ಉಡುಪಿ | ಅಂಬಲಪಾಡಿ ಜಂಕ್ಷನ್ ನಲ್ಲಿ ಎಲಿವೇಟೆಡ್ ಪ್ಲೆ ಓವರ್ ನಿರ್ಮಾಣಗೊಳ್ಳಲಿ – ರಮೇಶ್ ಕಾಂಚನ್

Date:

ಉಡುಪಿ ಅಂಬಲಪಾಡಿಯ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮೋದನೆ ನೀಡಿರುವುದನ್ನು ಪುನರ್ ಪರಿಶೀಲಿಸಿ ಇಲ್ಲಿಗೆ ಸೂಕ್ತವಾದ ಎಲಿವೇಟೆಡ್ ಪ್ಲೆ ಓವರ್ ನಿರ್ಮಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆಗ್ರಹಿಸಿದ್ದಾರೆ.

ಉಡುಪಿ, ಕುಂದಾಪುರದಲ್ಲಿ ಈ ಹಿಂದೆ ನಿರ್ಮಿಸಲ್ಪಟ್ಟ ಅಂಡರ್ ಪಾಸ್ ನಿಂದ ಪ್ರಯಾಣಿಕರು, ಸಾರ್ವಜನಿಕರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಜೋರಾಗಿ ಮಳೆ ಬಂದ ಸಂದರ್ಭದಲ್ಲಿ ಅಂಡರ್ ಪಾಸ್ ಸಂಪರ್ಕದ ಸರ್ವಿಸ್ ರಸ್ತೆಗಳಲ್ಲಿ ನೀರು ತುಂಬಿಕೊಂಡು ಸಂಚಾರಕ್ಕೆಅಡಚಣೆ ಉಂಟಾಗುತ್ತದೆ. ಹಾಗೂ ಅಂಡರ್ ಪಾಸ್ ನಿರ್ಮಾಣಗೊಂಡಿರುವ ಪ್ರದೇಶದ ಎರಡು ಪಾರ್ಶ್ವಗಳು ಪರಸ್ಪರ ಗೋಚರಿಸುವುದಿಲ್ಲ. ಇದೀಗ ಸಂತೆಕಟ್ಟೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್ ಕಾಮಗಾರಿಯು ಕೂಡ ಅವೈಜ್ಞಾನಿಕ ವಾಗಿರುವುದು ಪ್ರತ್ಯಕ್ಷಸಾಕ್ಷಿಯಾಗಿರುತ್ತದೆ. ಎಲಿವೇಟೆಡ್ ಪ್ಲೆ ಓವರ್ ಇದು ಸಾರ್ವಜನಿಕರ ಹಲವಾರು ವರ್ಷಗಳ ಬೇಡಿಕೆಯಾಗಿದೆ.

ಅಂಡರ್ ಪಾಸ್ ನಿರ್ಮಾಣದಿಂದ ಆಗುವ ತೊಂದರೆಗಳು ಮತ್ತು ಎಲಿವೇಟೆಡ್ ಪ್ಲೆ ಓವರ್ ನಿರ್ಮಾಣದಿಂಧ ಆಗುವ ಅನುಕೂಲತೆಗಳ ಬಗ್ಗೆ ಸರಿಯಾಗಿ ವಿಮರ್ಶೆ ಮಾಡಿಕೊಂಡು ಪ್ಲೆ ಓವರ್ ಗಾಗಿ ನಿಸ್ವಾರ್ಥವಾಗಿ ಹೋರಾಟ ನಡೆಸುತ್ತಿರುವವರು ಹಾಗೂ ಸಾರ್ವಜನಿಕರು ಎಲ್ಲರೂ ಒಗ್ಗೂಡಿ ಅಂಬಲಪಾಡಿ ಜಂಕ್ಷನ್ ನಲ್ಲಿ ಎಲಿವೇಟೆಡ್ ಪ್ಲೆ ಓವರ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಒಕ್ಕೊರಲಿನಿಂದ ಆಗ್ರಹಿಸುವಂತೆ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ಕೋರಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...