ಪೇಟೆಚಾಮನಹಳ್ಳಿ ಬಳಿಯ ಆರ್.ವಿ ಶಾಲೆ ಮುಂದೆ ಕಬ್ಬಿಣದ ತಡೆಗೋಡೆ ನಿರ್ಮಾಣಕ್ಕೆ ಡಿಸಿಗೆ ಮನವಿ

Date:

ಕೋಲಾರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ಪೇಟೆಚಾಮನಹಳ್ಳಿಯ ಆರ್ ವಿ ಖಾಸಗಿ ಶಾಲೆ ಬಳಿಯ ಮುಖ್ಯರಸ್ತೆಗೆ ಕಬ್ಬಿಣದ ಸರಳಗಳ ತಡೆಗೋಡೆ ನಿರ್ಮಿಸುವಂತೆ ಸೋಮವಾರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಭೂಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಆರ್.ಶ್ರೀನಿವಾಸನ್ ನೇತೃತ್ವದಲ್ಲಿ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್ ರವಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಲವು ಭಾಗಗಳಲ್ಲಿ ಆಕಸ್ಮಿಕವಾಗಿ ಅಪಘಾತಗಳು ನಡೆಯುತ್ತಿದ್ದು ಸಾರ್ವಜನಿಕರು ಸಹ ಸಂಚಾರಿ ನಿಯಮಗಳನ್ನು ಪಾಲಿಸುವುದರ ಜೊತೆಗೆ ದ್ವಿಚಕ್ರ ವಾಹನದ ಸವಾರರು ಕಡ್ಡಾಯವಾಗಿ ಎಲೈಟ್ ಧರಿಸಿ ಪ್ರಯಾಣಿಸುವುದರಿಂದ ಎಷ್ಟೋ ಜೀವಗಳು ಉಳಿದಿವೆ ರಸ್ತೆಯ ಬದಿಗಳಲ್ಲಿ ಇರುವ ಶಾಲೆಯ ಮುಖ್ಯಸ್ಥರು ಕಡ್ಡಾಯವಾಗಿ ಮಕ್ಕಳು ಮತ್ತು ಪೋಷಕರು ಶಾಲೆ ಬಿಟ್ಟಾಗ ಮತ್ತು ಶಾಲೆಗೆ ಬಂದಾಗ ಅಲ್ಲಿ ರಕ್ಷಣೆ ನೀಡುವುದು ಸಂಚಾರಿ ನಿಯಮಗಳನ್ನು ಪಾಲಿಸಲು ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

ಇದನ್ನು ಓದಿದ್ದೀರಾ..? ಸುಗಟೂರಿನ ಗೋ.ನಾ ಸ್ವಾಮಿ ಯಿಂದ ಬ್ಯಾಂಕಾಕ್ ನಲ್ಲಿ ಯುಗಾದಿ ವಸಂತೋತ್ಸವ ಕಾರ್ಯಕ್ರಮ

ಕೂಡಲೇ ರಾಷ್ಟ್ರೀಯ ಹೆದ್ದಾರಿ 75 ಅಧಿಕಾರಿಗಳ ಜೊತೆ ಮಾತನಾಡಿ ಅಲ್ಲಿ ಕಬ್ಬಿಣದ ಸರಳಗಳ ತಡೆಗೋಡೆ ನಿರ್ಮಿಸುವಂತೆ ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಹರಟಿ ಪ್ರಕಾಶ್, ಭಟ್ರಹಳ್ಳಿ ಮಂಜುನಾಥ್ ಇದ್ದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...