ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ; ಬೆಂಗಳೂರಿಗೆ ಕರೆ ತರಲು ವಿಮಾನ ವ್ಯವಸ್ಥೆ

Date:

ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು, ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೊಲ್ಕತ್ತಾ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕರೆತರಲು ಅವರೆಲ್ಲರಿಗೂ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ.

ಭಾನುವಾರ ಬೆಳಗ್ಗೆ ಮುಂಜಾನೆ 4.15 ಕ್ಕೆ ಇಂಡಿಗೋ ವಿಮಾನದಲ್ಲಿ ಹೊರಟು ಬೆಂಗಳೂರು ನಗರಕ್ಕೆ 6.50ಕ್ಕೆ 32 ಮಂದಿ ವಾಲಿಬಾಲ್ ಆಟಗಾರರು ಬಂದಿಳಿಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲ್ಕತ್ತಾದಲ್ಲಿ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಮಹಿಳಾ, ಪುರುಷ ಆಟಗಾರರು, ಕೋಚ್ ಸೇರಿದಂತೆ 32 ಮಂದಿ ಪಾಲ್ಗೊಂಡಿದ್ದರು. ಪಂದ್ಯ ಮುಗಿಸಿ ವಾಪಸ್ ಬರುವಾಗ ಒಡಿಶಾದಲ್ಲಿ‌ ರೈಲು ದುರಂತ ಸಂಭವಿಸಿದ್ದರಿಂದ ಕೊಲ್ಕತ್ತಾದಲ್ಲಿ ಈ ಆಟಗಾರರು ಸಂಕಷ್ಟಕ್ಕೆ ಸಿಲುಕಿದ್ದರು.

ಇದರಿಂದಾಗಿ ತಕ್ಷಣವೇ ರಾಜ್ಯ ಕಾರ್ಮಿಕ‌ ಸಚಿವ ಸಂತೋಷ್ ಲಾಡ್, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ಟಿಕೆಟ್ ಬುಕ್ ಮಾಡುವ ಜತೆಗೆ ವಾಪಸ್ ಬರುವ ತನಕವೂ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...