ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಸಿಗದ ಪರಿಹಾರ : ಮತ್ತೆ ಮೂವರು ರೈತರಿಂದ ವಿಷ ಸೇವನೆ

Date:

ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ನಗರದ ಜಿಲ್ಲಾ ಉಸ್ತುವಾರಿ ಕಚೇರಿ ಎದುರು ಕಳೆದ 890 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಂತ್ರಸ್ತರು ಹೋರಾಟವನ್ನು ತೀವ್ರಗೊಳಿಸಿದ್ದು, ಗುರುವಾರ (ಡಿ12) ಪ್ರತಿಭಟನಾ ಸ್ಥಳದಲ್ಲಿ ಮತ್ತೆ ಮೂವರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕಾರಂಜಾ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಹೊಚಕನಳ್ಳಿ, ರಾಜಪ್ಪ ಕಮಲಪುರ ಹಾಗೂ ರಾಜಶೇಖರ ಖೇಣಿ ರಂಜೋಳ ವಿಷ ಸೇವಿಸಿದ್ದು, ಕೂಡಲೇ ಗಮನಿಸಿದ ಸ್ಥಳದಲ್ಲಿದ್ದ ಪೊಲೀಸರು ಮೂವರನ್ನು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ಮಾಹಿತಿ ತಿಳಿದುಬಂದಿದೆ.

ಕಳೆದ 890 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರಿಗೆ ಯಾವುದೇ ಸರ್ಕಾರ ಬೇಡಿಕೆ ಈಡೇರಿಕೆಗೆ ಮುಂದಾಗದೇ ಹುಸಿ ಭರವಸೆ ನೀಡುತ್ತಿದೆ. ಮುಂದಿನ ಎರಡು ವಾರದಲ್ಲಿ ಬೇಡಿಕೆಗಳನ್ನು ಬಗೆಹರಿಸದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂತ್ರಸ್ತರು ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ.10ಕ್ಕೆ ಗಡವು ಮುಗಿದ ಹಿನ್ನಲೆ ಬುಧವಾರ (ಡಿ.11) ಕೊರಳಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆಯ ಅಣುಕು ಪ್ರದರ್ಶನ ನಡೆಸಿ ಸರ್ಕಾರದ ಗಮನ ಸೆಳೆದಿದ್ದರು. ಈ ವೇಳೆ 30ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಸಂತ್ರಸ್ತ ರೈತ ನಾಗಶೆಟ್ಟಿ ಎಂಬುವರು ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರ ಕೈಯಿಂದ ಪೊಲೀಸರು ವಿಷ ಡಬ್ಬಿ ಕಸಿದುಕೊಂಡು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಆಳುಗಳ ಕೊರತೆ : ಕಬ್ಬು ಕಟಾವಿಗೆ ಮಹಾರಾಷ್ಟ್ರ, ತೆಲಂಗಾಣದ ಕಾರ್ಮಿಕರ ಮೊರೆ

ಈ ಪ್ರತಿಭಟನೆಯ ಮರುದಿನವೇ ಮೂವರು ಕಾರಂಜಾ ಸಂತ್ರಸ್ತ ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಜನಪ್ರತಿನಿಧಿಗಳ ಭರವಸೆಗಳಿಂದ ಬೇಸತ್ತ ಸಂತ್ರಸ್ತರ ಹೋರಾಟ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಎಲ್ಲ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...