ವಿ.ಐ.ಪಿ. ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ : ಡಾ|| ಎಂ ಎ ಸಲೀಂ ಪೊಲೀಸ್ ಮಹಾ ನಿರ್ದೇಶಕರು

Date:

ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ.

ಇದಲ್ಲದೆ, ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ.

ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001939418

ವಿಐಪಿ ಸಂಚಾರದ ವೇಳೆ, ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್‌ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ.

ಸೈರನ್‌ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು.ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ /ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ, ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಘಟಕಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...