ರಾಮನಗರ | ಸಮವಸ್ತ್ರ ಧರಿಸಿ ಪೊಲೀಸರು ಹೆದ್ದಾರಿಯಲ್ಲಿ ಕಾಣಿಸಿಕೊಳ್ಳಬೇಕು: ಎಡಿಜಿಪಿ

Date:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಐದು ತಿಂಗಳಲ್ಲಿ 570ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಎಕ್ಸ್‌ಪ್ರೆಸ್‌ವೇನಲ್ಲಿ ಪರಿಶೀಲನೆ ನಡೆಸಿದ್ದು, “ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸಿಕೊಳ್ಳಬೇಕು. ಆಗ ಅಪಘಾತ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಬಹುದು” ಎಂದು ಹೇಳಿದ್ದಾರೆ.

ಬೆಂಗಳೂರಿನ ಹೊರವಲಯದ ಬಾಬಾಸೇಹಬರ ಪಾಳ್ಯದಿಂದ ರಾಮನಗರವರೆಗೆ ಪರಿಶೀಲನೆ ನಡೆಸಿ, ರಾಮನಗರದಲ್ಲಿ ಪೊಲೀಸರೊಂದಿಗೆ ಅಲೋಕ್ ಕುಮಾರ್ ಸಭೆ ನಡೆಸಿದ್ದಾರೆ. “ಹೆದ್ದಾರಿಗಳಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣ ಸಿಗುತ್ತಿಲ್ಲ. ಪೊಲೀಸರು ಸಮವಸ್ತ್ರದಲ್ಲಿ ಕಾಣಿಸಿಕೊಂಡರೆ, ವಾಹನ ಸವಾರರಿಗೆ ಭಯ ಇರುತ್ತದೆ. ನಿಧಾನ ಮತ್ತು ಸುಗಮವಾಗಿ ಚಲಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ಬೆಂಗಳೂರಿನಿಂದ ಬೆಳಗಾವಿವರೆಗೆ ಹೋದರೂ ಯಾವೊಬ್ಬ ಸಿಬ್ಬಂದಿಯೂ ಸಮವಸ್ತ್ರದಲ್ಲಿ ಕಾಣುವುದಿಲ್ಲ.ದಾವಣಗೆರೆಯಲ್ಲಿ ನಾನು ಎಸ್‌ಪಿ ಆಗಿದ್ದಾಗ ಹೆದ್ದಾರಿಯಲ್ಲಿ ಪಹರೆ ಮಾಡುತ್ತಿದ್ದೆವು. ಅದರಿಂದ, ಆ ಹೆದ್ದಾರಿಯಲ್ಲಿ ಶೇ.40ರಷ್ಟು ಅಪಘಾತ ಕಡಿಮೆಯಾಗಿದ್ದವು” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...