ಬೆಂಗಳೂರು ನಗರದ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ವಿವಾಹವಾಗುವುದಾಗಿ ನಂಬಿಕೆ ಅತ್ಯಾಚಾರ ಮಾಡಿರುವುದಾಗಿ ಮಹಿಳೆ ದೂರು ನೀಡಿದ್ದಾರೆ. ಜೊತೆಗೆ ಸಂತ್ರಸ್ತೆ ಮತ್ತು ಇನ್‌ಸ್ಪೆಕ್ಟರ್ ನಡುವಿನ ವಾಟ್ಸಾಪ್ ಚಾಟ್ ವೈರಲ್ ಆಗಿದೆ.
ಇನ್‌ಸ್ಪೆಕ್ಟರ್ ಸುನೀಲ್ ಕಳೆದ ಒಂದು ವರ್ಷದ ಅವಧಿಯಲ್ಲಿ ಮೂರು ಬಾರಿ ಅತ್ಯಾಚಾರ ಮಾಡಿದ್ದಾರೆ. ಮನೆ ಮತ್ತು ಹೋಟೆಲ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದಾರೆ.
ಇದನ್ನು ಓದಿದ್ದೀರಾ? ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ | ಮ್ಯಾಜಿಸ್ಟ್ರೇಟ್ ತನಿಖಾ ವರದಿ ಒಪ್ಪಿಕೊಂಡ ಸರ್ಕಾರ
36 ವರ್ಷದ ಮಹಿಳೆಗೆ ಬ್ಯೂಟಿ ಪಾರ್ಲರ್ ಮಾಡಿಕೊಡುವುದಾಗಿ, ವಿವಾಹವಾಗುವುದಾಗಿ ಸುನೀಲ್ ಭರವಸೆ ನೀಡಿದ್ದರು. ಆದರೆ ಬಳಿಕ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಹಾಗೆಯೇ ಖಾಸಗಿ ಪೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ನಡೆಸಿದ್ದಾರೆ. ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.





