ಚಿಕ್ಕಬಳ್ಳಾಪುರ | ನಮ್ಮ ಆಡಳಿತದಲ್ಲಿ ಅಧಿಕಾರಿಗಳಿಂದ ಹಣ ಪಡೆದಿರುವುದು ಸಾಬೀತಾದರೆ, ರಾಜಕೀಯ ನಿವೃತ್ತಿ : ಸಂಸದ ಸುಧಾಕರ್‌ ಸವಾಲು

Date:

ಮಂತ್ರಿಗಳು ಪ್ರತಿಯೊಂದು ಪೋಸ್ಟಿಂಗ್‌ ಮತ್ತು ಪ್ರಮೋಷನ್‌ಗೂ ಅಧಿಕಾರಿಗಳಿಂದ ಹಣ ಪಡೆಯುತ್ತಿದ್ದಾರೆ. ಬಿಜೆಪಿ ಸರಕಾರದಲ್ಲಿ ನನ್ನ ಆಡಳಿತದಲ್ಲಿ ಒಬ್ಬ ಅಧಿಕಾರಿಯಿಂದ ಹಣ ಪಡೆದಿರುವುದು ಸಾಬೀತಾದರೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಂಸದ ಸುಧಾಕರ್‌ ಸವಾಲೆಸೆದರು.

ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಧಿಕಾರಿ ಜಿಲ್ಲೆಗೆ ಬರಬೇಕಾದರೆ ಹಣ ಕೊಡಬೇಕು. ಪ್ರತಿಯೊಂದು ಪೋಸ್ಟಿಂಗ್‌ಗೂ ದುಡ್ಡು ಕೊಡಬೇಕು, ಪ್ರಮೋಷನ್‌ಗೂ ದುಡ್ಡು ಕೊಡಬೇಕು. ಹಣ ಕೊಟ್ಟು ಬಂದ ಅಧಿಕಾರಿಗಳಿಂದ ಇವರು ಯಾವ ನೈತಿಕತೆ ಇಟ್ಟುಕೊಂಡು ಕೆಲಸ ಮಾಡಿಸಿಕೊಳ್ಳುತ್ತಾರೆ. ನಮ್ಮ ಸರಕಾರದ ವಿರುದ್ಧ ಮಾತನಾಡುವ ಇವರಿಗೆ ಮಾನ ಮರ್ಯಾದೆ ಇದೆಯಾ? ಎಂದು ಗುಡುಗಿದರು.

ಮಂತ್ರಿಗಳು ಪ್ರತೀ ಇಲಾಖೆಯಲ್ಲಿ ಏಜೆಂಟ್‌ಗಳನ್ನ ಇಟ್ಟಿದ್ದಾರೆ. ಈ ಜಿಲ್ಲೆಯಲ್ಲಿ ಅವರ ಸಂಬಂಧಿಕರು, ಅಣ್ಣತಮ್ಮಂದಿರು ಸೇರಿದಂತೆ ಅವರ ಮಕ್ಕಳೂ ಸಹ ಏಜೆಂಟ್‌ಗಳಾಗಿದ್ದಾರೆ. ಪ್ರತೀ ಕಡತಕ್ಕೂ ಇಂತಿಷ್ಟು ಹಣ ನಿಗದಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ವಿರುದ್ಧ ನೇರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆಗಳಲ್ಲಿ ಯಾವುದೇ ನೋಂದಣಿಯಾಗಲೀ, ಜಮೀನು ಕನ್ವರ್ಷನ್‌ ಆಗಲೀ, ಅದಕ್ಕೆ ಇಂತಿಷ್ಟು ಹಣ ನಿಗದಿ ಮಾಡುತ್ತಿದ್ದಾರೆ. ಇದು ಜಗಜ್ಜಾಹೀರಾಗಿರುವ ವಿಚಾರ. ಈ ರೀತಿಯಾದರೆ ಅಧಿಕಾರಿಗಳು ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರಶ್ನೆ ಮಾಡಿದರು.

ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರು ಜಿಲ್ಲೆಯಲ್ಲಿ ಕಾಮಗಾರಿ ಮಾಡಲು ತಯಾರಿಲ್ಲ. ಅವರಿಂದ ದೊಡ್ಡ ಮೊತ್ತದ ಕಮಿಷನ್‌ ನಿರೀಕ್ಷೆ ಮಾಡುತ್ತಿದ್ದಾರೆ. ಹಾಗಾಗಿ ಗುತ್ತಿಗೆದಾರರು ಕಾಮಗಾರಿ ಕೈಗೆತ್ತಿಕೊಳ್ಳಲು ಹೆದರುತ್ತಿದ್ದಾರೆ. ಶಾಸಕರಿಗೆ ಕೊಡುವಷ್ಟು ಹಣ ಎಲ್ಲಿಂದ ತರಬೇಕು ಅವರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಎಸ್ಪಿಯವರ ಮಾತಿಗೆ ಕವಡೇ ಕಾಸಿನ ಕಿಮ್ಮತ್ತಿಲ್ಲವೇ?

ಸರ್ಕಲ್‌ ಇನ್ಸ್ಪೆಕ್ಟರ್‌ ಬರೋದಿಕ್ಕೆ 50 ಲಕ್ಷದಿಂದ 1 ಕೋಟಿ ಕೊಡಬೇಕು. ಅವರು ಎಲ್ಲಿಂದ ಹಣ ತರಬೇಕು. ಕಾವಲು ಕಾಯಬೇಕಾದವರೇ ಕಳ್ಳತನಕ್ಕೆ ಇಳಿದಿದ್ದಾರೆ. ಇಲ್ಲಿನ ಜನಪ್ರತಿನಿಧಿಗಳೇ ಇದಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಇಂತಹವರನ್ನು ಜನ ಆಯ್ಕೆ ಮಾಡಿದ್ದಾರೆ. ಈಗ ಅನುಭವಿಸಲಿ. ನಮ್ಮ ಸರಕಾರ ಬಂದರೆ ಎಲ್ಲಾ ಸರಿಪಡಿಸುತ್ತೇವೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...