ಹೊಸೂರು-ಬೆಂಗಳೂರು ಮೆಟ್ರೋ ರೈಲು ಸಂಪರ್ಕಕ್ಕೆ ಅನುಮತಿ ಬೇಡ: ರಮೇಶ್‌ ಬಾಬು ಸರ್ಕಾರಕ್ಕೆ ಪತ್ರ

Date:

  • ‘ರಾಜ್ಯದ ಹಿತದೃಷ್ಟಿಯಿಂದ ಅನುಮತಿ ನೀಡಬಾರದು’
  • ‘ಬೆಂಗಳೂರಿನ ಎಲ್ಲ ಭಾಗಗಳಲ್ಲಿ ಮೆಟ್ರೋ ಆಗಲಿ’

ರಾಜ್ಯ ಸರ್ಕಾರವು ಸಾರಿಗೆ ವ್ಯವಸ್ಥೆಯನ್ನು ವಿಸ್ತಾರಗೊಳಿಸುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪರ್ಕ ಒಳಗೊಂಡಂತೆ ಬೆಂಗಳೂರು ಮಹಾನಗರದ ಎಲ್ಲ ಭಾಗಗಳಲ್ಲಿ ಮೆಟ್ರೋ ವ್ಯವಸ್ಥೆ ಜಾರಿಗೊಳಿಸಲಿ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಹೊಸೂರು-ಬೆಂಗಳೂರು ಮೆಟ್ರೋ ರೈಲು ಸಂಪರ್ಕದ ಯಾವುದೇ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ರಾಜ್ಯದ ಹಿತದೃಷ್ಟಿಯಿಂದ ಅನುಮತಿ ನೀಡಬಾರದು ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿರುವ ಅವರು, “ಅನೇಕ ಕನ್ನಡ ಸಂಘಟನೆಗಳು ಮತ್ತು ಜನಪರ ಸಂಘಟನೆಗಳು ಬೆಂಗಳೂರಿನ ಮತ್ತು ಕರ್ನಾಟಕದ ಹಿತರಕ್ಷಣೆಯ ದೃಷ್ಟಿಯಿಂದ ಹೊಸೂರು-ಬೆಂಗಳೂರು ಮೆಟ್ರೋ ಸಂಪರ್ಕಕ್ಕೆ ಅವಕಾಶ ನೀಡದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಒತ್ತಾಯ ರಾಜ್ಯದ ಹಿತಾಸಕ್ತಿಯ ಸಂರಕ್ಷಣೆಯ ದೃಷ್ಟಿಯಿಂದ ಸಮಂಜಸವಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ಯಾಂಪಸ್ಸುಗಳಲ್ಲಿ ಜಾತಿ ನಿಂದನೆ- ಬಿಗಿ ಕಾಯಿದೆ ಜಾರಿಯಾಗಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಹಿತದೃಷ್ಟಿಯಿಂದ ಮತ್ತು ಬೆಂಗಳೂರು ಮಹಾನಗರದಲ್ಲಿ ಸಾರಿಗೆ ದಟ್ಟಣೆಯ ಕಾರಣಕ್ಕಾಗಿ ಇತರೆ ರಾಜ್ಯದ ವಲಸಿಗರ ಮೇಲೆ ಅನಿವಾರ್ಯವಾಗಿ ನಿಯಂತ್ರಣವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಹೇರಬೇಕಾಗಿರುತ್ತದೆ. ಬೆಂಗಳೂರು ಬೆಳವಣಿಗೆಯ ಮೇಲೆ ಆರೋಗ್ಯಕರವಾದ ನಿಯಂತ್ರಣ ಹಾಕದಿದ್ದರೆ ನಗರದಲ್ಲಿ ಸಾರಿಗೆ ಸಮಸ್ಯೆ ಜೊತೆಗೆ ಕುಡಿಯುವ ನೀರು, ವಿದ್ಯುತ್ ಪೂರೈಕೆ, ರಸ್ತೆ ನಿರ್ಮಾಣ ಹಾಗು ಇತರೆ ಮೂಲ ಸೌಕರ್ಯಗಳ ಸಮಸ್ಯೆ ಹೆಚ್ಚಾಗುತ್ತದೆ. ಇವುಗಳ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯವು ಚೆನ್ನೈ ಮೆಟ್ರೋ ರೈಲ್ವೆ ಸಂಸ್ಥೆಯ ಮೂಲಕ ಹೊಸೂರು-ಬೆಂಗಳೂರು ಮಹಾನಗರದ ದೃಷ್ಟಿಯಿಂದ ತಡೆಯಬೇಕು” ಎಂದು ಕೋರಿದ್ದಾರೆ.

ಬೆಂಗಳೂರು ಮಹಾನಗರಕ್ಕೆ ನಮ್ಮ ರಾಜ್ಯದ ಜನರು ಉದ್ಯೋಗ ಮತ್ತು ವ್ಯಾಪಾರದ ಕಾರಣಕ್ಕಾಗಿ ವಲಸೆ ಬಂದರೆ ರಾಜ್ಯದ ಹಿತದೃಷ್ಟಿಯಿಂದ ಕನ್ನಡಿಗರ ಹಿತರಕ್ಷಣೆಯನ್ನು ರಾಜ್ಯ ಸರ್ಕಾರ ಮಾಡಬೇಕಾಗಿರುತ್ತದೆ. ಅದೇ ರೀತಿ ಬೆಂಗಳೂರು ಮಹಾನಗರದಲ್ಲಿ ನೆಲೆಸಿರುವ ಜನಸಾಮಾನ್ಯರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲ ಸೌಲಭ್ಯ ಒದಗಿಸಬೇಕು” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...