ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ : ಬೆಳಗಾವಿ ಜಿಲ್ಲೆಯೊಂದರಲ್ಲೇ ₹1.89 ಕೋಟಿ ದಂಡ ವಸೂಲಿ!

Date:

ರಾಜ್ಯಾದ್ಯಂತ ರೇಷನ್‌ ಕಾರ್ಡ್‌ಗಳ ಪರಿಶೀಲನೆ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ನಕಲಿ ದಾಖಲೆ ನೀಡಿ, ರೇಷನ್ ಕಾರ್ಡ್‌ ಪಡೆದವರಿಗೆ ದಂಡ ವಿಧಿಸಲಾಗುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯೊಂದರಲ್ಲೇ ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದಿದ್ದವರಿಂದ ಬರೋಬ್ಬರಿ ₹1.89 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ.

ಬೆಳಗಾವಿಯಲ್ಲಿ ಕಳೆದ ಆರು ತಿಂಗಳಿಂದ ಪಡಿತರ ಪಡೆಯದ 19,969 ಚೀಟಿಗಳನ್ನು ರದ್ದು ಮಾಡಲಾಗಿದ್ದು, ನಕಲಿ ದಾಖಲೆ ನೀಡಿ ಆದ್ಯತಾ ಪಡಿತರ ಚೀಟಿ ಪಡೆದವರಿಂದ ಈವರೆಗೆ ಒಟ್ಟು ₹1.89 ಕೋಟಿ ರೂ. ದಂಡ ಕೂಡ ವಸೂಲಿ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ”ಜಿಲ್ಲೆಯಲ್ಲಿ 557 ಅಂತ್ಯೋದಯ, 19,412 ಆದ್ಯತಾ ಪಡಿತರ ಚೀಟಿ ಸೇರಿ ಒಟ್ಟು 19,969 ಪಡಿತರ ಚೀಟಿದಾರರು 6 ತಿಂಗಳಿಂದ ಪಡಿತರ ಧಾನ್ಯ ಪಡೆದಿಲ್ಲ. ಹೀಗಾಗಿ, ಈ ಎಲ್ಲಪಡಿತರ ಚೀಟಿಗಳನ್ನು 2024ರ ಜುಲೈ 29ರಂದು ರದ್ದುಪಡಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಜಿಲ್ಲಾಧಿಕಾರಿ ರೋಷನ್
ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌

‘ಅಲ್ಲದೇ, ಸರಕಾರಿ ನೌಕರರು ಹಾಗೂ ಅನರ್ಹರು ಹೊಂದಿರುವ ಒಟ್ಟು 45,804 ಆದ್ಯತಾ ಪಡಿತರ ಚೀಟಿಗಳನ್ನು ‘ಆದ್ಯತೇತರ’ ಎಂದು ಪರಿವರ್ತಿಸಲಾಗಿದೆ. ಇಷ್ಟು ದಿನ ಆದ್ಯತಾ ಪಡಿತರ ಚೀಟಿ ಲಾಭ ಪಡೆದ ಕಾರಣ ಆ ಎಲ್ಲ ಪಡಿತರ ಚೀಟಿದಾರರಿಂದ ಒಟ್ಟು 1,88,75,946 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

11,117 ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರು, 1,421 ಆದ್ಯತೇತರ ಪಡಿತರ ಚೀಟಿದಾರರು ಸೇರಿ ಒಟ್ಟು 12,538 ಫಲಾನುಭವಿಗಳು ಮೃತಪಟ್ಟಿದ್ದು, ಅವರ ವಿವರವನ್ನು ಕುಟುಂಬ ದತ್ತಾಂಶದಿಂದ ತೆಗೆಯಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...