ಉಡುಪಿ | ಸಂವಿಧಾನದಿಂದಾಗಿ ಈ ದೇಶದಲ್ಲಿ ಹೋರಾಟ ಮಾಡದವರಿಗೂ ಸ್ವಾತಂತ್ರ್ಯ ದೊರೆತಿದೆ – ರಮೇಶ್ ಕುಮಾರ್

Date:

ಉಡುಪಿಯಲ್ಲಿ ಸಮಾನ ಮನಸ್ಕರ ಸಂಘಟನೆ ಹಾಗೂ ಉಡುಪಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಗಾಂಧಿ ಭಾರತ, ಜೈ ಬಾಪು ,ಜೈ ಭೀಮ್ ಜೈ ಸಂವಿಧಾನ ಬೃಹತ್ ಸಮಾವೇಶವು ನಗರದ ಕ್ರಿಸ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಸಮಾವೇಶಕ್ಕೂ ಮುನ್ನ ಸಾವಿರಾರು ಕಾರ್ಯಕರ್ತರು ಬೃಹತ್ ಮೆರವಣಿಗೆವ ಮೂಲಕ ಸಾಗಿಬಂದರು.

ಸಮಾವೇಶವನ್ನು ಮಾಜಿ‌ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ‌ ವಿಧಾನ ಸಭೆ ಮಾಜಿ‌ ಸ್ಪೀಕರ್ ರಮೇಶ್ ಕುಮಾರ್, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿಸಬೇಕು.

1004799699

ಈಗ ದೇಶಕ್ಕೆ ನೆಗಡಿ ಹಿಡಿದಿದೆ. ಅದಕ್ಕಾಗಿ ಮೂಗು ಸುಧಾರಿಸುವವರೆಗೆ ಶುದ್ಧವಾಗಿ ಇಟ್ಟುಕೊಳ್ಳಬೇಕು. ನೆಗಡಿಯಾಗಿದೆ ಎಂದು ಮೂಗನ್ನೇ ಕಿತ್ತು ಹಾಕಲು ಹೋಗಬಾರದು. ಮೀಸಲಾತಿಯೇ ಇಲ್ಲದ ಕಾಲದಲ್ಲಿ ಸಂವಿಧಾನ ರಚಿಸಲು ಅಂಬೇಡ್ಕರ್‌ರನ್ನು ಆಯ್ಕೆ ಮಾಡಲಾಯಿತು. ಯಾಕೆಂದರೆ ಅವರು ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕಾನೂನು ಶಾಸ್ತ್ರದಲ್ಲಿ ಪಾಂಡಿತ್ಯ ಹೊಂದಿದ್ದರು. ಸಂವಿಧಾನದಿಂದಾಗಿ ಈ ದೇಶದಲ್ಲಿ ಹೋರಾಟ ಮಾಡದವರಿಗೂ ಸ್ವಾತಂತ್ರ್ಯ ದೊರೆತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ಸಂವಿಧಾನ ರಚಿಸುವ ಮುನ್ನ ಈ ದೇಶವು ಮನಸ್ಮೃತಿ ಆಧಾರದಲ್ಲಿ ನಡೆಯುತ್ತಿತ್ತು. ಈ ದೇಶವನ್ನು ಸಂವಿಧಾನದ ಮೂಲಕ ಸುಧಾರಿಸಲು ಸಾಧ್ಯವಿಲ್ಲ ಎಂದು ಗೋಲ್ ವಾಲ್ಕರ್ ಬರೆದಿದ್ದರು. ಅದಕ್ಕೆ ಅವರು ಸಂವಿಧಾನ ಬದಲಾಯಿಸಬೇಕು ಎಂದು ಹೇಳಿದ್ದರು. ಅಂಬೇಡ್ಕರ್ ಅವರ ಬಾಲ್ಯ, ಅಂಬೇಡ್ಕರ್ ತಂದೆ ತಾಯಿಗೆ ಆದ ಅನುಭವ ಅವರಿಗೆ ಆಗಿರಲಿಲ್ಲ. ಜಾತಿಯ ಕಾರಣಕ್ಕೆ ನೋವು ಅನುಭವಿಸಿದ ಅಂಬೇಡ್ಕರ್ ಸಂವಿಧಾನ ರಚಿಸುತ್ತಾರೆ ಎಂದು ಅವರು ತಿಳಿಸಿದರು.

1004799691

ಸಂವಿಧಾನ ಕರಡು ಸಮಿತಿಯ ಸಂಪೂರ್ಣ ಕೆಲಸವನ್ನು ಅಂಬೇಡ್ಕರ್ ಒಬ್ಬರೇ ಮಾಡಿದ್ದರು. ಅಂಬೇಡ್ಕರ್ ಹಿಂದುವಾಗಿ ಹುಟ್ಟಿದರು ಆದರೆ ಹಿಂದುವಾಗಿ ಸಾಯಲು ಬಯಸಿರಲಿಲ್ಲ. ಪರಿಶಿಷ್ಟ ಜಾತಿಯ ತಮ್ಮ ಸಮುದಾಯದವರಿಗೆ ಪ್ರತ್ಯೇಕ ಮತದಾನದ ಹಕ್ಕು ಅಂಬೇಡ್ಕರ್ ಕೇಳಿದ್ದರು. ಆದರೆ ಗಾಂಧೀಜಿ ಇದಕ್ಕೆ ವಿರೋಧ ಸೂಚಿಸಿದ್ದರು. ದೇಶದ ಸ್ವಾತಂತ್ರ್ಯದ ಜೊತೆ ತನ್ನ ಜನರ ಸುಧಾರಣೆ ಅಂಬೇಡ್ಕರ್‌ಗೆ ಆದ್ಯತೆಯಾಗಿತ್ತು. ಅಂಬೇಡ್ಕರ್ ಸಂವಿಧಾನ ರಚಿಸುವ ಮುನ್ನ ಈ ದೇಶವು ಮನಸ್ಮೃತಿ ಆಧಾರದಲ್ಲಿ ನಡೆಯುತ್ತಿತ್ತು. ಈ ದೇಶವನ್ನು ಸಂವಿಧಾನದ ಮೂಲಕ ಸುಧಾರಿಸಲು ಸಾಧ್ಯವಿಲ್ಲ ಎಂದು ಗೋಲ್ ವಾಲ್ಕರ್ ಬರೆದಿದ್ದರು. ಅದಕ್ಕೆ ಅವರು ಸಂವಿಧಾನ ಬದಲಾಯಿಸಬೇಕು ಎಂದು ಹೇಳಿದ್ದರು. ಅಂಬೇಡ್ಕರ್ ಅವರ ಬಾಲ್ಯ, ಅಂಬೇಡ್ಕರ್ ತಂದೆ ತಾಯಿಗೆ ಆದ ಅನುಭವ ಅವರಿಗೆ ಆಗಿರಲಿಲ್ಲ. ಜಾತಿಯ ಕಾರಣಕ್ಕೆ ನೋವು ಅನುಭವಿಸಿದ ಅಂಬೇಡ್ಕರ್ ಸಂವಿಧಾನ ರಚಿಸುತ್ತಾರೆ ಎಂದು ಅವರು ತಿಳಿಸಿದರು.

1004799684

ಇನ್ನು ಕಾಂಗ್ರೆಸ್ ಮಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ ದೇಶದ ಕಟ್ಟಕಡೆಯ ವ್ಯಕ್ತಿಗೂ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನ ಬದುಕುವ ಹಕ್ಕು ನೀಡಿದೆ. ದುರಾದೃಷ್ಕರ ವಿಚಾರ ಏನೇಂದ್ರೆ ಇವತ್ತು ದೇಶದಲ್ಲಿ ಬಡವ ಬಡವನಾಗಿಯೇ ಉಳಿದಿದ್ದಾನೆ. ಶ್ರೀಮಂತ ಶ್ರೀಮಂತರಾಗಿ ಬೇಳೆಯುತ್ತಿದ್ದಾರೆ. ಇವತ್ತು ಸಂವಿಧಾನದ ಅರಿವು ಎಲ್ಲರಲ್ಲೂ ಮೂಡಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬಡವರು ಹಿಂದುಳಿದವರು ಬದುಕಲು ಕಷ್ಟವಾಗಬಹುದು, ಹೀಗಾಗಿ ಗಾಂಧಿ ಭಾರತ ಸಂವಿಧಾನ ಅರಿವು ಸಮಾವೇಶವನ್ನು ನಾವು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

1004799694

ಸಮಾವೇಶದಲ್ಲಿ ಮಾಜಿ ಶಾಸಕ ಗೋಪಲ ಪೂಜಾರಿ ,ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಲಾವಣ್ಯ ಬಲ್ಲಾಳ್ ದಿನೇಶ್ ಶೆಟ್ಟಿ ಮೊಳ ಹಳ್ಳಿ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ ನಾಯಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...