ರಾಯಚೂರು | ಅಲ್ಪಸಂಖ್ಯಾತ ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ; ಎಐಆರ್‌ಎಸ್‌ಒ ಖಂಡನೆ

Date:

ಅಲ್ಪಸಂಖ್ಯಾತರ ಸಮುದಾಯದ ಪಿಎಚ್‌ಡಿ ಮತ್ತು ಎಂಫಿಲ್ ವ್ಯಾಸಂಗ ಮಾಡುವ ಸಂಶೋಧನಾರ್ಥಿಗಳಿಗೆ ಪ್ರತಿ ವರ್ಷ ನೀಡುವ ಫೆಲೋಶಿಪ್ ಹಣ ಕಡಿತಗೊಳಿಸಿದ್ದನ್ನು ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿತು.

2019 ಮತ್ತು 2020ರಲ್ಲಿ ಪಿಎಚ್ ಡಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಂಫಿಲ್ ಅಭ್ಯರ್ಥಿಗಳಿಗೆ ಎರಡು ವರ್ಷಕ್ಕೆ ಪ್ರತಿ ತಿಂಗಳು 25 ಸಾವಿರ ರೂ.ಗಳನ್ನು ಜೆಆರ್‌ಎಫ್ ಮಾದರಿಯಲ್ಲಿ ನೀಡಲಾಗುತ್ತಿತ್ತು. ಹತ್ತು ಸಾವಿರ ನಿರ್ವಹಣಾ ವೆಚ್ಚವಾಗಿ ಭರಿಸಲಾಗುತ್ತಿತ್ತು. ಆದರೆ, ಈ ಬಾರಿ ಹಿಂದೆ ನೀಡಿದ ಫೆಲೋಶಿಪ್‌ಗಿಂತ ತುಂಬಾ ಕಡಿಮೆ ನೀಡುತ್ತಿರುವುದನ್ನು ಸರ್ಕಾರದ ಆದೇಶದಲ್ಲಿ ನೋಡಬಹುದು.

ಅಂದರೆ, 28.06.2022, 05.08.2022ರ ಆದೇಶದ ಅನ್ವಯ, 2022–23ನೇ ಸಾಲಿನಿಂದ ಜಾರಿಗೆ  ಬರುವಂತೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕ ಪಿಎಚ್‌ಡಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಅವಧಿಗೆ ಮತ್ತು ಎಂಫಿಲ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಅವಧಿಗೆ ಒಂದು ಕೋರ್ಸ್ ಗೆ ಒಂದು ಬಾರಿ ಮಾತ್ರ ಪ್ರತಿ ತಿಂಗಳು 10 ಸಾವಿರಗಳನ‌ನು ಜೆಆರ್‌ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲು ಸರ್ಕಾರ ಆದೇಶಿಸಿದ್ದು ಇದು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಲಿದೆ ಎಂದು ಅವರು ಮನವಿ ಪತ್ರದಲ್ಲಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ನೀಡುತ್ತಿದ್ದ 25 ಸಾವಿರ ಅಭ್ಯರ್ಥಿಗಳಿಗೆ ಸಾಕಾಗುತ್ತಿರಲಿಲ್ಲ. ಅಂಥದರಲ್ಲಿ ಎರಡು ವರ್ಷಗಳಿಗೆ 10 ಸಾವಿರ ನೀಡುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು ಮಾದರಿಯಾಗಿದೆ. ಆದರೆ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಬದಲು ಅನುದಾನ ಕಡಿತಗೊಳಿಸುತ್ತಿರುವುದು ಸಮರ್ಥನೀಯವಲ್ಲ.

ಕಳೆದ ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಪಸಂಖ್ಯಾತರು ಅದರಲ್ಲಿ ಮುಸ್ಲಿಮರೇ ನಿರ್ಣಯಕ ಪಾತ್ರ ವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದನ್ನು ರಾಜ್ಯದ ಜನರಿಗೆ ಗೊತ್ತಿರುವಂತಹದ್ದು ಈ ನಿಟ್ಟಿನಲ್ಲಿ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಈ ಹಿಂದೆ ನೀಡುತ್ತಿದ್ದ 25 ಸಾವಿರ ನೀಡುತ್ತಿದ್ದ ಮೊತ್ತ 30 ಸಾವಿರ ಹೆಚ್ಚಿಸಿ ನಿರ್ವಾಹಣ ವೆಚ್ಚ 10 ಸಾವಿರ ನೀಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಅಜೀಜ್ ಜಾಗೀರ್ದಾರ್, ಜಿ ಅಂಬರೀಶ್, ನಿರಂಜನ್ ಕುಮಾರ್, ವೆಂಕಟೇಶ್, ವಿನಯ್ ಕುಮಾರ್, ಲಕ್ಷ್ಮಣ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...