಎಂಎಲ್‌ಸಿ ಮತ್ತು ಕಾಂಗ್ರೆಸ್‌ ವಕ್ತಾರ ರಮೇಶ್‌ ಬಾಬು ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕರ್ನಾಟಕದಲ್ಲಿ ಜನಾದೇಶ ಕಾಂಗ್ರೆಸ್ ಪಕ್ಷದ ಪರವಾಗಿ ಬಂದಿದೆ. ಬಿಜೆಪಿ ಮೂಲಕ ನೇಮಕಗೊಂಡಿರುವ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದರ ಮೂಲಕ ಹೊಸ ಸರ್ಕಾರ ಹೊಸ ನೇಮಕಾತಿ ಮಾಡಲು ಅನುವು ಮಾಡಿಕೊಡಬೇಕು” ಎಂದಿದ್ದಾರೆ.

“ಕೆಲವು ಅರೆ ನ್ಯಾಯಿಕ ಆಯೋಗ ಮತ್ತು ಪ್ರಾಧಿಕಾರಗಳಿಗೆ ಹಿಂದಿನ ಬಿಜೆಪಿ ಸರ್ಕಾರ ರಾಜಕೀಯ ನೇಮಕಾತಿಗಳನ್ನು ಮಾಡಿದ್ದು, ಆ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರು ರಾಜೀನಾಮೆ ನೀಡದೇ ಹೋದಲ್ಲಿ, ಕಾಂಗ್ರೆಸ್ ಪಕ್ಷವು ನಿಯಮಾನುಸಾರ ಇಂತಹ ನೇಮಕಾತಿಗಳನ್ನು ರದ್ದುಪಡಿಸಿ ಹೊಸ ನೇಮಕಾತಿ ಮಾಡಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿತ್ತಾಕುವುದನ್ನು ತಪ್ಪಿಸಿಕೊಂಡ ಅಡ್ಡಂಡ ಕಾರ್ಯಪ್ಪ

“ರಂಗಸಮಾಜದ ಶಿಫಾರಸ್ಸು ಇಲ್ಲದೆ ರಾಜಕೀಯ ಕಾರಣಕ್ಕಾಗಿ ಬಿಜೆಪಿ ಸರ್ಕಾರ ನೇಮಿಸಿದ್ದ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿರುವುದು ಸರಿಯಿದೆ. ರಂಗಾಯಣ ಸಂಸ್ಥೆಯನ್ನು ಮಲಿನಗೊಳಿಸಿ ಈ ಸಂಸ್ಥೆಯ ಮೂಲಕ ರಾಜ್ಯದ ಸಾಂಸ್ಕೃತಿಕ ಹಿರಿಮೆಗೆ ಕಳಂಕ ತಂದ ಆರೋಪ ಹೊತ್ತಿರುವ ಅಡ್ಡಂಡ ಕಾರ್ಯಪ್ಪ ಪಾಪ ಪ್ರಜ್ಞೆಯ ಕಾರಣಕ್ಕಾಗಿ ರಂಗಾಯಣ ಸಂಸ್ಥೆಗೆ ರಾಜೀನಾಮೆ ನೀಡಿ ಅವರನ್ನು ವಜಾಗೊಳಿಸುವ ಆದೇಶದಿಂದ ಅವರು ತಪ್ಪಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಸರ್ಕಾರದ ಅಥವಾ ಅರೆ ಸರ್ಕಾರದ ಸಂಸ್ಥೆಗಳು ಮತ್ತು ಪ್ರಾಧಿಕಾರಗಳು ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ನಂತರ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಮೇಲೂ ನಿಯಮ ಬಾಹಿರವಾಗಿ ಹಣಕಾಸು ಚಟುವಟಿಕೆ ನಿರ್ವಹಿಸಿದ್ದರೆ, ಇದರ ಮೇಲೆ ಹೊಸ ಸರ್ಕಾರವು ವಿಶೇಷ ತನಿಖೆ ನಡೆಸಲಿದೆ” ಎಂದು ಎಚ್ಚರಿಸಿದ್ದಾರೆ.

“ರಾಜ್ಯದಲ್ಲಿ ನೀತಿ ಸಂಹಿತೆ ಬಂದ ನಂತರ ಕೆಲವು ಪ್ರಾಧಿಕಾರಗಳು ಮತ್ತು ಅರೆ ನ್ಯಾಯಿಕ ಆಯೋಗಗಳು ನಿಯಮ ಮೀರಿ ಹಣಕಾಸು ನಿರ್ವಹಣೆ ಮಾಡಿರುವುದು ಕಾಂಗ್ರೆಸ್ ಪಕ್ಷದ ಗಮನಕ್ಕೆ ಬಂದಿರುತ್ತದೆ. ಇಂತಹ ಯಾವುದೇ ಅಕ್ರಮಗಳಲ್ಲಿ ಯಾವುದೇ ಅಧಿಕಾರಿ ಭಾಗಿಯಾಗಿದ್ದರೆ ಅವರ ಮೇಲೆ ನಿಯಮಾನುಸಾರ ನೂತನ ಸರ್ಕಾರ ಕ್ರಮ ಕೈಗೊಳ್ಳಲಿದೆ. ಕೆಲವು ಸಂಸ್ಥೆಗಳು ಹಿಂದಿನ ದಿನಾಂಕ ನಮೂದಿಸಿ ಬಿಲ್‍ಗಳನ್ನು ಪಾವತಿ ಮಾಡಿರುವುದು ಮತ್ತು ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಹೊಸ ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...