ಮಂಗಳೂರು | ಮಹಾರಾಷ್ಟ್ರದ ರತ್ನಗಿರಿಯಲ್ಲಿ ಲಾರಿ ಅಪಘಾತ: ಬೋಳಿಯಾರ್ ನ ಯುವಕ ಸಾವು

Date:

ಮುಡಿಪು ಸಮೀಪದ ಬೋಳಿಯಾರ್ ನಿವಾಸಿಯಾದ ವಿವಾಹಿತ ಯುವಕನೋರ್ವ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಮಂಗಳವಾರ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಅವರ ಪುತ್ರ ಮುಹಮ್ಮದ್ ರಿಝಾನ್ (28) ಎಂದು ಪೊಲೀಸರು ಗುರುತಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಂಪೆನಿಯೊಂದರ ಮೂಲಕ ಮೀನಿನ ಲಾರಿಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಿಝಾನ್, ಮೀನಿನ ಸರಕು ಸಾಗಾಟಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ರತ್ನಗಿರಿ ಪ್ರದೇಶದಲ್ಲಿ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ರಿಝಾನ್ ಅವರು ತಂದೆ, ತಾಯಿ, ಪತ್ನಿ, ಎರಡು ವರ್ಷದ ಮಗು ಸೇರಿದಂತೆ ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಬಂಧುಬಳಗದಲ್ಲಿ ಶೋಕಮಡುಗಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತದೇಹವು ಬುಧವಾರ ಬೆಳಿಗ್ಗೆ ಸ್ವಗ್ರಾಮಕ್ಕೆ ತರಲಾಗಲಿದ್ದು, ಬೋಳಿಯಾರ್ ಕೇಂದ್ರ ಮಸೀದಿಯ ವಠಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...