ಕೊಳ್ಳೇಗಾಲ | ಸಾವಿತ್ರಿಬಾಯಿ ಫುಲೆ ನೆನಪಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ: ಎ ಆರ್ ಕೃಷ್ಣಮೂರ್ತಿ

Date:

ಚಾಮರಾಜನಗರ ಜಿಲ್ಲೆ, ಕೊಳ್ಳೆಗಾಲ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎ. ಆರ್. ಕೃಷ್ಣಮೂರ್ತಿ ಸಾವಿತ್ರಿಬಾಯಿ ಫುಲೆ ನೆನಿಪಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಹೇಳಿದರು.

“ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರನ್ನು ನೆನಪಿಸಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಕೊಟ್ಟು ಸುಸಂಸ್ಕೃತರನ್ನಾಗಿ ಮಾಡಿ, ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ರೂಪಿಸುವ ಶಿಕ್ಷಕರ ಶ್ರಮ ಅಪಾರವಾದದ್ದು. ಶಿಕ್ಷಕರು ತಪ್ಪು ಮಾಡಿದರೆ ಸಮಾಜ ದಾರಿ ತಪ್ಪುತ್ತದೆ. ಶಿಕ್ಷಕರು ಜವಾಬ್ದಾರಿಯುತವಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಸಮಾಜಕ್ಕೆ ಕೊಡುಗೆ ನೀಡಬೇಕು” ಎಂದು ತಿಳಿಸಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಎಲ್ಲ ಸಮುದಾಯದ ಹೆಣ್ಣು ಮಕ್ಕಳಿಗೆ ಶಿಕ್ಷಣದ ಹಕ್ಕುಗಳನ್ನು ನೀಡಿ, ಸಮಾನ ಅವಕಾಶಗಳನ್ನು ಕಲ್ಪಿಸಿ ಕೊಟ್ಟಿದ್ದಾರೆ. ಆದ್ದರಿಂದ, ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಜೀವನ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸ್ಲಂಗಳಲ್ಲಿ ಹೆಚ್ಚುವರಿ ಕುಟುಂಬಗಳಿಗೆ ನಿವೇಶನ, ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಶಂಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಬಿಇಒ ಮಂಜುಳಾ, ಅಕ್ಷರ ದಾಸೋಹ ಇಲಾಖೆಯ ರಂಗಸ್ವಾಮಿ, ಸಿಆರ್‌ಪಿ ಮಹದೇವಕುಮಾರ್, ಕೆ. ಸೌಭಾಗ್ಯವತಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...