ಉಡುಪಿ | ಅಂತರ್ ಧರ್ಮೀಯ ವಿವಾಹದಿಂದ ಹಿಂದೂತ್ವಕ್ಕೆ ಧಕ್ಕೆಯಾಗುವುದಿಲ್ಲವೇ ? – ರಮೇಶ್ ಕಾಂಚನ್

Date:

ಸ್ವಯಂಘೋಷಿತ ಹಿಂದೂ ಮುಖಂಡರಾಗಿ, ದ್ವೇಷಪೂರಿತ ಭಾಷಣದ ಮೂಲಕ ಐಷಾರಾಮಿ ಜೀವನ ನಡೆಸುತ್ತಿರುವ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಅನ್ಯಧರ್ಮದ ಹುಡುಗಿಯರನ್ನು ಪ್ರೀತಿಸಿ ವಿವಾಹವಾಗಿ ಎಂದು ನೀಡಿರುವ ಕರೆಯಂತೆ ಹಿಂದೂ ಯುವಕರು ನಡೆದುಕೊಂಡರೆ ಹಿಂದೂತ್ವಕ್ಕೆ ಧಕ್ಕೆಯಾಗುವುದಿಲ್ಲವೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ದಿನವಿಡೀ ಅನ್ಯಧರ್ಮೀಯರನ್ನು ದೂಷಿಸುವವರು,ಅವರ ಮೇಲೆ ದ್ವೇಷ ಹುಟ್ಟಿಸುವವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಕರೆ ನೀಡಿರುವುದು ಹಾಸ್ಯಾಸ್ಪದವಾಗಿದೆ.

ಮದುವೆಗೆ ಮುಂಚಿತವಾಗಿ ಬದುಕು ಕಟ್ಟಿಕೊಳ್ಳಲು ಸರಿಯಾದ ವಿದ್ಯೆ, ಉತ್ತಮ ಉದ್ಯೋಗ ಪಡೆಯಲು ಯಾವತ್ತು ಸಲಹೆ ನೀಡದೆ ಹಿಂದುಳಿದ ವರ್ಗದ ಹಿಂದೂ ಯುವಕರ ರಕ್ತ ಬಿಸಿಯಾಗಿಸಿ ಅವರಲ್ಲಿ ದ್ವೇಷ ಮನೋಭಾವನೆ ಹುಟ್ಟಿಸಿ ಅವರ ದಾರಿ ತಪ್ಪಿಸಿ ಅವರು ಜೈಲು ಸೇರುವಂತೆ, ಇನ್ನು ಹಲವಾರು ಮಂದಿ ಹತ್ತಾರು ಪ್ರಕರಣಗಳಲ್ಲಿ ಸಿಲುಕಿ ಕೊಳ್ಳುವಂತೆ ಮಾಡಿ ಇದೀಗ ಅಂತರ್ ಧರ್ಮೀಯ ವಿವಾಹವಾಗಲು ಕರೆ ಕೊಡಲು ಇಂತಹವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸುತ ಮಾನವೀಯತೆಯ ವಿರೋಧಿಯಾಗಿರುವ ಸೂಲಿಬೆಲೆಯವರ ಅಸಂಬದ್ಧ ಸಂದೇಶವನ್ನು ಕಟುವಾಗಿ ಟೀಕಿಸಿ ಹಾಗೆಯೇ ಇನ್ನಾದರೂ ಎಲ್ಲರೂ ನಮ್ಮವರು ಎಂದು ಭಾವಿಸಿ,ಶಾಂತಿ ಸೌಹಾರ್ದತೆಯ ಸಮಾಜ ಕಟ್ಟುವಲ್ಲಿ ಇಂತಹ ಸ್ವಯಂಘೋಷಿತ ಮುಖಂಡರುಗಳು ತಮ್ಮನ್ನು ತೊಡಗಿಸಿಕೊಳ್ಳಲಿ ಎಂದು ರಮೇಶ್ ಕಾಂಚನ್ ಸಲಹೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...