ಚಿಕ್ಕಬಳ್ಳಾಪುರ | ಅಪಘಾತ; ಆವಲಗುರ್ಕಿಯ ಮೂವರು ವಿದ್ಯಾರ್ಥಿಗಳು ಸಾವು

Date:

ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ 6.45ರ ಸುಮಾರಿಗೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ ನಿತೀಶ್‌(18), ನಿತಿನ್‌(17) ಮತ್ತು ವೈಭವ್‌(16) ಮೃತ ವಿದ್ಯಾರ್ಥಿಗಳು. ನಿತೀಶ್‌, ನಿತಿನ್‌ ಬಿಜಿಎಸ್‌ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ವೈಭವ್‌ ಗುಡ್‌ ಶೆಫರ್ಡ್‌ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ.

ಈ ಮೂವರು ವಿದ್ಯಾರ್ಥಿಗಳು ಒಂದೇ ಊರಿನವರಾಗಿದ್ದು, ಬುಧವಾರ ಸಂಜೆ ಟ್ಯೂಷನ್‌ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಆವಲಗುರ್ಕಿಗೆ ತೆರಳುವ ಗೇರಹಳ್ಳಿ ಬಳಿ ರಸ್ತೆಯಲ್ಲಿ ಜೆಸಿಬಿಯೊಂದು ಪಂಕ್ಚರ್‌ ಆಗಿ ನಿಂತಿದ್ದು, ಜೆಸಿಬಿ ಚಕ್ರವನ್ನು ತೆಗೆದುಕೊಂಡು ಟ್ರ್ಯಾಕ್ಟರ್‌ ಬಂದಿತ್ತು. ಈ ವೇಳೆ ರಸ್ತೆಯಲ್ಲೇ ನಿಂತಿದ್ದ ಟ್ರ್ಯಾಕ್ಟರ್‌ ಯಾವುದೇ ಇಂಡಿಕೇಟರ್‌ ಹಾಕಿರಲಿಲ್ಲ. ಕತ್ತಲಾಗಿದ್ದ ಹಿನ್ನೆಲೆ ಟ್ರ್ಯಾಕ್ಟರ್‌ ನಿಲ್ಲಿಸಿರುವುದು ಕಾಣಿಸುತ್ತಿರಲಿಲ್ಲ. ಇದೇ ವೇಳೆ ಬೈಕ್‌ನಲ್ಲಿ ಬಂದ ವಿದ್ಯಾರ್ಥಿಗಳು ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದಿದ್ದು, ಧಾರುಣ ಅಂತ್ಯ ಕಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...