ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

Date:

  • ಸೂಕ್ಷ್ಮ ಪ್ರದೇಶದ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಿ
  • ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲ ಸೌಕರ್ಯ ಒದಗಿಸಿ

ಮಳೆಗಾಲದ ಅವಧಿಯಲ್ಲಿ ಅವಘಡಗಳು ಸಂಭವಿಸಿದಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ತಕ್ಷಣ ಸ್ಪಂದಿಸಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಸೂಚನೆ ನೀಡಿದರು.

ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮುಂಗಾರು ಅವಧಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆಗಾಲದ ಸಂದರ್ಭದಲ್ಲಿ ಪ್ರವಾಹ, ಭೂ ಕುಸಿತ ಉಂಟಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಗಾಳಿ ಮಳೆಯಿಂದಾಗಿ ಮರಗಳು ವಿದ್ಯುತ್ ತಂತಿಗಳ ಮೇಲೆ ಉರುಳಿ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕಂದಾಯ, ಸೆಸ್ಕಾಂ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲ ಸೌಕರ್ಯ ಒದಗಿಸುವಂತಾಗಬೇಕು. ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡಬೇಕು ಎಂದು ಹೇಳಿದರು.

ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಮಾನಸಿಕ ಧೈರ್ಯ ತುಂಬಲು ಆರೋಗ್ಯ ಇಲಾಖೆ ವತಿಯಿಂದ ಆಪ್ತ ಸಮಾಲೋಚಕರನ್ನು ನಿಯೋಜಿಸಬೇಕು. ಕಾಳಜಿ ಕೇಂದ್ರಗಳಿಗೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಯಾವುದೇ ಲೋಪ ದೋಷಗಳಾಗದಂತೆ ಎಚ್ಚರವಹಿಸಬೇಕು. ಸೂಕ್ಷ್ಮ ಪ್ರದೇಶದಲ್ಲಿ ವಾಸಿಸುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಗುರುತಿಸಿರುವ ಸೂಕ್ಷ್ಮ ಪ್ರದೇಶದಲ್ಲಿನ ಜನರಿಗೆ ಕೂಡಲೇ ನೋಟಿಸ್ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರಾಜಕಾಲುವೆ, ಚರಂಡಿಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಹಾಗೂ ತಾತ್ಕಾಲಿಕವಾಗಿ ರಸ್ತೆಗಳ ಗುಂಡಿ ಮುಚ್ಚಲು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೀಳುವ ಮರಗಳನ್ನು ಕೂಡಲೇ ತೆರವುಗೊಳಿಸಬೇಕು. ರಸ್ತೆಗಳಿಗೆ ಅಡ್ಡವಾಗಿ ಬೆಳೆದಿರುವ ಗಿಡಗಂಟಿಗಳನ್ನು ಕಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ರೋಗಗಳು ಹರಡದಂತೆ ಎಚ್ಚರವಹಿಸಿ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಇರಬೇಕು ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ಸಿಗಲು ಕ್ರಮ ಕೈಗೊಳ್ಳುವಂತೆ ಕರ್ತವ್ಯ ನಿರ್ವಹಿಸಿ ಎಂದರು.

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಶಾಲಾ ಕಟ್ಟಡಗಳ ವರದಿ ನೀಡಬೇಕು ಮತ್ತು ಅಂತಹ ಕಟ್ಟಡಗಳಲ್ಲಿ ಮಕ್ಕಳಿಗೆ ಪಾಠ ಮಾಡಬಾರದು, ಅಂಗನವಾಡಿಗಳಿಗೆ ಸಮಯಕ್ಕೆ ಸರಿಯಾಗಿ ಪೌಷ್ಠಿಕಾಂಶದ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಬೇಕು ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಸಾವುಗಳಾದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಖರ್ ಮಾತನಾಡಿ, ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಲಾಗಿದೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

19 ಶಾಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಶಾಲೆಗಳ ಮುಖ್ಯೋಪಾಧ್ಯಾಯರನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಸ್ಥಳೀಯವಾಗಿ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಎಂದು ತಿಳಿಸಿದರು.

ತಹಶೀಲ್ದಾರ್ ಕಿರಣ್ ಗೌರಯ್ಯ ಮಾತನಾಡಿ, ಸೂಕ್ಷ್ಮ ಪ್ರದೇಶದಲ್ಲಿ ವಾಸಿಸುವ ಜನರನ್ನು ಗುರುತಿಸಿ ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಎನ್‍ಡಿಆರ್‌ಎಫ್‌ ಇನ್ಸ್ಪೆಕ್ಟರ್ ಶಾಂತಿಲಾಲ್ ಜಾಟಿಯಾ ಮತನಾಡಿ, 24 ಸಿಬ್ಬಂದಿಗಳನ್ನು ಒಳಗೊಂಡ ತಂಡವಿದ್ದು ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಕೂಡಲೇ ಸ್ಪಂದಿಸಲಾಗುವುದು. ದಿನದ 24 ಗಂಟೆಗಳಲ್ಲೂ ಲಭ್ಯವಿರುವುದಾಗಿ ಹೇಳಿದರು.

ಸೆಸ್ಕ್ ಎಂಜಿನಿಯರ್ ವಿನಯ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ತಹಶೀಲ್ದಾರ್ ಪ್ರಕಾಶ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಪಿಡಿಒಗಳು ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...