ಬಂಧಿತ ಮಹಿಳಾ ಕುಸ್ತಿಪಟುಗಳನ್ನು ತಕ್ಷಣ ಬಿಡುಗಡೆ ಮಾಡಿ, ನ್ಯಾಯ ಒದಗಿಸಿ: ಸಿಎಂ ಸಿದ್ದರಾಮಯ್ಯ ಆಗ್ರಹ

Date:

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕರಿತು ಟ್ವೀಟ್‌ ಮಾಡಿರುವ ಅವರು, “ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ನರೇಂದ್ರ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ” ಎಂದು ಟೀಕಿಸಿದ್ದಾರೆ.

“ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...