ಚಿಕ್ಕಮಗಳೂರು | ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಬಂದ ರವೀಂದ್ರ ಕೋಟೆಹೊಂಡ

Date:

ನಕ್ಸಲ್ ಹೋರಾಟಗಾರರಾಗಿ ಗುರುತಿಸಿಕೊಂಡು, ಭೂಗತರಾಗಿದ್ದ ಕೋಟೆಹೊಂಡ ರವಿ ಯಾನೆ ರವೀಂದ್ರ ನೆಮ್ಮಾರ್(41) ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಶನಿವಾರ(ಫೆ.1) ಮುಖ್ಯವಾಹಿನಿಗೆ ಬಂದಿದ್ದಾರೆ.

ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಚಿಕ್ಕಮಗಳೂರು ಎಸ್‌ಪಿ ಕಚೇರಿಗೆ ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್‌ ಶರಣಾಗತಿ ಸಮಿತಿಯ ಸದಸ್ಯರೊಂದಿಗೆ ಆಗಮಿಸಿದರು. ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ರವೀಂದ್ರ ವಿಕ್ರಮ್ ಗೌಡ ಎನ್ಕೌಂಟರ್ ಬಳಿಕ ನಾಪತ್ತೆಯಾಗಿದ್ದರು. ಈಗ ಮುಖ್ಯವಾಹಿನಿಗೆ ಬರುವ ಮೂಲಕ ರಾಜ್ಯದಲ್ಲಿ ನಕ್ಸಲ್ ಹೋರಾಟ ಅಂತ್ಯವಾಗಿದೆ.

ಚಿಕ್ಕಮಗಳೂರು 19

ಚಿಕ್ಕಮಗಳೂರು ‌ಎಸ್‌ಪಿ‌ ವಿಕ್ರಮ್ ಅಮಟೆ, ಜಿಲ್ಲಾಧಿಕಾರಿ ಮೀನಾ ನಾಗರಾಜ್‌‌ ಎದುರು ಮುಖ್ಯವಾಹಿನಿಗೆ ಬಂದಿರುವ ರವೀಂದ್ರ ಅವರು, ಬಳಿಕ ಪತ್ರಕರ್ತರೊಂದಿಗೆ ಸುದ್ದಿಗೋಷ್ಠಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರವೀಂದ್ರ ಶೃಂಗೇರಿ ತಾಲ್ಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ಗ್ರಾಮದವರು. ಕಳೆದ‌ 18 ವರ್ಷಗಳಿಂದ ಭೂಗತರಾಗಿದ್ದರು. ಕಳೆದ ತಿಂಗಳು, ಜನವರಿ 8ರಂದು, ಆರು ಮಂದಿ ನಕ್ಸಲ್ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದಿದ್ದರು.

ಜ.8ರಂದು 6 ಮಂದಿ ನಕ್ಸಲ್ ಹೋರಾಟಗಾರರಾದ ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ತೂರು, ಮಾರೆಪ್ಪ ಅರೋಲಿ, ಕೆ.ವಸಂತ (ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಗೃಹಕಚೇರಿ ಕೃಷ್ಣದಲ್ಲಿ ಸಂವಿಧಾನದ ಪ್ರತಿಯನ್ನು ಕೊಟ್ಟು ಎಲ್ಲರನ್ನೂ ಸ್ವಾಗತಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಇದನ್ನು ಓದಿದ್ದೀರಾ? ಬಜೆಟ್ 2025 | ಬಿಹಾರಕ್ಕೆ ಭರಪೂರ ಕೊಡುಗೆ, ಚುನಾವಣೆಗಾಗಿ ಎಂದ ವಿರೋಧ ಪಕ್ಷಗಳು, ಆಕ್ರೋಶ

ಈ ತಂಡದಿಂದ ಬೇರ್ಪಟ್ಟಿದ್ದ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್‌ ಶರಣಾಗತಿ ಸಮಿತಿ ಮಾಡಿದ್ದು, ರವೀಂದ್ರ ಅವರನ್ನು ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.

ಸ್ವ-ಇಚ್ಛೆಯಿಂದ ಮುಖ್ಯವಾಹಿನಿಗೆ ಬಂದಿದ್ದೇನೆ: ರವೀಂದ್ರ ಕೋಟೆಹೊಂಡ

ಮುಖ್ಯವಾಹಿನಿಗೆ ಬಂದ ಬಳಿಕ ಜಿಲ್ಲಾಡಳಿತದೊಂದಿಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವೀಂದ್ರ ಕೋಟೆಹೊಂಡ, “ಯಾರದೇ ಬಲವಂತಕ್ಕೆ ಬಂದಿಲ್ಲ. ಸ್ವಇಚ್ಛೆಯಿಂದ ಮುಖ್ಯವಾಹಿನಿಗೆ ಬಂದಿದ್ದೇನೆ” ಎಂದು ತಿಳಿಸಿದ್ದಾರೆ.

“ನಮ್ಮೂರಿನಲ್ಲಿ ರಸ್ತೆ ಅಭಿವೃದ್ಧಿಯಾಗಬೇಕು. ಭೂಮಿ ಇಲ್ಲದವರಿಗೆ ಜಮೀನಿನ ಹಕ್ಕುಪತ್ರ ನೀಡಬೇಕು. ಕಾಡಿನ ಉತ್ಪನ್ನಗಳನ್ನು ತರಲು ಅಡ್ಡಿ ಇರಬಾರದು ಎಂಬ ಬೇಡಿಕೆಗಳನ್ನು ಸರ್ಕಾರಕ್ಕೆ ನೀಡಿದ್ದೇನೆ. ಸಮಾಜದ ಮುಖ್ಯವಾಹಿನಿಯಲ್ಲಿ ಮುಂದೆ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ವೇಳೆ ಮಾತನಾಡಿ, “ಶರಣಾಗಿರುವ ರವೀಂದ್ರ ಅವರು ‘ಎ’ ಕೆಟಗರಿಯ ನಕ್ಸಲ್ ಆಗಿದ್ದಾರೆ. ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಅವರಿಗೆ ₹7.50 ಲಕ್ಷ ಸರ್ಕಾರದಿಂದ ಬರಲಿದೆ. ಸರ್ಕಾರದ ಅನುಮತಿ ಪಡೆದು ಮೊದಲ ಹಂತದಲ್ಲಿ ₹3 ಲಕ್ಷ ನೀಡಲಾಗುವುದು. ಬಾಕಿ ಮೊತ್ತವನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು. ಅವರು ಬಯಸಿದರೆ ಕೌಶಲ್ಯ ತರಬೇತಿ ನೀಡಲಾಗುವುದು. ಇವರ ಮೇಲೆ ದಾಖಲಾಗಿರುವ ಮೊಕದ್ದಮೆಗಳ ಸಂಬಂಧ ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಮಾತನಾಡಿ, ‘ರವೀಂದ್ರ ಅವರು ಶರಣಾಗಿದ್ದು, ಅವರ ವಿರುದ್ಧ ಒಟ್ಟು 27 ಪ್ರಕರಣ ದಾಖಲಾಗಿವೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಜರುಗಿಸಲಾಗುವುದು. ಕರ್ನಾಟಕ ಈಗ ನಕ್ಸಲ್ ಹೋರಾಟದಿಂದ ಮುಕ್ತವಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯರಾದ ವಕೀಲ ಕೆ.ಪಿ.ಶ್ರೀಪಾಲ್, ಶಾಂತಿಗಾಗಿ ನಾಗರಿಕರ ವೇದಿಕೆಯ ಕೆ.ಎಲ್.ಅಶೋಕ್, ವಿ.ಎ. ಶ್ರೀಧ‌ರ್, ನಗರಗೆರೆ ರಮೇಶ್, ಗೌಸ್ ಮೊಹಿಯುದ್ದೀನ್ ಸೇರಿದಂತೆ ಪ್ರಗತಿಪರ ಹೋರಾಟಗಾರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...