ರಾಮನಗರ | ಬಾಲಕಿ ಮೇಲೆ ಮಲತಂದೆಯಿಂದಲೇ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

Date:

ರಾಮನಗರದಲ್ಲಿ ಎರಡು ದಿನದಿಂದ ನಾಪತ್ತೆಯಾಗಿದ್ದ ಬಾಲಕಿ ಕೋಣನಕುಂಟೆಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಮೇಲೆ ಮಲತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದು, ಮಾನಸಿಕ ಯಾತನೆಪಡುತ್ತಿದ್ದ ಬಾಲಕಿ ಮನೆಗೆ ಹೋಗದೆ, ತನ್ನ ಹಳೆಯ ಶಾಲೆಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಆಕೆಯ ಮೇಲೆ ದೌರ್ಜನಯ ಎಸಗಿದ್ದ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಸಂಜೆ ತರಗತಿಗಳನ್ನು ಮುಗಿಸಿಕೊಂಡು ಶಾಲೆಯಿಂದ ಹೊರಟ ಬಾಲಕಿ ಮನೆಗೆ ಹೋಗಿರಲಿಲ್ಲ. ರಾಮನಗರದಲ್ಲಿ ಬಸ್‌ ಹತ್ತಿ ಕೋಣನಕುಂಟೆಯಲ್ಲಿ ತಾನು ಓದಿದ್ದ ಹಳೆಯ ಶಾಲೆಗೆ ಹೋಗಿ, ತನ್ನ ನೆಚ್ಚಿನ ಶಿಕ್ಷಕಿಯನ್ನು ಭೇಟಿ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಾಯಿ ಆಂಧ್ರಪ್ರದೇಶದವರಾಗಿದ್ದು, ಮಲತಂದೆ ತಮಿಳುನಾಡಿನವರು. ಇಬ್ಬರೂ ಬೆಂಗಳೂರಿ ಸುತ್ತ-ಮುತ್ತ ಕೂಲಿ ಕೆಲಸ ಮಾಡಿ ಬದುಕುತ್ತಿದ್ದರೂ. ಇತ್ತೀಚೆಗೆ ವಿವಾಹವಾಗಿದ್ದ ಅವರಿಬ್ಬರೂ, ತಮ್ಮ ಮಕ್ಕಳೊಂದಿಗೆ ಕೋಣನಕುಂಟೆ ಮತ್ತು ಬಿಡದಿಯಲ್ಲಿ ವಾಸವಾಗಿದ್ದರು. ಕೆಲವು ದಿನಗಳ ಹಿಂದಷ್ಟೇ ರಾಮನಗರಕ್ಕೆ ಹೋಗಿ, ಅಲ್ಲಿಯೇ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿಯ ತಾಯಿ ಮನೆಯಲ್ಲಿ ಇರದಿದ್ದಾಗ ಬಾಲಕಿಗೆ ಮಲತಂದೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಮಲತಂದೆಯ ದೌರ್ಜನ್ಯದಿಂದ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದ ಬಾಲಕಿ ಗುರುವಾರ ಶಾಲೆ ಮುಗಿಸಿಕೊಂಡು ಮನೆಗೆ ಹೋಗದೆ, ಕೋಣನಕುಂಟೆಗೆ ತೆರಳಿ, ತನ್ನ ನೆಚ್ಚಿನ ಶಿಕ್ಷಕಿಯನ್ನು ಭೇಟಿ ಮಾಡಿದ್ದಾಳೆ. ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಶಿಕ್ಷಕಿಯ ಬಳಿ ಹೇಳಿಕೊಂಡಿದ್ದಾಳೆ.

ಕೂಡಲೇ ಬಾಲಕಿಯನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಕೆರೆದೊಯ್ದ ಶಿಕ್ಷಕಿ, ಅಲ್ಲಿನ ಅಧಿಕಾರಿಗಳಿಗೆ ಬಾಲಕಿ ಎದುರಿಸಿದ ದೌರ್ಜನ್ಯಗಳ ಬಗ್ಗೆ ವಿವರಿಸಿದ್ದಾರೆ. ಅಧಿಕಾರಿಗಳು ಶುಕ್ರವಾರ ಕೋಣನಕುಂಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಬಾಲಕಿಯ ಮಲತಂದೆಯನ್ನು ಬಂಧಿಸಿದ್ದಾರೆ.

ಬಾಲಕಿ ನಾಪತ್ತೆಯಾಗಿದ್ದರಿಂದ ಆತಂಕಗೊಂಡಿದ್ದ ಬಾಲಕಿಯ ತಾಯಿ ಮತ್ತು ಆರೋಪಿ ಮಲತಂದೆ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ನಗರದಾದ್ಯಂತ ಹುಟುಕಾಟ ನಡೆಸಿದ್ದರು ಎಂದು ತಿಳಿದುಬಂದಿದೆ.

“ಬಾಲಕಿಯ ತಾಯಿ ಮತ್ತು ಮಲತಂದೆ – ಇಬ್ಬರೂ ಮದ್ಯ ವ್ಯಸನಿಗಳಾಗಿದ್ದರು. ಬಾಲಕಿಯ ಬಗ್ಗೆ ತಾಯಿಯೂ ಕಾಳಜಿ ಮಾಡುತ್ತಿರಲಿಲ್ಲ. ಇಬ್ಬರೂ ಆಕೆಗೆ ಹೊಡೆಯುತ್ತಿದ್ದರು. ಹೀಗಾಗಿ, ತನ್ನ ಮೇಲಾದ ದೌರ್ಜನ್ಯದ ಬಗ್ಗೆ ತಾಯಿಯ ಬಳಿ ಬಾಲಕಿ ಹೇಳಿಕೊಂಡಿಲ್ಲ” ಎಂದು ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...