ಉಡುಪಿ | ಮಲ್ಪೆ ಸರ್ಕಾರಿ ಜಾಗ ಗುತ್ತಿಗೆ ರದ್ದುಪಡಿಸುವಂತೆ ಬ್ಲಾಕ್ ಕಾಂಗ್ರೆಸ್ ಒತ್ತಾಯ

Date:

ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಅಧ್ಯಕ್ಷರಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಕರ್ನಾಟಕ ಜಲ ಸಾರಿಗೆ ಮಂಡಳಿಯು ಮಲ್ಪೆಯ ಹನುಮಾನ್‌ ನಗರದ ಸೀ ವಾಕ್, ಹನುಮಾನ್ ಭಜನಾ ಮಂದಿರದ ಸುತ್ತಮುತ್ತಲಿನ ಸುಮಾರು 8.00 ಎಕರೆ ವಿಸ್ತೀರ್ಣದ ಸರಕಾರಿ ಜಾಗವನ್ನು 15 ವರ್ಷಗಳ ಅವಧಿಗೆ ಕಳೆದ ಎಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ನೀಡಲಾಗಿದ್ದು ಮಲ್ಪೆ ಕಡಲ ತೀರದ ಪ್ರಕೃತಿ ರಮಣೀಯವಾದ ಈ ಜಾಗವನ್ನು ಸಹಕಾರಿ ಸಂಸ್ಥೆಗೆ ಗುತ್ತಿಗೆ ನೀಡಿರುವುದರಿಂದ ಅಲ್ಲಿನ ಸ್ಥಳೀಯ ಮೀನುಗಾರರಿಗೆ, ಸ್ಥಳೀಯ ಭಜನಾ ಮಂದಿರದವರಿಗೆ ಹಾಗೂ ಪ್ರವಾಸಿಗರಿಗೆ ಮುಂಬರುವ ದಿನಗಳಲ್ಲಿ ಬಹಳಷ್ಟು ತೊಂದರೆಯಾಗಲಿದೆ.

ಈ ಪ್ರಕರಣದ ಬಗ್ಗೆ ವಿಶೇಷ ಗಮನಹರಿಸಿ ಸದ್ರಿ ಸರಕಾರಿ ಜಾಗದ ಗುತ್ತಿಗೆ ಒಪ್ಪಂದವನ್ನು ರದ್ದುಗೊಳಿಸಿ‌ ಆ ಸರಕಾರಿ ಜಾಗವನ್ನು ಸಾರ್ವಜನಿಕ ಉಪಯೋಗಕ್ಕಲ್ಲದೆ ಯಾವುದೇ ಸಂಸ್ಥೆಗೆ ನೀಡಬಾರದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ವಿನಂತಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್, ಮಾಜಿ ನಗರಸಭಾ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯೆ ಆಶಾ ಚಂದ್ರಶೇಖರ್, ಕಡೆಕಾರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ್ ಪೂಜಾರಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸುಕೇಶ್ ಕುಂದರ್, ಸತೀಶ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ, ಕಾಂಗ್ರೆಸ್ ಯುವ ಮುಖಂಡರಾದ ಹಮ್ಮದ್‌ ಹಾಗೂ ಸಂಜಯ್ ಆಚಾರ್ಯ, ಕಾಂಗ್ರೆಸ್ ಮುಖಂಡರಾದ ಜಯವೀರ್ ಫೆಡ್ರಿಕ್ಸ್ ಹಾಗೂ ಶಿಲ್ಪಾ ಉಪಸ್ಥಿತರಿದ್ದರು.

1008211273
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...