ಬಾಗಲಕೋಟೆ | ರನ್ನ ಸರ್ಕಾರಿ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

Date:

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಕ್ಕರೆ ಕಾರ್ಖಾನೆಯನ್ನು ಶೀಘ್ರ ಪುನರಾರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮುಧೋಳ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, “ಮೂರು ವರ್ಷದಿಂದ ಸ್ಥಗಿತಗೊಂಡಿರುವ ಕಾರ್ಖಾನೆ ಆರಂಭಕ್ಕೆ ಸರ್ಕಾರ ಮುಂದಾಗಬೇಕು. ರೈತರ ಹಾಗೂ ಕಾರ್ಖಾನೆ ಕಾರ್ಮಿಕರ ಹಿತ ಕಾಯಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, “ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಕಾರ್ಖಾನೆಯಿಂದಾಗಿ ರೈತರು ಹಾಗೂ ಕಾರ್ಮಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಸರ್ಕಾರ ಕೂಡಲೇ ಕಾರ್ಖಾನೆ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ ಅಧಿಕಾರಕ್ಕೆ ಬಂದಕೂಡಲೇ ಕಾರ್ಖಾನೆ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಪಕ್ಷದ ಸ್ಥಳೀಯ ನಾಯಕರು ಭರವಸೆ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಕಾರ್ಖಾನೆ ಆರಂಭಕ್ಕೆ ಕ್ರಮ ಕೈಗೊಳ್ಳದಿರುವುದು ದುರ್ದೈವದ ಸಂಗತಿ. ಕೂಡಲೇ ಸಚಿವರು ಕಾರ್ಖಾನೆ ಆರಂಭಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದು ಒತ್ತಾಯಿಸಿದರು.

ಹಕ್ಕೊತ್ತಾಯ ಸ್ವೀಕರಿಸಿದ ತಹಸೀಲ್ದಾರ್ ವಿನೋದ ಹತ್ತಳ್ಳಿ, “ಜುಲೈ 4ಕ್ಕೆ ಕ್ಯಾಬಿನೆಟ್ ದರ್ಜೆಯ ಸಭೆಯಿದ್ದು, ಆ ಸಭೆಯಲ್ಲಿ ಕಾರ್ಖಾನೆ ಆರಂಭಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಸೂಚನೆ ಇದೆ. ಅಲ್ಲಿಯವರೆಗೆ ರೈತರು ಸಹಕರಿಸಬೇಕು” ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಈರಪ್ಪ ಹಂಚಿನಾಳ, ಸುಭಾಷ ಶಿರಬೂರ, ಯಲ್ಲಪ್ಪ ಹೆಗಡೆ, ಬಿಜೆಪಿ ಮುಖಂಡರಾದ ರಾಜು ಯಡಹಳ್ಳಿ, ಪ್ರಕಾಶ ಚಿತ್ತರಗಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...